ಸಮಾಚಾರ

ಕನ್ನಡದ ಖ್ಯಾತ ನಟ ಚರಣ್ರಾಜ್ ಕರುಣಾನಿಧಿಯವರನ್ನು ನೆನೆದು ದೇವರೆಂದು ಕಣ್ಣೀರು ಹಾಕಿದು ಈ ಕಾರಣಕ್ಕೆ ,ಏನ್ ಆ ಕಾರಣ ನೋಡಿ

ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಮಂಗಳವಾರ ಸಂಜೆ ಸಾವನ್ನಪ್ಪಿದ್ದಾರೆ. ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಸಂಜೆ 6.10ಕ್ಕೆ ಚೆನ್ನೈ ನಗರದ ಕಾವೇರಿ ಆಸ್ಪತ್ರೆಯಲ್ಲಿ ಅಸು ನೀಗಿದರು ಎಂದು ತಿಳಿದು ಬಂದಿದೆ. ನಟ ಚರಣ್ ರಾಜ್ ಅವರು ಸಂತಾಪ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ತಮ್ಮ ‘ಶ್ರೀಮಂತ’ ಚಿತ್ರದ ಚಿತ್ರೀಕರಣದಲ್ಲಿ ಇರುವ ಚರಣ್‍ರಾಜ್ ವಿಡಿಯೊ ಮಾಡಿ ಕಂಬನಿ ಮಿಡಿದಿದ್ದು, ಕರುಣಾನಿಧಿ ಜೊತೆ ಕೆಲಸ ಮಾಡಿದ ದಿನಗಳನ್ನು ಸ್ಮರಿಸಿದ್ದಾರೆ. ತೆಲುಗು ಚಿತ್ರ ಮಾಡಿ ನಾನು ಮದ್ರಾಸ್ ಅಲ್ಲಿ ಸೆಟ್ಲ್ ಆಗಿದ್ದೆ. ಅಲ್ಲಿ ನನಗೆ ಇರೋದಿಕ್ಕೆ ಮನೆ ಕೂಡ ಇರಲಿಲ್ಲ. ಆ ಸಮಯದಲ್ಲಿ ಕರುಣಾನಿಧಿ ಅವರು ಸಿಎಂ ಆಗಿದ್ದರು. ಹೀಗಾಗಿ ಅವರ ಬಳಿ ಹೋಗಿ ಮನೆ ಬೇಕು ಅಂತ ಕೇಳಿದ್ದೆನು. ಆವಾಗ ಅವರು ನನ್ನ ದೊಡ್ಡ ಮಗ ಅಳಗಿರಿಯ ಮನೆ ಇದೆ ಬೇಕಾದ್ರೆ ತಗೋ ಅಂತ ಹೇಳಿದ್ದರು. ಈ ಮಾತು ಕೇಳುತ್ತಿದ್ದಂತೆಯೇ ನನಗೆ ಕಣ್ಣಲ್ಲಿ ನೀರು ಬಂತು. ಆ ಮನೆಗೆ ಅವರು ಹಣ ತಗೊಂಡಿಲ್ಲ. ಆದ್ರೆ ಅದನ್ನು ನನ್ನ ಹೆಸರಿಗೆ ರಿಜಿಸ್ಟಾರ್ ಮಾಡಿಸಿಕೊಟ್ಟರು. ಈ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ನನಗೆ ಮನೆ ಕೊಟ್ಟ ದೇವರು ಕರುಣಾ ನಿಧಿ ಎಂದು ಹೇಳಿ ಭಾವುಕರಾದರು.

 

 

ಅವರು 10 ವರ್ಷ ಇರ್ತಾರೆ. ಮತ್ತೆ ನಮ್ಮ ಸಿಎಂ ಆಗುತ್ತಾರೆ ಎಂದು ಅಂದುಕೊಂಡಿದ್ದೆವು. ಅವರ ಸೇವೆ ಬರೀ ರಾಜಕೀಯ ಮಾತ್ರವಲ್ಲದೇ ಸಿನಿಮಾ ರಂಗಕ್ಕೂ ಇದೆ. ತಮಿಳಿನ ನನ್ನ ಮೊದಲ ಸಿನಿಮಾ ನೀತಿಕ್ಕು ತಂಡನೈಗೆ ಕರುಣಾನಿಧಿಯವರೇ ಡೈಲಾಗ್ಸ್ ಬರೆದಿದ್ದರು ಎಂದು ಅವರು ತಿಳಿಸಿದರು.

ಕರುಣಾನಿಧಿ ಅವರು ನನಗೆ ಮನೆ ಕೊಟ್ಟ ದೇವರು ಇಂದು ನಮ್ಮ ಜೊತೆ ಇಲ್ಲ. ಅವರ ಅಂತಿಮ ದರ್ಶನ ಮಾಡಬೇಕೆಂಬ ಆಸೆ ಇತ್ತು. ಆದ್ರೆ ಚಿತ್ರೀಕರಣ ಇರುವುದರಿಂದ ಸಾಧ್ಯವಾಗಿಲ್ಲ. ಒಟ್ಟಿನಲ್ಲಿ ಒಬ್ಬ ಮಹಾನ್ ವ್ಯಕ್ತಿ ಇಂದು ದೇವರ ವಶವಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಸಂತಾಪ ಸೂಚಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top