ಕಿರುತೆರೆ

ಬೆಂಕಿ ಅವಘಡ: ಬೆಳ್ಳಂಬೆಳಗ್ಗೆ ಧಗ ಧಗನೆ ಹೊತ್ತಿ ಉರಿದ ಬಿಗ್ ಬಾಸ್ ಮನೆ..

ಬೆಂಗಳೂರು ಹೊರವಲಯದಲ್ಲಿರುವ ಬಿಡದಿ ಬಳಿ ಇರುವ ಇನ್ನೋವೇಟಿವ್ ಫಿಲ್ಮ್ ಸಿಟಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಕನ್ನಡ ಬಿಗ್ ಬಾಸ್ ಕಾರ್ಯಕ್ರಮ ನಡೆದ ಮನೆ ಬೆಂಕಿಗೆ ಆಹುತಿಯಾಗಿದೆ. ಇಂದು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ‌ ನಂದಿಸುವ ಕಾರ್ಯ ನಡೆಯುತ್ತಿದೆ.

 

ಇನ್ನೋವೇಟಿವ್ ಫಿಲ್ಮ್ ಸಿಟಿಯ ಆವರಣದಲ್ಲಿರುವ ಮೇಣದ ಮ್ಯೂಸಿಯಂನಲ್ಲಿ ಮೊದಲಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ರಮೇಣ ಇದಕ್ಕೆ ಹೊಂದಿಕೊಂಡಿರುವ ಕನ್ನಡದ ಬಿಗ್ ಬಾಸ್ ಮನೆಗೂ ಬೆಂಕಿ ಹೊತ್ತಿದೆ ಎಂದು ತಿಳಿದುಬಂದಿದೆ.

 

 

ಬೆಂಕಿಯನ್ನು ಆರಿಸಲು ಅಗ್ನಿಶಾಮಕ ದಳದ ಸಿಬ್ಬಂದಿ ಹರಸಾಹಸ ನಡೆಸಿದ್ದು, ಸುಮಾರು 10ಕ್ಕೂ ಹೆಚ್ಚು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ., ಮೇಲ್ನೋಟಕ್ಕೆ ಬೆಂಕಿ ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಮೂಲ ಕಾರಣ ಎಂದು ಹೇಳಲಾಗುತ್ತಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿರುವ ಬಿಡದಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top