fbpx
News

ರಾಜ್ಯಕ್ಕೆ ಮತ್ತೆ ಆಘಾತ: ನಾಳೆಯಿಂದ ಮತ್ತೆ 36 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಿ ಎಂದು ಸುಪ್ರೀಂ ಆದೇಶ

ರಾಜ್ಯಕ್ಕೆ ಕಾವೇರಿ ವಿವಾದ ಸಂಬಂಧಿಸಿದಂತೆ ರಾಜ್ಯಕ್ಕೆ ಮತ್ತೊಂದು ಆಘಾತವಾಗಿದ್ದು, ನಾಳೆಯಿಂದ 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ಆದೇಶಿಸಿದೆ.

ನ್ಯಾ.ದೀಪಕ್ ಮಿಶ್ರಾ ಹಾಗೂ ನ್ಯಾ.ಉದಯ್ ಲಲಿತ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ತೀರ್ಪು ನೀಡಿದೆ. ನ್ಯಾಯಾಲಯದ ಘನತೆಗೆ ಕರ್ನಾಟಕದಿಂದ ಧಕ್ಕೆಯಾಗಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಎಲ್ಲಾ ರಾಜ್ಯಗಳು ಪಾಲಿಸಬೇಕು. 6 ದಿನ ನಿತ್ಯ 6 ಸಾವಿರ ಕ್ಯೂಸೆಕ್ ನಂತೆ ಒಟ್ಟು 36 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಮೂರು ದಿನದೊಳಗೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದ್ದು, ನಾಳೆ ಸಂಜೆ 4ಗಂಟೆಯೊಳಗೆ ಮಂಡಳಿಯ ಪ್ರತಿನಿಧಿಗಳ ಮಾಹಿತಿ ನಮಗೆ ಕೊಡಿ ಎಂದು ಕೋರ್ಟ್ ಸೂಚಿಸಿ, ವಿಚಾರಣೆಯನ್ನು ಅಕ್ಟೋಬರ್ 6ಕ್ಕೆ ಮುಂದೂಡಿದೆ.

ಇನ್ಮುಂದೆ ನಾನು ಕಾವೇರಿ ವಿವಾದದ ವಾದ ಮಾಡೋಲ್ಲ ಎಂದ ಕರ್ನಾಟಕದ ಪರ ವಕಾಲತ್ತು ಮಾಡಿದ ನಾರಿಮನ್.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top