fbpx
ಸಮಾಚಾರ

ಕನ್ನಡದ ಹಿರಿಯ ಪೋಷಕ ನಟ ಲಂಬು ನಾಗೇಶ್ ನಿಧನ..!

ಕನ್ನಡದ ಹಿರಿಯ ಪೋಷಕ ನಟ ‘ಲಂಬು ನಾಗೇಶ್’ ನಿಧನ..!

 

ಕನ್ನಡ ಚಿತ್ರರಂಗದಲ್ಲಿ ಲಂಬು ನಾಗೇಶ್ ಎಂದೇ ಪ್ರಸಿದ್ದರಾಗಿದ್ದ ಪೋಷಕ ನಟ ನಾಗೇಶ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಾಗೇಶ್ ನೆನ್ನೆ ರಾತ್ರಿ 8 ಗಂಟೆ ಸುಮಾರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತಮ್ಮ ಕೊನೆಯುಸಿರೆಳೆದಿದ್ದಾರೆ. ಬಹು ಅಂಗಾಂಗ ವೈಫಲ್ಯಕ್ಕೆ ಬಳಲುತ್ತಿದ್ದ ನಾಗೇಶ್‌, ಕಳೆದ ಐದು ದಿನಗಳಿಂದ ಬೆಂಗಳೂರಿನ ಎಮ್‌.ಎಸ್‌.ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

 

 

1992 ರಲ್ಲಿ ರಿಲೀಸ್ ಆದ ‘ಪೃಥ್ವಿರಾಜ್’ ಸಿನಿಮಾದ ಮೂಲಕ ಮೊದಲ ಬಾರಿಗೆ ಸಿನಿಮಾದಲ್ಲಿ ನಟನೆ ಮಾಡಿದ್ದ ನಾಗೇಶ್ ಚಿತ್ರರಂಗದಲ್ಲಿ ಲಂಬು ನಾಗೇಶ್ ಅಂತಲೇ ಪ್ರಸಿದ್ಧರಾಗಿದ್ದರು. ಕನ್ನಡಲ್ಲಿ ಸುಮಾರು 100ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದ ನಾಗೇಶ್ ಅವರು ದೇವರಾಜ್ ಅಭಿನಯದ ‘ಹುಲಿಯಾ’, ಸಾಯಿಕುಮಾರ್ ನಟನೆಯ ‘ಪೋಲೀಸ್ ಸ್ಟೋರಿ-2’ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಲಂಬು ನಾಗೇಶ್ ನಟಿಸಿದ್ದರು.

 

 

ಕೇವಲ ಸಿನಿಮಾಗಳಲ್ಲಿ ಮಾತ್ರವಲ್ಲದೇ ಕನ್ನಡದ 50ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ಲಂಬು ನಾಗೇಶ್ ನಟಿಸಿದ್ದರು, ಇತ್ತೀಚೆಗೆ ಪ್ರಸಾರ ವಾಗುತ್ತಿದ್ದ ಅಶ್ವಿನಿ ನಕ್ಷತ್ರ, ಹಾಗೂ ದುರ್ಗಾ ಧಾರಾವಾಹಿಗಳಲ್ಲೂ ನಾಗೇಶ್ ನಟಿಸಿದ್ದರು. ಬೆಂಗಳೂರಿನ ಬನಶಂಕರಿಯಲ್ಲಿ ಇವತ್ತು ಲಂಬು ನಾಗೇಶ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top