ಸಮಾಚಾರ

ಎರಡು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಿದ್ದಾರೆ ನಟ ಯಶ್!

ಸದ್ಯಕ್ಕೆ ಎಲ್ಲೆಲ್ಲೂ ಚರ್ಚೆಗೆ ಗ್ರಾಸವಾಗಿರುವ ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಲ್ಲಷ್ಟೇ ಬಾಕಿ ಉಳಿದಿದ್ದುಇಂಥಾ ವಾತಾವರಣದಲ್ಲಿ ರಾಜಕೀಯ ವಲಯದಲ್ಲಿ ಬಿರುಸಿನ ವಾತಾವರಣ ಇರೋದು ಸಹಜವೇ. ಆದರೆ ಈ ಸಲ ರಾಜಕೀಯ ವಲಯದಲ್ಲಿ ಮಾತ್ರವಲ್ಲದೆ ಚಿತ್ರರಂಗದಲ್ಲಿಯೂ ಚುನಾವಣಾ ಪ್ರಭಾವ ಕೂಡ ಬಲು ಜೋರಾಗಿದೆ.. ವಿವಿಧ ಪಕ್ಷಗಳಿಗೆ ಸಿನಿಮಾ ರಂಗದಿಂದ ಅನೇಕ ಮಂದಿ ಪ್ರಚಾರ ನಡೆಸುತ್ತಿದ್ದು ಇದೀಗ ಅವರ ಸಾಲಿಗೆ ರಾಕಿಂಗ್ ಸ್ಟಾರ್ ಯಶ್ ಸೇರ್ಪಡೆಗೊಂಡಿದ್ದಾರೆ.

 

 

ತಮ್ಮ ಸ್ವಂತೂರಿನಲ್ಲಿ ಪ್ರಚಾರ ಕೈಗೊಳ್ಳಲು ನಿರ್ಧರಿಸಿರುವ ಯಶ್ ಸ್ನೇಹ ಪೂರ್ವಕವಾಗಿ ಕೆ.ಆರ್. ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮತ್ತು ಕೆಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಈ ಹಿಂದೆ ಅನೇಕ ಭಾರಿ ತಾವು ಯಾವ ಪಕ್ಷಕ್ಕೂ ಪ್ರಚಾರ ಮಾಡುವುದಿಲ್ಲ ಎಂದು ಹೇಳಿದ್ದ ಯಶ್ ಇದೀಗ ಇದ್ದಕ್ಕಿದ್ದ ಹಾಗೆ ಪ್ರಚಾರಕ್ಕೆ ಧುಮುಕಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

 

 

ಇಂದು ಬೆಳಗ್ಗೆ 10 ಗಂಟೆಗೆ ಕೆ.ಆರ್. ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಸಾ.ರಾ. ಮಹೇಶ್ ಪರ ಸುಮಾರು 10ಕ್ಕೂ ಹೆಚ್ಚು ಹಳ್ಳಿಗಳಲ್ಲಿ ರಾಕಿಂಗ್ ಸ್ಟಾರ್ ಯಶ್ ರೋಡ್ ಶೋ ನಡೆಸಿ ಜೆಡಿಎಸ್ ಬೆಂಬಲಿಸುವಂತೆ ಮನವಿಮಾಡಿಕೊಳ್ಳಲಿದ್ದಾರೆ. ನಂತರ ಸಂಜೆ ಆರು ಗಂಟೆಗೆ ಮೈಸೂರಿನ ಕೆ.ಆರ್. ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ರಾಮದಾಸ್ ಪರ ಕೂಡ ಯಶ್ ಮತಯಾಚನೆ ಮಾಡಲಿದ್ದಾರೆ. ಕ್ಷೇತ್ರದ ಗನ್ ಹೌಸ್ ಸರ್ಕಲ್ಲಿನಿಂದ ಯಶ್ ರೋಡ್ ಶೋ ನಡೆಸಲಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top