ಉಪ್ಪಯುತ್ತ ಮಾಹಿತಿ

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ

ಮನೆಯಲ್ಲಿ ಸುಲಭವಾಗಿ ಸಿಗುವ ದಾಸವಾಳದ ಹೂ ನಿಮ್ಮ ಕೂದಲಿಗೆ ಹೇಳಿ ಮಾಡಿಸಿದ ಔಷಧ

ಸೌಂದರ್ಯವರ್ಧಕ, ಔಷಧ ಹಾಗೂ ನೈಸರ್ಗಿಕ ಬಣ್ಣಗಳ ತಯಾರಿಕೆಯಲ್ಲಿ  ದಾಸವಾಳದಷ್ಟು ಹೆಚ್ಚು ಬಳಕೆಯಾಗುವ ಬಹೂಪಯೋಗಿ ಹೂವು ಇನ್ನೊಂದಿಲ್ಲ ಎಂದರೆ ಉತ್ಪ್ರೇಕ್ಷೆಯಾಗದು. ನೋಡಿ, ಈ ಹೂವಿನ ಬಳಕೆ ಎಷ್ಟೆಂದು…!

Related image

*ಮಹಿಳೆಯರ ಸೌಂದರ್ಯಕ್ಕೆ ಇಂಬು ಕೊಡುವ ತಲೆಗೂದಲು ಬೆಳೆವಣಿಗೆಯಲ್ಲಿ ದಾಸವಾಳ ಹೂವು ಮುಖ್ಯ ಪಾತ್ರ ವಹಿಸುತ್ತದೆ. ತಲೆಹೊಟ್ಟು ನಿವಾರಿಸಿ, ಇದು ಕೂದಲಿಗೆ ಕಪ್ಪು ಬಣ್ಣ ನೀಡುತ್ತದೆ.

*ಹೂವಿನಲ್ಲಿರುವ ನೈಸರ್ಗಿಕ ತೈಲ ಅತ್ಯುತ್ತಮ ಕಂಡೀಷನರ್.

Image result for dasavala flower benefits

*ಹೂವು ಹಾಗೂ ಎಲೆಗಳನ್ನು ಒಣಗಿಸಿ, ಸುಟ್ಟ ಬಳಿಕ ಸಿಗುವ ಬೂದಿಯನ್ನು ಹಚ್ಚಿದರೆ, ಕಣ್ಣಹುಬ್ಬುಗಳು ಹೊಳಪು ಪಡೆಯುತ್ತವೆ.

Image result for dasavala flower benefits

* ಕೂದಲು ಉದುರುವುದನ್ನು ತಡೆಯುವ ಉತ್ತಮ ಮನೆ ಮದ್ದು ಇದಾಗಿದೆ. ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ, ಆ ಎಣ್ಣೆಯನ್ನು ಬಳಸಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

Related image

*ಕೂದಲು ಉದುರುವುದನ್ನು ತಡೆಯುವುದು ಮಾತ್ರವಲ್ಲ, ಪ್ರತೀದಿನ ಈ ಎಣ್ಣೆ ಹಚ್ಚಿದರೆ ಕಪ್ಪಾದ ಕೂದಲಿನ ಸೌಂದರ್ಯ ನಿಮ್ಮದಾಗುವುದು.

*ದಾಸವಾಳ-ಈರುಳ್ಳಿ : ದಾಸವಾಳದ ರಸ, ಈರುಳ್ಳಿ ರಸವನ್ನು ಸಮ ಪ್ರಮಾಣದಲ್ಲಿ ಬೆರೆಸಿ ಕೂದಲಿಗೆ ಹಚ್ಚಿಕೊಳ್ಳಿ. ಸ್ವಲ್ಪ ಸಮಯದ ನಂತ್ರ ತೊಳೆಯಿರಿ.

Image result for dasavala flower benefits

*ದಾಸವಾಳ–ನೆಲ್ಲಿ : ದಾಸವಾಳ ಹಾಗೂ ನೆಲ್ಲಿ ರಸವನ್ನು ಬೆರೆಸಿ ತಲೆಗೆ ಹಚ್ಚಿಕೊಳ್ಳಿ. ಇದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ.

Image result for dasavala flower benefits

*ದಾಸವಾಳ ಹಾಗೂ ಆಲಿವ್ ಆಯ್ಲ್ : ಇದನ್ನು ಶಾಂಪೂ ರೀತಿಯಲ್ಲಿಯೂ ಬಳಸಬಹುದು. ದಾಸವಾಳದ ಎಲೆ ಹಾಗೂ ಹೂವನ್ನು ಮಿಶ್ರಮಾಡಿ ಅದಕ್ಕೆ ಸ್ವಲ್ಪ ಹನಿ ಆಲಿವ್ ಆಯಿಲ್ ಮಿಕ್ಸ್ ಮಾಡಿ ಬಳಸಿ.

Related image

*ದಾಸವಾಳ-ಕರಿಬೇವು : ದಾಸವಾಳ ಹಾಗೂ ಕರಿಬೇವಿನ ಎಲೆಯ ರಸಕ್ಕೆ ಸ್ವಲ್ಪ ತೆಂಗಿನ ಎಣ್ಣೆಯನ್ನು ಸೇರಿಸಿ ಕೂದಲಿಗೆ ಹಚ್ಚಿಕೊಳ್ಳಿ.

Image result for dasavala flower benefits

*ದಾಸವಾಳ –ಮೆಂತ್ಯೆ : ಮೆಂತ್ಯೆಯನ್ನು ರಾತ್ರಿ ಪೂರ್ತಿ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಮೆಂತ್ಯೆ ಜೊತೆ ದಾಸವಾಳ ಸೇರಿಸಿ ಮಿಕ್ಸಿ ಮಾಡಿ. ಇದನ್ನು ಕೂದಲಿನ ಬುಡಕ್ಕೆ ಸರಿಯಾಗಿ ಹಚ್ಚಿಕೊಂಡು ಒಂದು ಗಂಟೆ ಬಿಟ್ಟು ಸ್ನಾನ ಮಾಡಿ. ಈ ಮಿಶ್ರಣದಿಂದ ಕೂದಲು ಹೊಳಪು ಪಡೆಯುವ ಜೊತೆಗೆ ಕೂದಲು ಉದುರುವುದು ಕಡಿಮೆಯಾಗುತ್ತದೆ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top