ರಾಜಕೀಯ

ನಾವು ಕಿಂಗ್ ಮೇಕರ್ ಅಲ್ಲ, ನಾವೇ ಕಿಂಗ್- ಸಮೀಕ್ಷೆ ವಿರುದ್ಧ ಕುಮಾರಸ್ವಾಮಿ ಆಕ್ರೋಶ

ಇಂಡಿಯಾ ಟುಡೆ ಸಮೀಕ್ಷೆ ಪ್ರಕಟವಾಗಿದ್ದು ಇದರಲ್ಲಿ ಯಾರಿದು ಸ್ಪಷ್ಟ ಬಹುಮತ ಸಿಕ್ಕಿಲ್ಲ, ಈ ಸಮೀಕ್ಷೆ ಪ್ರಕಾರ ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ. ಇದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕುಮಾರಸ್ವಾಮಿ ಈ ಸಮೀಕ್ಷೆ ಏಕೆ ಮಾಡಿಸಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಅವರ ಪಾತ್ರ ಇದರಲ್ಲಿ ಎಷ್ಟಿದೆ ಎನ್ನುವ ಮಾಹಿತಿ ನಂಗೆ ಗೂತ್ತಿದೆ ಎಂದು ಜೆಎಡಿಎಸ್ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

 

 

ಎಲ್ಲ ಕ್ಷೇತ್ರದಲ್ಲಿ ಕಾಂಗ್ರೆಸ್, ಬಿಜೆಪಿ ಟಿಕೆಟ್ ಇನ್ನು ಘೋಷಣೆಯಾಗದೆ ಸಮೀಕ್ಷೆ ನಡೆಸಲು ಹೇಗೆ ಸಾಧ್ಯ? ಎಂದು ಪ್ರಶೆ ಮಾಡಿದ ಅವರು, ಸಮೀಕ್ಷೆ ಉಲ್ಟಾ ಪಲ್ಟಾ ಆಗುವುದು ಖಚಿತ. ಜೆಡಿಎಸ್ ಕಿಂಗ್ ಮೇಕರ್ ಅಲ್ಲಾ, ಕಿಂಗ್ ಆಗುತ್ತದೆ. ಸರ್ವೆಯಲ್ಲಿ ಮೂರನೇ ಸ್ಥಾನದಲ್ಲಿರುವ ನಾವು, ಮೊದಲನೇ ಸ್ಥಾನಕ್ಕೆ ಬರುವುದು ಖಚಿತ ಎಂದು ಹೇಳಿದ್ದಾರೆ.

 

 

ಮುಖ್ಯಮಂತ್ರಿ ಸಿದ್ದರಾಮಯ್ಯ ರಾಮನಗರ ಮತ್ತು ಚನ್ನಪಟ್ಟಣದಲ್ಲಿ ಒಂದು ತಿಂಗಳು ಪ್ರಚಾರ ಮಾಡಲಿ. ಆ ಎರಡು ಕ್ಷೇತ್ರಗಳಿಗೆ ನಾನು ಪ್ರಚಾರ ಮಾಡುವುದಿಲ್ಲ. ಅವರೇನು ಮಾಡುತ್ತಾರೆ ಮಾಡಿಕೊಳ್ಳಲಿ. ಅಲ್ಲಿ ನಾನೇ ಗೆಲ್ಲೋದು ಎಂದು ಸಿದ್ದರಾಮಯ್ಯ ಅವರಿಗೆ ಎಚ್‍ಡಿಕೆ ಸವಾಲು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top