ಸಮಾಚಾರ

ಪಿ.ಯು.ಸಿ ಫೇಲಾದ ವಿಧ್ಯಾರ್ಥಿಗಳು ಗಮನಿಸಬೇಕಾದ ಮಾಹಿತಿ ಇಲ್ಲಿದೆ

ನಿನ್ನ ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ ಒಟ್ಟಾರೆ ಶೇಕಡಾ 59.56 ಫಲಿತಾಂಶ ಬಂದಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಪದವಿ ಪೂರ್ವ ಶಿಕ್ಷಣ ಮಂಡಳಿ ನಿರ್ದೇಶಕಿ ಸಿ.ಶಿಖಾ ಅವರು ಮಾಹಿತಿ ತಿಳಿಸಿದ್ದಾರೆ. ಈ ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಇದೆ, 91.49, ದ್ವಿತೀಯ ಸ್ಥಾನದಲ್ಲಿ ಉಡುಪಿ ಜಿಲ್ಲೆ ಇದೆ, ಇನ್ನು ತೃತೀಯ ಸ್ಥಾನದಲ್ಲಿ ಸ್ಥಾನದಲ್ಲಿ ಕೊಡಗು ಜಿಲ್ಲೆಯಿದೆ ಮತ್ತು ಚಿಕ್ಕೋಡಿ ಜಿಲ್ಲೆ ಕೊನೆಯ ಸ್ಥಾನದಲ್ಲಿದೆ.

 

 

ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮಾಹಿತಿ ಇಲ್ಲಿದೆ. ಜೂನ್ 8 ರಿಂದ 20 ರ ವರೆಗೆ ಪೂರಕ ಪರೀಕ್ಷೆ ಜರುಗಲಿದೆ. ಮೇ 15 ಪರೀಕ್ಷಾ ಶುಲ್ಕ ಪಾವತಿ ಮಾಡಲು ಕೊನೆಯ ದಿನವಾಗಿದೆ ಎಂದು ತಿಳಿದು ಬಂದಿದೆ. 1 ವಿಷಯಕ್ಕೆ 140 ರೂ. ಪರೀಕ್ಷಾ ಶುಲ್ಕ ಇದೆ, 2 ವಿಷಯಗಳಿಗೆ 270 ರೂ., 3 ಅಥವಾ ಅದಕ್ಕಿಂತ ಹೆಚ್ಚಿನ ವಿಷಯಗಳಿಗೆ 400 ರೂ. ಪರೀಕ್ಷಾ ಶುಲ್ಕವನ್ನು ನಿಗದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

 

 

ಇನ್ನು ಉತ್ತರ ಪತ್ರಿಕೆಯ ಸ್ಕ್ಯಾನ್ನ್ಡ್ ಪ್ರತಿಗೆ ಅರ್ಜಿ ಸಲ್ಲಿಕೆ ಮಾಡಲು ಮೇ 7 ಕೊನೆಯ ದಿನವಾಗಿದೆ. ಪ್ರತಿ ವಿಷಯಕ್ಕೆ 530 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಅದೇ ರೀತಿ ಉತ್ತರ ಪತ್ರಿಕೆಯ ಮೌಲ್ಯ ಮಾಪನಕ್ಕೆ ಮೇ 14 ಕೊನೆಯ ದಿನವಾಗಿದೆ. ಪ್ರತಿ ವಿಷಯಕ್ಕೆ 1670 ರೂ. ಶುಲ್ಕ ನಿಗದಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top