ಸಮಾಚಾರ

ಮುಂಗಾರು ಅಬ್ಬರಕ್ಕೆ ಚಾರ್ಮಾಡಿ ಘಾಟ್ ಕುಸಿತ: ಪರದಾಡುತ್ತಿರುವ ಪ್ರಯಾಣಿಕರು

ಜೋರಾಗಿರುವ ಮುಂಗಾರು ಅಬ್ಬರಕ್ಕೆ ಚಾರ್ಮಾಡಿ ಘಾಟ್​ ರಸ್ತೆಯಲ್ಲಿ ಗುಡ್ಡ ಕುಸಿತವಾದ ಪರಿಣಾಮ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ ಎಂದು ತಿಳಿದು ಬಂದಿದೆ. ಘಾಟ್​​ನ ರಸ್ತೆಯ 2ನೇ ಮತ್ತು 3ನೇ ತಿರುವಿನಲ್ಲಿ ಮಂಗಳವಾರ ಗುಡ್ಡ ಕುಸಿತವಾಗಿದ್ದು, ಬೆಂಗಳೂರು ಕಡೆ ಸಂಚರಿಸುವ ಬಸ್ಸು ಸೇರಿದಂತೆ ಅನೇಕ ವಾಹನಗಳು ಇಂದು ನಸುಕಿನಿಂದ ಮುಂದಕ್ಕೆ ಸಂಚರಿಸಲಾಗದೆ ನಿಂತಿವೆ. ಬಸ್ಸಿನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಮಕ್ಕಳು ಹಸಿವೆಯಿಂದ ಅಳುತ್ತಿದ್ದಾರೆ. ಮಂಗಳೂರಿನಿಂದ ಬೆಂಗಳೂರಿಗೆ ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಬಸ್ಸಿನಲ್ಲಿರುವ ಪ್ರಯಾಣಿಕರು ಪರದಾಡುವಂತಾಗಿದೆ. ಮಕ್ಕಳು ಹಸಿವೆಯಿಂದ ಅಳುತ್ತಿದ್ದಾರೆ.

 

 

ಮಾರ್ಗ ಬದಲಾವಣೆ ಮಾಡಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ಧರ್ಮಸ್ಥಳ ಹಾಗೂ ಉಜಿರೆಯಲ್ಲಿ ಮಾರ್ಗ ಬದಲಾವಣೆ ಮಾಡಿದ್ದಾರೆ. ಮಳೆಗೆ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದಿದ್ದು ಸ್ಥಳೀಯರು ಹಾಗು ಪೊಲೀಸರು ಕಾರ್ಯಾಚರಣೆ ಮಾಡಿ ರಸ್ತೆ ತೆರವು ಮಾಡುತ್ತಿದ್ದಾರೆ. ಜೆಸಿಬಿ ಯಂತ್ರಗಳಿಂದ ಮಣ್ಣು ತೆಗೆಯುತ್ತಿದ್ದಾರೆ.

ಧಾರಾಕಾರ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಇತ್ತ ಚಿಕ್ಕಮಗಳೂರಿನ 4 ತಾಲೂಕುಗಳಿಗೆ ಜಿಲ್ಲಾಡಳಿತ ರಜೆ ನೀಡಿದೆ. ಮಾಣಿ – ಮೈಸೂರು ಹೆದ್ದಾರಿಯಲ್ಲಿ ವಾಹನ‌ ಸಂಚಾರಕ್ಕೆ ಅನುವು ಮಾಡಿದ್ದಾರೆ, ರಾತ್ರಿಯಿಡಿ ಸಿಬ್ಬಂದಿ ಮಣ್ಣು ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top