fbpx
ಮನೋರಂಜನೆ

ಜೆಡಿಎಸ್ ಪಕ್ಷಕ್ಕೆ ನಟ ಸುದೀಪ್ ಸೇರಿಕೊಳ್ಳುವುದರ ಬಗ್ಗೆ ಮಾತನಾಡಿದ ಹೆಚ್.ಡಿ.ದೇವೇಗೌಡ..!

ಜೆಡಿಎಸ್ ಪಕ್ಷಕ್ಕೆ ನಟ ಸುದೀಪ್ ಸೇರಿಕೊಳ್ಳುವುದರ ಬಗ್ಗೆ ಮಾತನಾಡಿದ ಹೆಚ್.ಡಿ.ದೇವೇಗೌಡ..!

 

 

ಇಡೀ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿಯೇರಿಸಿಕೊಂಡಿದೆ. ಇಂಥಾ ವಾತಾವರಣದಲ್ಲಿ ರಾಜಕೀಯ ವಲಯದಲ್ಲಿ ಬಿರುಸಿನ ವಾತಾವರಣ ಇರೋದು ಸಹಜವೇ. ಆದರೆ ಈ ಸಲ ಚಿತ್ರರಂಗದಲ್ಲಿಯೂ ಚುನಾವಣಾ ಪ್ರಭಾವ ಬಲು ಜೋರಾಗಿದೆ. ಆ ಸ್ಟಾರ್ ರಾಜಕೀಯಕ್ಕಿಳೀತಾರೆ, ಮತ್ಯಾರಿಗೋ ಟಿಕೆಟು ಪಕ್ಕಾ ಆಗಿದೆ ಎಂಬೆಲ್ಲ ರೂಮರ್ ಮಾಮೂಲಿ. ಆದರೆ ಈ ಸಲ ಈ ರೇಸಿನಲ್ಲಿ ಕಿಚ್ಚಾ ಸುದೀಪ್ ಅವರ ಹೆಸರೂ ಚಾಲ್ತಿಯಲ್ಲಿರೋದು ನಿಜವಾದ ವಿಶೇಷ!

 

 

ಸುದೀಪ್ ರಾಜಕೀಯಕ್ಕೆ ಬರುತ್ತಾರೆಂಬ ಅಂತೆ ಕಂತೆಯಾಗಲಿ, ಅವರನ್ನು ಸೆಳೆದುಕೊಳ್ಳಲು ಚುನಾವಣಾ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಒಳಗೊಳಗೇ ಕಸರತ್ತು ನಡೆಸೋದಾಗಲಿ ಹೊಸದೇನೂ ಅಲ್ಲ. ಆದರೆ ಒಂದು ಮೂಲದ ಪ್ರಕಾರ ಈ ಸಲ ರಾಜಕೀಯಕ್ಕೆ ಅಡಿಯಿರಿಸಲು ತೀರ್ಮಾನ ಮಾಡಿಕೊಂಡಿರೋ ಸುದೀಪ್ ಅದಕ್ಕಾಗಿ ತಯಾರಾಗಲಾರಂಭಿಸಿದ್ದಾರಂತೆ! ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ.

 

 

ಕುಮಾರಸ್ವಾಮಿಯವರು ತಮ್ಮ ಹುಟ್ಟುಹಬ್ಬದಂದು ಸುದೀಪ್ ಅವರ ಮನೆಗೆ ಹೋಗಿ ಅವರ ಜೊತೆ ಸುಮಾರು ಎರಡು ಗಂಟೆಗಳ ಕಾಲ ಮಾತನಾಡಿಕೊಂಡು ಬಂದಿದ್ದರು. ಸುದೀಪ್ ಮತ್ತು ಕುಮಾರಸ್ವಾಮಿ ಭೇಟಿ ಆಗುತ್ತಿದ್ದಂತೆ ಸುದೀಪ್ ಅವರು ಜೆಡಿಎಸ್ ಪಕ್ಷಕ್ಕೆ ಸೇರಿಕೊಳ್ಳುತ್ತಾರೆ ಎಂಬ ಮಾತು ಕೂಡ ಕೇಳಿಬರುತ್ತಿತ್ತು. ಇದೀಗ ಈ ಸುದ್ದಿಗೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಮಾತನಾಡಿದ್ದಾರೆ.

 

 

“ಸುದೀಪ್ ಅವರೊಂದಿಗೆ ಕುಮಾರಸ್ವಾಮಿ ಮಾತನಾಡಿದ್ದಾರೆ. ಆದರೆ ಈ ಬಗ್ಗೆ ಸುದೀಪ್ ಅವರು ಏನು ತೀರ್ಮಾನ ತೆಗೆದುಕೊಂಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ., ನಾನು ಯಾರ ವ್ಯಕ್ತಿತ್ವದ ಬಗ್ಗೆ ಎಂದೂ ಹಗುರವಾಗಿ ಮಾತಾಡೋದಿಲ್ಲ ಅವರಿಗೆ ಅವರದ್ದೇ ಆದ ಗೌರವ ಇರುತ್ತದೆ. ಆದರೆ ಸುದೀಪ್ ಅವರೊಂದಿಗೆ ಕುಮಾರಸ್ವಾಮಿ ಮಾತನಾಡಿರೋದು ಮಾತ್ರ ಸತ್ಯ” ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ. ದೇವೇಗೌಡ ಅವರು ಹೇಳಿದ್ದಾರೆ.

 

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top