ರಾಜಕೀಯ

ಮೈತ್ರಿ ಬಗ್ಗೆ ಎಚ್. ಡಿ. ಕುಮಾರಸ್ವಾಮಿ ಹೇಳಿದ್ದೇನು

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಈ ಭಾರಿ ಕರ್ನಾಟಕ ಅತಂತ್ರ ವಿಧಾನ ಸಭೆಯನ್ನು ಅನಿವಾರ್ಯವಾಗಿ ಪಡೆದುಕೊಂಡಿದೆ. ಫಲಿತಾಂಶದ ನಂತ್ರ ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು ಒಂದು ಕಡೆ ಬಿಜೆಪಿಯಾದರೆ ಮತ್ತೊಂದು ಕಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ರಚಿಸುವ ಬಗ್ಗೆ ನಾನಾ ಸರ್ಕಸ್ ನಡೆಸುತ್ತಿವೆ.

 

 

ರಾಜ್ಯ ಸರ್ಕಾರ ರಚನೆ ನಿಟ್ಟಿನಲ್ಲಿ ಕಾಂಗ್ರೆಸ್ -ಜೆಡಿಎಸ್ ನಡುವಿನ ಮೈತ್ರಿಯಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಸ್ಪಷ್ಟ ಪಡಿಸಿದ್ದಾರೆ ಎನ್ನಲಾಗಿದೆ. ಜೆಡಿಎಸ್ ಶಾಸಕಾಂಗ ಸಭೆ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ತಿಳಿಸಿದ ಅವರು, ಕಾಂಗ್ರೆಸ್ ಜೊತೆ ಹೋಗಲು ಈಗಾಗಲೇ ನಿರ್ಧರಿಸಲಾಗಿದೆ. ಬೇರೆ ನಿರ್ಧಾರ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

 

 

ಕಾಂಗ್ರೆಸ್ ಜೆಡಿಎಸ್ ಗೆ ಬೆಂಬಲ ಘೋಷಣೆ ಮಾಡಿರುವುದರಿಂದ ಒಟ್ಟು ಸದಸ್ಯರ ಸಂಖ್ಯೆ 117 ಆಗಿದ್ದು, ರಾಜ್ಯಪಾಲರ ಮುಂದೆ ಸರ್ಕಾರ ರಚನೆಯ ಹಕ್ಕು ಮಂಡನೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

 

ಆದರೆ ಜೆಡಿಎಸ್ ಪಕ್ಷದ ರಾಜ ವೆಂಕಟಪ್ಪ ನಾಯಕ್ ಮತ್ತು ವೆಂಕಟ ರಾವ್ ನಾಡಗೌಡ ಅವರು ಶಾಸಕಾಂಗ ಸಭೆಯಿಂದ ದೂರ ಉಳಿದದ್ದು, ಅನೇಕ ಊಹಾಪೋಹಗಳಿಗೆ ಕಾರಣ ಆಗಿದೆ ಎನ್ನಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top