ಸಮಾಚಾರ

ಮಗ ಎಸ್.ಎಸ್.ಎಲ್.ಸಿ ಫೇಲ್ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಅಪ್ಪ

ಮಕ್ಕಳು ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದರೆ ಸಾಮಾನ್ಯವಾಗಿ ಪೋಷಕರು ಸಂಭ್ರಮಿಸುವುದು ವಾಡಿಕೆ. ಆದರೆ ಮಧ್ಯಪ್ರದೇಶ ರಾಜ್ಯದ ಸಾಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸುರೇಂದ್ರ ಕುಮಾರ್ ಎಂಬುವವರು ತನ್ನ ಪುತ್ರ 10ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಬೀದಿಯಲ್ಲಿ ಪೆಂಡಾಲ್ ಹಾಕಿಸಿ, ಪಟಾಕಿ ಸಿಡಿಸಿ ಹಾಗೂ ಎಲ್ಲರಿಗೂ ಸಿಹಿ ಹಂಚಿ ಸಂಭ್ರಮ ಪಟ್ಟಿದ್ದಾರೆ.

 

 

ಈ ಬಗ್ಗೆ ಮಾತನಾಡಿರುವ ಬಾಲಕನ ತಂದೆ ಮಕ್ಕಳು ಪರೀಕ್ಷೆಯಲ್ಲಿ ಫೇಲ್ ಆದಾಗ ಖಿನ್ನತೆಗೆ ಒಳಗಾಗುತ್ತಾರೆ. ಕೆಲವೊಂದು ಬಾರಿ ಜೀವವನ್ನು ಕೂಡ ಕಳೆದುಕೊಳ್ಳುತ್ತಾರೆ. ಆದ್ದರಿಂದ ಫೇಲ್ ಆದಾಗ ಅವರನ್ನು ಬೈಯ್ಯದೆ ಈ ರೀತಿ ಸಂಭ್ರಮಿಸಿದೆ ಎಂದು ಅವರು ಹೇಳಿದ್ದಾರೆ.

 

 

ಪರೀಕ್ಷೆಯಲ್ಲಿ ಫೇಲ್ ಆದಾಗ ನಾವು ಈ ರೀತಿಯಲ್ಲಿ ಅವರಿಗೆ ಉತ್ತೇಜನ ನೀಡಿದರೆ ಮುಂದೆ ಅವರು ತಮ್ಮ ಜೀವನದಲ್ಲಿ ಗೆಲುವನ್ನು ಸಾಧಿಸುತ್ತಾರೆ. ಆದ್ದರಿಂದ ನನ್ನ ಮಗನನ್ನು ಪ್ರೇರೇಪಿಸುವ ಉದ್ದೇಶದಿಂದ ಈ ರೀತಿ ಸಂಭ್ರಮಿಸುತ್ತಿದ್ದೇನೆ ಎಂದು ತಿಳಿದರು. ಮಧ್ಯಪ್ರದೇಶ ರಾಜ್ಯದಲ್ಲಿ ಇದೇ ಪ್ರಥಮ ಬಾರಿಗೆ ಮಗ ಫೇಲ್ ಆಗಿದ್ದಕ್ಕೆ ಪಾರ್ಟಿ ಮಾಡಿ ಸಂಭ್ರಮಿಸಿದ್ದಾರೆ. ಇತ್ತೀಚಿಗೆ ಮಧ್ಯ ಪ್ರದೇಶ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ 11 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದರು.

 

 

ಸದ್ಯ ಸಂಭ್ರಮಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಹರಿದಾಡುತ್ತಿವೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

Leave a Reply

Your email address will not be published. Required fields are marked *

To Top