ಸಮಾಚಾರ

ರಾಜ್ಯದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕಾರಣ, ಬಸ್ ಏರಿ ಹೊರಡಲಿರುವ ಕಾಂಗ್ರೆಸ್ ಶಾಸಕರು

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು ಈ ಭಾರಿ ಕರ್ನಾಟಕ ಅತಂತ್ರ ವಿಧಾನ ಸಭೆಯನ್ನು ಅನಿವಾರ್ಯವಾಗಿ ಪಡೆದುಕೊಂಡಿದೆ. ಫಲಿತಾಂಶದ ನಂತ್ರ ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು ಒಂದು ಕಡೆ ಬಿಜೆಪಿಯಾದರೆ ಮತ್ತೊಂದು ಕಡೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ರಚಿಸುವ ಬಗ್ಗೆ ನಾನಾ ಸರ್ಕಸ್ ನಡೆಸುತ್ತಿವೆ.

 

 

ಸದ್ಯ ಕಾಂಗ್ರೆಸ್ ತನ್ನ ಶಾಸಕರನ್ನು ಉಳಿಸಿಕೊಳ್ಳಲು ರೆಸಾರ್ಟ್ ರಾಜಕೀಯ ಮೊರೆ ಹೋಗಿದೆ ಎನ್ನಲಾಗುತ್ತಿದೆ. ಕುದುರೆ ವ್ಯಾಪಾರ ತಪ್ಪಿಸಲು ಈ ನಿರ್ಣಯ ಮಾಡಲಾಗುತ್ತಿದೆ. ಬಿಜೆಪಿ ಕಾಂಗ್ರೆಸ್ ಶಾಸಕರಿಗೆ ಆಮಿಷ ಒಡ್ಡುವ ಸಂಭವ ಇದ್ದು ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಶಾಸಕರೆಲ್ಲರನ್ನು ರೆಸಾರ್ಟ್ ನಲ್ಲಿ ಇಡುತ್ತಾರೆ ಎಂದು ಹೇಳಲಾಗುತ್ತಿದೆ.

 

ಕೆಪಿಸಿಸಿ ಕಚೇರಿ ಆವರಣದಲ್ಲಿ ಈಗಾಗಲೇ ಬಸ್ ಬಂದಿದ್ದು ಎಲ್ಲ ಶಾಸಕರನ್ನು ಈ ಬಸ್ ನಲ್ಲಿ ಹತ್ತಿಸಿಕೊಂಡು ಹೋಗುತ್ತಾರೆ ಎಂದು ತಿಳಿದು ಬಂದಿದೆ. ಬಹುತೇಕ ಶಾಸಕರು ಆಗಾಗಲೇ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದು ಇನ್ನು ಕೆಲವರು ಮಾರ್ಗದಲ್ಲಿದ್ದಾರೆ ಎಂದು ತಿಳಿದು ಬಂದಿದೆ.

 

 

ಶಾಸಕಾಂಗ ಸಭೆಯ ಬೆನ್ನಲ್ಲೇ ಹೇಳಿಕೆ ನೀಡಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಮತ್ತು ಜೆಡಿಎಸ್‌ ಸರ್ಕಾರ ರಚನೆಗೆ ಸಂಖ್ಯಾ ಬಲ ಇದೆ. ಈ ಆಧಾರದ ಮೇಲೆ ರಾಜ್ಯಪಾಲರು ಅವಕಾಶ ನೀಡಬೇಕು. ಒಂದು ವೇಳೆ ಬಿಜೆಪಿಗೆ ಅವಕಾಶ ಕೊಟ್ಟರೆ ಸಂವಿಧಾನ‌ ವಿರೋಧಿಯಾಗುತ್ತೆ ಎಂದು ಹೇಳಿದ್ದಾರೆ. ಬಿಜೆಪಿಗೆ ಅವಕಾಶ ನೀಡಿದರೆ ಇದರ ವಿರುದ್ಧ ಪ್ರತಿಭಟನೆ ಮಾಡುತ್ತೇವೆ. ಸಂವಿಧಾನ ನಿಯಮದಂತೆ ನಡೆದುಕೊಳ್ಳಬೇಕು. ಸಂವಿಧಾನ ಬಾಹಿರವಾಗಿ ನಡೆದುಕೊಂಡರೆ ರಾಜ್ಯಪಾಲರ ಹುದ್ದೆಗೆ ಗೌರವ ಇರುವುದಿಲ್ಲ. ಬಿಜೆಪಿ ಕುದರೆ ವ್ಯಾಪರಕ್ಕೆ ಮುಂದಾಗಿದೆ. ಆದರೆ ನಮ್ಮ ಶಾಸಕರು ಒಂದಾಗಿದ್ದೇವೆ ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top