ಸಮಾಚಾರ

ಭಾರಿ ಕುತೂಹಲಕ್ಕೆ ಕಾರಣವಾದ ಅಮಿತ್ ಷಾ- ಎಂಎಸ್ ಧೋನಿ ಭೇಟಿ.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯವರನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ದೆಹಲಿಯಲ್ಲಿ ನೆನ್ನೆ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮೋದಿ ಸರ್ಕಾರದ ಸಾದನೆಗಳನ್ನು ಮನವರಿಕೆ ಮಾಡಿಕೊಡುವ ‘ಸಂಪರ್ಕ್ ಫಾರ್ ಸಮರ್ಥನ್’ ಕಿರುಹೊತ್ತಿಗೆಯನ್ನು ಧೋನಿಗೆ ಅಮಿತ ಷಾ ನೀಡಿದ್ದಾರೆ. ಅಮಿತ್ ಶಾಗೆ ಕೇಂದ್ರ ಸಚಿವ ಪಿಯೂಷ್ ಗೊಯೆಲ್ ಕೂಡ ಸಾಥ್ ನೀಡಿದರು.

 

 

ಕೇಂದ್ರದ ಮೋದಿ ಸರ್ಕಾರ ನಾಲ್ಕು ವರ್ಷ ಸಂಪೂರ್ಣಗೊಳಿಸಿದ ಹಿನ್ನೆಲೆಯಲಿ ಬಿಜೆಪಿ ರಾಷ್ತಾಧ್ಯಕ್ಷ ಅಮಿತ್ ಶಾ ‘ಸಂಪರ್ಕ್ ಫಾರ್ ಸಮರ್ಥನ್’ ಎಂಬ ಅಭಿಯಾನವನ್ನು ಚಾಲನೆ ನೀಡಿ ಅದರ ಮುಖಾಂತರ ನಾಲ್ಕು ವರ್ಷಗಳ ಕಾಲ ತಮ್ಮ ಸರ್ಕಾರ ಮಾಡಿರುವ ಸಾಧನೆಗಳನ್ನು ತಿಳಿಸಲು ಮುಂದಾಗಿದ್ದರು. ಈಗಾಗಲೇ ಉದ್ಯಮಿ ರತನ್ ಟಾಟಾ, ಬಾಲಿವುಡ್ ನಟಿ ಮಾಧುರಿ ದೀಕ್ಷಿತ್,ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಶಿರೋಮಣಿ ಅಕಾಲಿ ದಳದ ನಾಯಕ ಪ್ರಕಾಶ್ ಸಿಂಗ್ ಬಾದಲ್ ಮತ್ತು ಕ್ರೀಡಾಪಟು ಮಿಲ್ಕಾ ಸಿಂಗ್, ಕಪಿಲ್ ದೇವ್ ಸೇರಿದಂತೆ ಸಾಕಷ್ಟು ಖ್ಯಾತನಾಮರನ್ನು ಭೇಟಿ ಮಾಡಿದ್ದ ಅಮಿತ್ ಷಾ ಮೋದಿ ಸರ್ಕಾರದ ನಾಲ್ಕು ವರ್ಷದ ಸಾಧನೆಯನ್ನು ಬಿಂಬಿಸುವ ಕಿರು ಹೊತ್ತಿಗೆಯನ್ನು ನೀಡಿ ಬಂದಿದ್ದರು.

ಅಂತೆಯೇ ಇದೀಗ ಟೀಮ್ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಭೇಟಿಮಾಡಿ ತಮ್ಮ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿದ್ದಾರೆ. 2019ರ ಲೋಕಸಭಾ ಚುನಾವಣೆಯಿಂದಾಗಿಈಗಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಅಮಿತ್ ಷಾ ಹಾಗೂ ಧೋನಿಯವರ ಭೇಟಿಯು ಹಲವು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. 2019ರ ಲೋಕಸಭಾ ಚುನಾವಣೆಗೆ ಧೋನಿಯವರನ್ನು ಪಕ್ಷದ ಪರವಾಗಿ ಪ್ರಚಾರ ನಡೆಸುವಂತೆ ಆಹ್ವಾನಿಸಲಾಗುತ್ತೆದೆಯೇ? ಎಂಬ ಕುತೂಹಲ ಮನೆ ಮಾಡಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top