ಮನೋರಂಜನೆ

ಪಾತ್ರಕ್ಕಾಗಿ ಪಲ್ಲಂಗಕ್ಕೆ ಕರೆಯುವದರ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಅರ್ಜುನ್ ಸರ್ಜಾ.

ಸಿನಿಮಾಗಳಲ್ಲಿ ನಟಿಸಲು ಅವಕಾಶ ಕೊಡುವ ಆಮಿಷವೊಡ್ಡಿ ನಟಿಯರನ್ನು ಮಂಚಕ್ಕೆ ಆಹ್ವಾನಿಸುವ ಕಾಯಿಲೆ ಎಲ್ಲ ಚಿತ್ರರಂಗಗಳಿಗೂ ಸಾಂಕ್ರಾಮಿಕವಾಗಿ ಹರಡಿರೋ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಂಥ ಕಾಸ್ಟ್ ಕೌಚಿಂಗ್‌ನ ಸರಣಿ ಇದೀಗ ಎಲ್ಲೆಲ್ಲಿಯೋ ಬಿಚ್ಚಿಕೊಳ್ಳುತ್ತಿವೆ. ಇತ್ತೀಚಿನ ದಿನಗಳಲ್ಲಿ ದೇಶವ್ಯಾಪಿ ಭಾರಿ ಚರ್ಚೆಯನ್ನು ಹುಟ್ಟುಹಾಕಿರುವ ಇಂತಹ ಅನಿಷ್ಟ ಪಿಡುಗಿನ ವಿರುದ್ಧ ದಕ್ಷಿಣ ಭಾರತ ಚಿತ್ರರಂಗದ ಎಲ್ಲಾ ಭಾಷೆಯ ಪ್ರಸಿದ್ಧ ಯುವ ನಟಿಯರನೇಕರು ತಾವೇ ಅನುಭವಿಸಿದ್ದ ಕಾಸ್ಟಿಂಗ್ ಕೌಚ್ ಮನೋ ವ್ಯಾಕುಲವನ್ನು ಸಾಂದರ್ಭಿಕವಾಗಿ ಬಿಚ್ಚಿಡುತ್ತಿದ್ದಾರೆ.

 

 

ಇತ್ತೀಚಿಗೆ ಕಾಸ್ಟಿಂಗ್ ಕೌಚ್ ವಿರುದ್ಧ ರೊಚ್ಚಿಗೆದ್ದು ನಡುರಸ್ತೆಯಲ್ಲಿ ಬಟ್ಟೆಗಳನ್ನು ಬಿಚ್ಚಿ ಅರೆ ಬೆತ್ತಲೆ ಪ್ರತಿಭಟನೆ ನಡೆಸಿದೇಟಿಗೆ ತೆಲುಗು ಚಿತ್ರರಂಗದೊಳಗೆ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿ ಇಡೀ ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು. ಅದಾದೇಟಿಗೆ ಹಲವು ಚಿತ್ರರಂಗದ ನಟಿಯರೂ ಕೂಡ ಚಿತ್ರರಂಗದಲ್ಲಿ ತಮಗಾಗುತ್ತಿರುವ ಚಿತಾಹಿಂಸೆಯನ್ನು ಒಂದರ ಹಿಂದೊಂದರಂತೆ ಬಿಚ್ಚಿಡುತ್ತಾ ಬಂದಿದ್ದಾರೆ.. ಆದರೆ ಇದೀಗ ಈ ಬಗ್ಗೆ ಬಹುಭಾಷಾ ನಟ ಅರ್ಜುನ್ ಸರ್ಜಾ ರೆಬೆಲ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚಿಗೆ ತಮಿಳಿನ ಖಾಸಗಿ ಚಾನೆಲ್’ವೊಂದರ ಸಂದರ್ಶನದಲ್ಲಿ ಪಾಲ್ಗೊಂಡಿದ್ದ ಅರ್ಜುನ್ ಸರ್ಜಾ ಕಾಸ್ಟಿಂಗ್ ಕೌಚ್ ಬಗ್ಗೆ ಪ್ರತಿಕ್ರಿಯಿಸಿದರು. ನಿಮ್ಮ ಮಗಳನ್ನು ಸಿನಿಮಾ ಲೋಕಕ್ಕೆ ಪರಿಚಯಿಸಿದ್ದೀರ ಕಾಸ್ಟಿಂಗ್ ಕೌಚ್ ಬಗ್ಗೆ ಭಯವಿಲ್ಲವೇ? ಎಂದು ಸಂದರ್ಶಕ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅರ್ಜುನ್ ಸರ್ಜಾ “ಈ ವಿಚಾರವಾಗಿ ನಾನೇಕೆ ಭಯ ಪಡಬೇಕು?. ಹಾಗೇನಾದರೂ ನಾನೇ ಭಯ ಪಟ್ಟುಕೊಂಡು ಕೂತ್ರೆ, ಬೇರೆಯವರು ಅವರ ಹೆಣ್ಣುಮಕ್ಕಳನ್ನ ಹೇಗೆ ಸಿನಿಮಾರಂಗಕ್ಕೆ ಕಳುಹಿಸ್ತಾರೆ.. ತುಂಬಾ ಜನಕ್ಕೆ ಚಿತ್ರರಂಗ ಎಂದ್ರೆ ಬೇರೆ ರೀತಿಯೊಂದು ಭಾವನೆ ಇದೆ. ಇಲ್ಲಿ ಸರಿಯಲ್ಲಿ, ಏನೋ ಆಗುತ್ತೆ, ಎಂಬ ಆತಂಕ ಇದೆ. ಹಾಗಂತ ಇಲ್ಲಿ ಕೆಟ್ಟದ್ದು ಇಲ್ಲ ಅಂತಲ್ಲ. ಆದರೆ ಕೆಟ್ಟದ್ದಕ್ಕಿಂತ ಒಳ್ಳೆಯದೇ ಇದೆ. ಕೇವಲ ಸಿನಿಮಾರಂಗ ಮಾತ್ರವಲ್ಲ ಕೆಟ್ಟದ್ದು ಮತ್ತು ಒಳ್ಳೆಯದ್ದು ಪ್ರತಿಯೊಂದು ಕ್ಷೇತ್ರದಲ್ಲೂ ಇದೆ. ಎಲ್ಲ ಕಡೆಯೂ ಒಳ್ಳೆಯವರು ಮತ್ತು ಕೆಟ್ಟವರು ಇಬ್ಬರು ಇದ್ದೇ ಇರ್ತಾರೆ” ಎಂದು ಉತ್ತರಿಸಿದರು. ಅರ್ಜುನ್ ಸರ್ಜಾ ಅವರ ಈ ಮಾತುಗಳು ಮೆಚ್ಚೆಗೆಗೆ ಪಾತ್ರವಾಗುತ್ತಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top