fbpx
Awareness

‘ಸೈಟ್’ ಕೊಳ್ಳಲು ಈ ವಾಸ್ತು ಟಿಪ್ಸ್ follow ಮಾಡಿ… ಇಲ್ಲವಾದಲ್ಲಿ ತೊಂದ್ರೆ ಗ್ಯಾರಂಟಿ

ಪ್ರತಿಯೊಬ್ಬ ಮನುಷ್ಯನ ಹಲವು ಗುರಿಗಳಲ್ಲಿ ಸೂರು ಕಟ್ಟಿಕೊಳ್ಳುವುದು ಕೂಡ ಒಂದು. ಪಾಪ ಕಷ್ಟ ಪಟ್ಟು ಸೈಟ್ ಕೊಂಡು ಮನೆ ಕಟ್ಟಿದ ಮೇಲೆ ಇನ್ನೇನು ಒಳ್ಳೆಯ ಜೀವನ ಸಾಗಿಸಬಹುದು ಎಂದುಕೊಳ್ಳುತ್ತಿರುವ ಹೊತ್ತಿನಲ್ಲೇ ಏನಾದರೊಂದು ಕಷ್ಟ ಬಂದೊದಗುತ್ತದೆ. ಅದಕೆಲ್ಲಾ ಕಾರಣ ಏನೇ ಇದ್ದರೂ ಮನೆ ಕಟ್ಟಿದ ಸೈಟ್ ಕೂಡ ಕಾರಣವಿರಬಹುದು ಎನ್ನುವುದನ್ನು ಮರೆಯಬಾರದು…

1419838370houseplan

ನಿಮ್ಮ ಫ್ಲಾಟ್ ಕಟ್ಟಲು ಇರುವ ಸೈಟ್ ಹೇಗೆ ಇರಬೇಕು ಎನ್ನುವುದನ್ನು ತಿಳಿದುಕೊಳ್ಳಿ :

 

  • ಉತ್ತರ ಮತ್ತು ಪೂರ್ವದತ್ತ ಇಳಿಜಾರು ಇರಬೇಕಾದುದು ವಾಸ್ತು ಸಿದ್ಧಿಗೆ ಸೂಕ್ತ. ಇದರಿಂದಾಗಿ ನೀರಿನ ಹರಿತ ಪಶ್ಚಿಮದಿಂದ ಪೂರ್ವಕ್ಕೂ ದಕ್ಷಿಣದಿಂದ ಉತ್ತರಕ್ಕೂ ಅವಕಾಶ ಒದಗಿಬರುತ್ತದೆ.

 

  • ಯಾವಾಗಲೂ ತುಸು ತಗ್ಗಿದ ಈಶಾನ್ಯ ಮೂಲೆ ತುಸು ಎತ್ತರಿಸಲ್ಪಟ್ಟ ನೈರುತ್ಯ ಮೂಲೆ ಎಲ್ಲಾ ವಿಚಾರಗಳಲ್ಲಿ ಯಶಸಿಗೆ ದಾರಿ ನಿರ್ಮಿಸುತ್ತದೆ. ದೀರ್ಘಾಯಸ್ಸು ಕೂಡಾ ಕೂಡಿ ಬರಲು ಇದು ಸಹಾಯಕ.

 

  • ಇಡಿಯಾದ ಪಶ್ಚಿಮ ದಿಕ್ಕು ಎತ್ತರವೂ, ಇಡಿಯಾದ ಪೂರ್ವ ದಿಕ್ಕು ತಗ್ಗಿಕೊಂಡಿದ್ದು ಇದ್ದುದಾದರೆ ಇಂಥ ಫ್ಲಾಟಿನಲ್ಲಿ ಕಟ್ಟಿದ ಮನೆಯಲ್ಲಿ ವಾಸಿಸುವ ಜನರಿಗೆ ಸಾಮಾಜಿಕವಾದ ಮನ್ನಣೆ ಧನವೃದ್ಧಿಯು ಉತ್ತಮ ರೀತಿಯಲ್ಲಿ ಲಭ್ಯವಾಗುತ್ತದೆ.

 

  • ಮನೆಯ ಮಧ್ಯದ ಸ್ಥಳವು ತುಸು ಏರಿಕೊಂಡಿದ್ದು ವಿಕಸನ ಪಡೆದಿದ್ದರೆ ಇದಕ್ಕೆ ಕೂರ್ಮ ವೃದ್ಧಿ ಎನ್ನುತ್ತಾರೆ. ಇದರಿಂದಾಗಿ ಮನೆಯ ಫ್ಲಾಟ್‌ ತುಂಬಾ ಸಂಪನ್ನತೆಯನ್ನು ಪಡೆದು ಶ್ರೇಷ್ಠತ್ವಕೆ ಒಯ್ಯುವ ಸಾಧನವಾಗುತ್ತದೆ. ಇಂಥ ರೀತಿಯ ಮನೆಯಲ್ಲಿನ ವಾಸವು ವಸತಿಗಾರರ ಸುಖ, ಕ್ಷೇಮ, ಲಾಭ, ಜಯ, ಸಿರಿಗೆ ಸಿದ್ಧಿಗೆ ಅಂಶವಾಗಿದೆ.

 

  • ಫ್ಲಾಟ್‌ಗೆ ಈಶಾನ್ಯದ ಕಡೆ ತುಸು ಬೆಸೆದುಕೊಂಡಿದ್ದರೆ ಇಂಥ ಫ್ಲಾಟ್‌ ನಲ್ಲಿ ಕಟ್ಟಿದ ಮನೆಯಿಂದ ಉತ್ತಮ ಫ‌ಲ ಸಮೃದ್ಧಿಗಳು ಲಭ್ಯವಾಗುವುವು.

 

  • ದಕ್ಷಿಣ, ಪಶ್ಚಿಮ, ಉತ್ತರ, ಪಶ್ಚಿಮ, ದಕ್ಷಿಣ, ಪೂರ್ವ ದಿಕ್ಕುಗಳು ಸರಿಯಾಗಿ ಲಂಬಕೋನಗಳಲ್ಲಿದ್ದರೆ ಕೂಡಾ ಇಲ್ಲಿನ ಮನೆಗಳು ಸಕಾರಾತ್ಮಕ ಗುಣ ಪಡೆಯುತ್ತದೆ ಅನುಮಾನವಿಲ್ಲ.

 

  • ಆಗ್ನೇಯ ದಿಕ್ಕಿಗೆ ಫ್ಲಾಟಿನ ಬೆಳವಣಿಗೆ ಮನೆ ಕಟ್ಟಲು ಉತ್ತಮವಾಗಿರದು.

 

  • ವಾಯುವ್ಯ ದಿಕ್ಕಿಗೂ ಫ್ಲಾಟ್‌ ಬೆಳೆಯಕೂಡದು. ಇಲ್ಲಿ ಮನೆಯ ಕಟ್ಟುವಿಕೆ ಉತ್ತಮ ಫ‌ಲಾವಳಿಗೆ ಪೂರಕವಾಗಿರುವುದಿಲ್ಲ.

 

  • ನೈರುತ್ಯದ ಕಡೆಯ ದೀರ್ಘ‌ತೆ ಫ್ಲಾಟ್‌ ಗಳಿಗೆ ಉಚಿತವಾದುದಲ್ಲ.

 

ದಯಮಾಡಿ ಗಮನಿಸಿ. ಈ ರೀತಿಯಲ್ಲಿ ವಾಸ್ತುವಿನ ಕುರಿತಾದ ಕೆಲವು ಅಂಶಗಳನ್ನು ಕಡೆಗಣಿಸದೆಯೇ ಪುರಸ್ಕರಿಸಿದರೆ ಒಳ್ಳೆಯದು. ಹೆಚ್ಚಾಗಿ ಜಾತಕದ ದಶಾಕಾಲ ಸರಿ ಇರದಿರುವಾಗ, ಶನಿಕಾಟದ ಕೇಮದ್ರುಮಯೋಗದ ನಕಾರಾತ್ಮಕ ದಿನಗಳಲ್ಲಿ ವಾಸ್ತುವಿನ ಶಿಸ್ತು ಬದ್ಧತೆ ಮನೆಯನ್ನು ಪುಷ್ಟೀಕರಿಸಿದ್ದರೆ ಗ್ರಹಗಳ ದೌರ್ಬಲ್ಯವನ್ನು ನಿಯಂತ್ರಿಸುವ ಶಕ್ತಿ ಒದಗಿಬರುತ್ತದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top