ಸಮಾಚಾರ

ನಾಪತ್ತೆಯಾದ ಶಾಸಕ ಆನಂದ್ ಸಿಂಗ್‍ ರನ್ನ ಹುಡುಕಿ ಕೊಂಡುವಂತೆ ಮಿಸ್ಸಿಂಗ್ ಕಂಪ್ಲೆಂಟ್

ರಾಜ್ಯ ರಾಜಕಾರಣದಲ್ಲಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ದೊಡ್ಡ ಹೈಡ್ರಾಮಗಳೇ ನಡೆದುಹೋದವು. ಇದರ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರು ಮತ್ತು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಗುರುವಾರ ಬೆಳಗ್ಗೆ 9ಕ್ಕೆ ರಾಜಭವನದಲ್ಲಿ ರಾಜ್ಯಪಾಲ ವಿ.ಆರ್​. ವಾಲಾ ಅವರು ಬಿಎಸ್​ವೈ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

 

 

ಈಗ ಕಾಂಗ್ರೆಸ್ ನಾಯಕರಿಗೆ ಟೆನ್ಸನ್ ಮೇಲೆ ಟೆನ್ಸನ್ ಪ್ರಾರಂಭವಾಗಿದೆ, ಬಳ್ಳಾರಿ ಜಿಲ್ಲೆಯ ವಿಜಯ ನಗರ ಶಾಸಕ ಆನಂದ್ ಸಿಂಗ್ ಗಾಗಿ ಕಾಂಗ್ರೆಸ್ ಹುಡುಕಾಟ ಮಾಡುತ್ತಿದೆ ಎನ್ನಲಾಗಿದೆ. ಆನಂದ್ ಸಿಂಗ್ ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ತಿಳಿದು ಬಂದಿದೆ. ಈಗ ಅವರ ಪತ್ತೆಗಾಗಿ ಕಾಂಗ್ರೆಸ್ ಶಾಸಕರು ಪೊಲೀಸರಿಗೆ ದೂರು ನೀಡಿದ್ದಾರೆ.

 

ಶಾಸಕ ಆನಂದ್ ಸಿಂಗ್ ಬುಧವಾರ ಬಳ್ಳಾರಿಯಿಂದ ರೆಸಾರ್ಟ್ ರಾಜಕಾರಣಕ್ಕೆಂದು ಹೋಗಿದ್ದರು. ಆದರೆ ಇದೂವರೆಗೂ ಬೆಂಗಳೂರಿಗೆ ಹೋಗಿಲ್ಲ. ಕಾಂಗ್ರೆಸ್ ಮುಖಂಡರಿಗೆ ಖುದ್ದು ಕರೆ ಮಾಡಿ ಬೆಂಗಳೂರಿಗೆ ಬರುತ್ತೀದ್ದೀನಿ ಎಂದು ಹೇಳಿದ್ದರು. ಆದರೆ ಅವರು ಕಾಂಗ್ರೆಸ್ ಮುಖಂಡರ ಕೈಗೆ ಸಿಗುತ್ತಿಲ್ಲ. ಹೀಗಾಗಿ ಆನಂದ್ ಸಿಂಗ್ ಹುಡುಕಿಕೊಡುವಂತೆ ಇಂದು ಹೊಸಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಲಿದ್ದಾರೆ. ಜೊತೆಗೆ ಹೊಸಪೇಟೆ ಪೊಲೀಸ್ ಠಾಣೆಗೆ ಮಿಸ್ಸಿಂಗ್ ಕಂಪ್ಲೆಂಟ್ ಕೊಟ್ಟು ಹುಡುಕಿಕೊಡಿ ಎಂದು ಮನವಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top