ರಾಜಕೀಯ

ಕಾಂಗ್ರೆಸ್ ಬಂಡಾಯಕ್ಕೆ ಬಿಜೆಪಿ ಗಾಳ? ಬದಲಾಯ್ತು ಬಿಜೆಪಿ ಗೇಮ್ ಪ್ಲಾನ್

ನಿನ್ನೆ ರಾತ್ರಿ ಅಳೆದು ತೂಗಿ ಕೊನೆಗೂ ಕಾಂಗ್ರೆಸ್ ಕೊನೆಗೂ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ ಮಾಡಿದೆ. ನಿನ್ನೆ ಬಿಡುಗಡೆ ಆದ ಪಟ್ಟಿಯಲ್ಲಿ 224 ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ 5 ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಕಡೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹೆಸರು ಬಿಡುಗಡೆ ಆಗಿದೆ. ಆದ್ರೆ ಕಾಂಗ್ರೆಸ್ ಗೆ ಕೆಲವೆಡೆ ಬಂಡಾಯದ ಬಿಸಿ ತಟ್ಟಿದೆ ಎಂದು ಹೇಳಲಾಗುತ್ತಿದೆ.

 

 

ಕಾಂಗ್ರೆಸ್ ಬಂಡಾಯದ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಪೊಲಿಟಿಕಲ್ ಗೇಮ್ ಪ್ಲಾನ್ ಬದಲಾಯಿದೆ ಎಂದು ತಿಳಿದು ಬಂದಿದೆ. ರವಿವಾರ ರಾತ್ರಿಯೇ ಬಿಜೆಪಿ ಎರಡನೇ ಪಟ್ಟಿ ಬಿಡುಗಡೆ ಆಗಬೇಕಿತ್ತು. ಆದರೆ ಕಾಂಗ್ರೆಸ್ ಪಟ್ಟಿ ಬಿಡುಗಡೆ ಹಿನ್ನೆಲೆಯಲ್ಲಿ ಹೊಸ ದಾಳ ಉರುಳಿಸಲು ಬಿಜೆಪಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಾಂಗ್ರೆಸ್ ಬಂಡಾಯದ ರಾಜಕೀಯ ಲಾಭವನ್ನು ಬಿಜೆಪಿ ಪಡೆಯುವ ಸಾಧ್ಯತೆ ಇದೆ ಎನ್ನಲ್ಲಾಗಿದೆ.

 

 

ಇಂದಿನ ಕಾಂಗ್ರೆಸ್ ಬೆಳವಣಿಗೆ ಆಧರಿಸಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಹಿನ್ನಲೆಯಲ್ಲಿ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದೆ, ಎಲ್ಲಾ ಅಭ್ಯರ್ಥಿಗಳನ್ನು ಅಂತಿಮ ಮಾಡುವ ಸಾಧ್ಯತೆ ಇದೆ. ಬಿಜೆಪಿ ರಾಷ್ಟಾಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಆಗಮಸಲಿದ್ದಾರೆ. ಮೂರೂ ದಿನ ಇಲ್ಲೇ ವಾಸ್ತವ್ಯ ಹೂಡುವ ಮೂಲಕ ರಣತಂತ್ರ ರೂಪಿಸಲಿದ್ದಾರೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top