ಮನೋರಂಜನೆ

ಉಡುಪಿ ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಇನ್ನಿಲ್ಲ

ಉಡುಪಿಯ ಅಷ್ಟಮಠಗಳಲ್ಲಿ ಒಂದಾಗಿರುವ ಶೀರೂರು ಮಠದ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಇಂದು ಉಡುಪಿ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗಿದೆ ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

 

 

ಕೆಲದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿಸಲಾಗಿತ್ತು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿತ್ತು. ಅವರು ರಕ್ತವಾಂತಿ ಮಾಡಿದ್ದರಿಂದ ಸಂಜೆಯಿಂದಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ.

8ನೇ ವಯಸ್ಸಿಗೆ ಸನ್ಯಾಸತ್ವ ಸ್ವೀಕರಿಸಿದ ಶ್ರೀಗಳು ಮಠದ 30ನೇ ಯತಿಯಾಗಿ ನೇಮಕಗೊಂಡಿದ್ದರು. ವಿಠಲ ಆಚಾರ್ಯ ಮತ್ತು ಕುಸುಮಾ ಆಚಾರ್ಯ ದಂಪತಿಯ ಮಗನಾಗಿ ಹೆಬ್ರಿ ತಾಲೂಕಿನ ಮಡಮಕ್ಕಿಯಲ್ಲಿ ಶ್ರೀಗಳು ಜನಿಸಿದ್ದರು., ಹರೀಶ್ ಆಚಾರ್ಯ ಎಂಬುದು ಅವರ ಮೂಲ ನಾಮವಾಗಿತ್ತು. ಸಂಗೀತ ಪ್ರೇಮಿಯಾಗಿದ್ದ ಶ್ರೀಗಳು ಎಲ್ಲಾ ರೀತಿಯ ಸಂಗೀತ ಸಾಧನಗಳನ್ನು ಉಪಯೋಗಿಸುತ್ತಿದ್ದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top