ಸಿನಿಮಾ

ಕಾಂಗ್ರೆಸ್ ಸಂಪರ್ಕದಲ್ಲಿರುವ ಬಿಜೆಪಿಯ 6 ಶಾಸಕರ ಮಾಹಿತಿ ಬಿಚ್ಚಿಟ್ಟ ಎಂ.ಬಿ.ಪಾಟೀಲ್

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಈ ಭಾರಿ ಕರ್ನಾಟಕ ಅತಂತ್ರ ವಿಧಾನ ಸಭೆಯನ್ನು ಅನಿವಾರ್ಯವಾಗಿ ಪಡೆದುಕೊಂಡಿದೆ. ಫಲಿತಾಂಶದ ನಂತ್ರ ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು ಒಂದು ಕಡೆ ಬಿಜೆಪಿಯಾದರೆ ಮತ್ತೊಂದು ಕಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ರಚಿಸುವ ಬಗ್ಗೆ ನಾನಾ ಸರ್ಕಸ್ ನಡೆಸುತ್ತಿವೆ.

 

 

ಒಂದು ಕಡೆ ಕಾಂಗ್ರೆಸ್ ಶಾಸಕರನ್ನು ಕರೆತರಲು ಆಪರೇಷನ್ ಕಮಲ ನಡೆಯುತ್ತಿದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ ಎಂ.ಬಿ.ಪಾಟೀಲ್ ಕಾಂಗ್ರೆಸ್ ಶಾಸಕರು ಯಾರು ಪಕ್ಷ ಬಿಟ್ಟು ಹೋಗುತ್ತಿಲ್ಲ. ಯಾವುದೇ ಶಾಸಕರ ಮೇಲೆ ಅನುಮಾನವಿಲ್ಲ. ಇದೆ ವೇಳೆ ಅವರು ಬಿಜೆಪಿಯ 6 ಜನ ಶಾಸಕರು ನಮ್ಮ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಮಿಂಚಿನ ಸಂಚಲನ ಮೂಡಿಸಿದ್ದಾರೆ.  ಆರು ಜನ ಯಾರೆಂದು ಕೇಳಿದಾಗ ಶಾಸಕ ಎಂ.ಬಿ.ಪಾಟೀಲ್ ಅದು ರಹಸ್ಯ ಮಾಹಿತಿ ಆಗಿದ್ದು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.

 

 

ಆದರೆ ಬಿಜೆಪಿ ಈ ಭಾರಿ ‘ಆಪರೇಷನ್ ಪ್ಲವರ್’ ಎಂಬ ಹೆಸರಿನಲ್ಲಿ ಸ್ಟೇಟರ್ಜಿ ರೂಪಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಕಮಲ ನಾಯಕರು ಆಪರೇಷನ್ ಪ್ಲವರ್ ಗೆ ಇಳಿದಿರುವುದರಿಂದ ಸಹಜವಾಗಿ ಕೈ ಮತ್ತು ಜೆಡಿಎಸ್ ನಾಯಕರಿಗೆ ಆಪರೇಷನ್ ಕಮಲದ ಭೀತಿ ಕಾಡುತ್ತಿದ್ದು ತಮ್ಮ ಶಾಸಕರು ಪಕ್ಷ ಬಿಟ್ಟು ಹೋಗದಂತೆ ಹೈ ಅಲರ್ಟ್ ಎಚ್ಚರಿಕೆ ವಹಿಸಿಕೊಂಡಿದ್ದಾರೆ. ಈ ಭಾರಿ ‘ಆಪರೇಷನ್ ಕಮಲ’ ಬದಲು ‘ಆಪರೇಷನ್ ಪ್ಲವರ್’ ಹೆಸರಿನಲ್ಲಿ ಕಣಕ್ಕಿಳಿದಿರುವ ಬಿಜೆಪಿ ನಾಯಕರುಗಳು ಈಗಾಗಲೇ ಆಪರೇಷನ್ ಫ್ಲವರ್ ಮಾಡಲು ನಾಲ್ಕು ತಂಡಗಳಾಗಿ ರಚನೆಯಾಗಿದ್ದು,

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top