ಸಮಾಚಾರ

ಈ ಷರತ್ತು ಒಪ್ಪಿದ್ರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆಂದ ಅರವಿಂದ್ ಕೇಜ್ರಿವಾಲ್

ದೆಹಲಿ ರಾಜ್ಯಕ್ಕೆ ಪೂರ್ಣ ರಾಜ್ಯದ ಸ್ಥಾನಮಾನ ದೊರಕಿಸಲು ಹೋರಾಟ ಪ್ರಾರಂಭಿಸಿರುವ ಆಮ್‌ಆದ್ಮಿ ಪಕ್ಷದ ನಾಯಕ ಅರವಿಂದ್‌ ಕೇಜ್ರಿವಾಲ್‌, ಈಗ ಕೇಂದ್ರದಲ್ಲಿ ಅಧಿಕಾರಾರೂಢ ಬಿಜೆಪಿ ಸರ್ಕಾರಕ್ಕೆ ಭರ್ಜರಿ ಆಫರ್‌ ನೀಡಿದ್ದಾರೆ. 2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ತಮ್ಮ ಪಕ್ಷ ಬಿಜೆಪಿ ಪರ ಪ್ರಚಾರ ನಡೆಸಲಿದೆ ಎಂದು ಘೋಷಿಸಿದ್ದಾರೆ. ಆದರೆ ಇದಕ್ಕೆ ಒಂದು ಷರತ್ತು ವಿಧಿಸಿದ್ದಾರೆ.

 

 

 

2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಮುನ್ನ ಕೇಂದ್ರ ಸರ್ಕಾರ ದೆಹಲಿಗೆ ಸಂಪೂರ್ಣ ರಾಜ್ಯ ಸ್ಥಾನಮಾನ ನೀಡಿದರೆ ಆಮ್ ಆದ್ಮಿ ಪಕ್ಷದ ಪ್ರತಿಯೊಂದು ಮತವೂ ಬಿಜೆಪಿಗೆ ಬೀಳುತ್ತದೆ ಎಂದು ನಿಶ್ಚಿತವಾಗಿ ಹೇಳುತ್ತೇನೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅರವಿಂದ್ ಕೇಜ್ರಿವಾಲ್ 2014ರ ಲೋಕಸಭಾ ಚುನಾವಣೆ ಪ್ರಚಾರದ ವೇಳೆ ದೆಹಲಿಗೆ ಪೂರ್ಣ ರಾಜ್ಯದ ಸ್ಥಾನಮಾನ ನೀಡುವುದಾಗಿ ಮೋದಿ ಘೋಷಿಸಿದ್ದರು. ಆದ್ರೆ ನಂತರದ ದಿನಗಳಲ್ಲಿ ಮೋದಿ ಅವರಿಗೆ ತಮ್ಮ ಭರವಸೆ ಮರೆತು ಹೋಯಿತು. ಆದರೆ ಈಗಲೂ ಕಾಲ ಮಿಂಚಿಲ್ಲ ಎಂದು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ನೀಡಿರುವ ಆಫರ್ ಗೆ ಬಿಜೆಪಿ ಯಾವ ರೀತಿ ಪ್ರತ್ರಿಕ್ರಿಯೆ ಮಾಡುತ್ತೆ ಎಂಬುದನ್ನು ಕಾದುನೋಡಬೇಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top