fbpx
ರಾಜಕೀಯ

ಕಾಂಗ್ರೆಸ್ ಪ್ರಣಾಳಿಕೆ ರಿಲೀಸ್, ಪ್ರಮುಖ ಅಂಶಗಳು ಇಲ್ಲಿವೆ

ಇಂದು ಮಂಗಳೂರಿನ ಟಿಎಂಎ ಪೈ ಸಭಾಂಗಣದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಾ. ಜಿ. ಪರಮೇಶ್ವರ್, ಸಿಎಂ ಸಿದ್ದರಾಮಯ್ಯ, ಲೋಕಸಭೆಯಲ್ಲಿನ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಇಂಧನ ಸಚಿವರಾದ ಡಿ.ಕೆ. ಶಿವಕುಮಾರ್, ಹಿರಿಯ ಕಾಂಗ್ರೆಸಿಗ ಹಾಗೂ ಕೇಂದ್ರದ ಮಾಜಿ ಸಚಿವರಾದ ಜನಾರ್ಧನ ಪೂಜಾರಿ, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ ಅವರು ಸೇರಿದಂತೆ ರಾಜ್ಯ ಸರ್ಕಾರದ ಹಲವು ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಂಡಿದ್ದರು.

ಕೃಷಿ, ಶಿಕ್ಷಣ ಕ್ರೀಡೆ, ಸಾಮಾಜಿಕ ನ್ಯಾಯ, ಇಂಧನ ಸೇರಿದಂತೆ 16 ಕ್ಷೇತ್ರಗಳನ್ನು ಉಲ್ಲೇಖಿಸಿ ಪ್ರಣಾಳಿಕೆ ಸಿದ್ದಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

 

 

ಕಾಂಗ್ರೆಸ್ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು ಈ ಕೆಳಗಿನಂತಿವೆ:

1. ಪ್ರತಿ ಮೂರು ಜಿಲ್ಲೆಗೆ ಒಂದು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ.
2. ಮುಂದಿನ 5 ವರ್ಷಗಳಲ್ಲಿ ಕೃಷಿಗೆ 1.25 ಕೋಟಿ ಹಣ ಮೀಸಲು.
3. ಹುಬ್ಬಳ್ಳಿ-ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ.
4. 75 ಟಿಎಂಸಿ ಕಾವೇರಿ ನೀರು ಸದ್ಬಳಕೆಗೆ ನೀಲ ನಕ್ಷೆ ರಚನೆ.
5. ಭದ್ರ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಲು ಒತ್ತಿ ನೀಡಲಾಗುವುದು.

 

6. 2 ಸಾವಿರ ಜನಸಂಖ್ಯೆಯುಳ್ಳ ಗ್ರಾಮಗಳಿಗೆ ಕುಡಿಯುವ ನೀರಿನ ಯೋಜನೆ.
7. ತಾಲೂಕು, ಗ್ರಾಮ ಪಂಚಾಯತ್ ಅಭಿವೃದ್ಧಿಗೆ ಮುಂದಿನ ಬಜೆಟ್‍ನಲಿ ಹೆಚ್ಚಿನ ಅನುದಾನ ಮೀಸಲು.
8. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಸೇರಿದಂತೆ ಇತರೆ ಜಿಲ್ಲೆಗಳಿಗೆ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ.
9. ಪ್ರತಿ ಹಳ್ಳಿಗೂ 24 ಗಂಟೆ ವಿದ್ಯುತ್ ಪೂರೈಕೆಯ ಭರವಸೆ.
10. ಕೃಷ್ಣ ಮೇಲ್ದಂಡೆ ಯೋಜನೆಗಾಗಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರ,ಪುನರ್ವಸತಿ ಭರವಸೆ.

 

 

11. ಮುಂದಿನ 10 ವರ್ಷಗಳಲ್ಲಿ ಗ್ರಾಮೀಣ ಭಾಗಗಳಲ್ಲಿ 10 ಲಕ್ಷ ಮನೆಗಳ ನಿರ್ಮಾಣದ ಗುರಿ.
12. 2025ರೊಳಗೆ ನವಕರ್ನಾಟಕ ನಿರ್ಮಾಣಕ್ಕೆ ಒತ್ತು.
13. ತಮಿಳುನಾಡು ಮಾದರಿಯಲ್ಲಿಯೇ ಕನ್ನಡಿಗರಿಗೆ ಉಚಿತ ಮಾಂಗಲ್ಯ ಭಾಗ್ಯ.
14. ಚುನಾವಣೆಯಲ್ಲಿ ಗೆದ್ದರೆ 18 ವರ್ಷಗಳ ಕಾಲ ಉಚಿತ ಶಿಕ್ಷಣ ಭಾಗ್ಯ, ಈ ಮೊದಲು 10 ವರ್ಷ ಮಾತ್ರ ಆಗಿತ್ತು.
15. ರಾಜ್ಯದಲ್ಲಿ ಕೃಷಿ ಕಾರಿಡಾರ್ ನಿರ್ಮಾಣ

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top