ಮನೋರಂಜನೆ

ರಾಮನಗರ ಉಪಚುನಾವಣೆಗೆ ಜೆಡಿಎಸ್’ನಿಂದ ನಿಖಿಲ್ ಕುಮಾರಸ್ವಾಮಿ ಕಣಕ್ಕೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಚನ್ನಪಟ್ಟಣ ಮತ್ತು ರಾಮನಗರ ಎರಡೂ ವಿಧಾನ ಸಭಾ ಕ್ಷೇತ್ರದಲ್ಲೂ ಜಯಶಾಲಿಯಾಗಿದ್ದರಿಂದ ಅವರು ಚನ್ನಪಟ್ಟಣವನ್ನು ಉಳಿಸಿಕೊಳ್ಳುತ್ತಿದ್ದು ರಾಮನಗರ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರ್ ಸ್ಪರ್ಧಿಸಲಿದ್ದಾರೆ ಎನ್ನುವ ಸುದ್ದಿಗಳು ಎಲ್ಲೆಡೆ ಕೇಳಿಬರುತ್ತಿದೆ.

 

 

ಈ ಕುರಿತು ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ “ಅನಿತಾ ಕುಮಾರಸ್ವಾಮಿ ಅಥವಾ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಬೇಡಿಕೆ ನಮ್ಮ ಕಾರ್ಯಕರ್ತರಿಂದ ಬಂದಿರೋದು ನಿಜ ಆದರೆ ಈ ವಿಚಾರವಾಗಿ ಇನ್ನೂ ಯಾವುದೇ ಅಧಿಕೃತ ತೀರ್ಮಾನ ಕೈಗೊಂಡಿಲ್ಲ” ಎಂದು ಹೇಳುವ ಮೂಲಕ ತಮ್ಮ ಪುತ್ರ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾನೆ ಎಂಬ ಸುಳಿವನ್ನು ಬಿಟ್ಟುಕೊಟ್ಟಿದ್ದಾರೆ.

ಇನ್ನೂ ಇದೇ ವಿಚಾರವಾಗಿ ಪ್ರತಿಕ್ರಿಯಿಸಿರುವ ಅನಿತಾ ಕುಮಾರಸ್ವಾಮಿ “ಚುನಾವಣೆಗೆ ನನ್ನ ಮತ್ತು ನಿಖಿಲ್ ಹೆಸರು ಅಭ್ಯರ್ಥಿಗಳಾಗಿ ಕೇಳಿಬರುತ್ತಿದೆ. ಆದರೆ ರಾಮನಗರ ಉಪಚುನಾವಣೆ ದಿನಾಂಕ ಇನ್ನೂ ನಿಗದಿಯಾಗಿಲ್ಲ, ದಿನಾಂಕ ನಿಗದಿಯಾದ ಬಳಿಕ ಅಭ್ಯರ್ಥಿ ಘೋಷಣೆ ಮಾಡಲಾಗುತ್ತದೆ” ಎಂದು ಹೇಳಿದ್ದಾರೆ.

 

 

ಒಟ್ಟಿನಲ್ಲಿ ಕುಟುಂಬ ರಾಜಕಾರಣದ ಹಣೆಪಟ್ಟಿಯನ್ನು ತೆಗೆದುಹಾಕಬೇಕು ಎಂದು ಅಚಲ ನಿರ್ಧಾರ ಕೈಗೊಂಡಿದ್ದ ಕುಮಾರಸ್ವಾಮಿ ಕಳೆದ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದಿಂದ ತಾವು ಮತ್ತು ತಮ್ಮ ಸಹೋದರ ರೇವಣ್ಣ ಮಾತ್ರವೇ ಸ್ಫರ್ಧಿಸಿದ್ದರು. ರೇವಣ್ಣ ಅವರ ಪುತ್ರ ಪ್ರಜ್ವಲ್ ಕೂಡ ಟಿಕೆಟ್ ಕೇಳಿದರೂ ನೀಡಿರಲಿಲ್ಲ ಇದೀಗ ರಾಮನಗರ ಉಪಚುನಾವಣೆಗೆ ತಮ್ಮ ಪುತ್ರ ನಿಖಿಲ್ ಅವರಿಗೆ ಟಿಕೆಟ್ ನೀಡುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top