fbpx
ಸಮಾಚಾರ

ಹೊಸ ಕೆಲಸ ಶುರು ಹಚ್ಕೊಂಡ ಸಿ ಎಂ ಕುಮಾರ ಸ್ವಾಮಿ ,ಏನ್ ಆ ಕೆಲಸ ಗೊತ್ತಾ .

ರೈತರನ್ನು ಹುರಿದುಂಬಿಸುವ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಟಿ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ರೈತರ ಸಮಸ್ಯೆಗಳನ್ನು ಅರಿಯಲು ಪ್ರಯತ್ನಿಸಲಿದ್ದಾರೆ ಎಂದು ತಿಳಿದು ಬಂದಿದೆ.

ನಾಳೆ ಆಗಸ್ಟ್ 11ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಸುಮಾರು 3 ಗಂಟೆಗಳ ಕಾಲ ಮಂಡ್ಯ ಜಿಲ್ಲೆಯ ಸೀತಾಪುರ ಗ್ರಾಮದಲ್ಲಿ ಗದ್ದೆಯೊಂದರಲ್ಲಿ ನಾಟಿ ಮಾಡಲು ನಿರ್ಧಾಮ ಮಾಡಿದ್ದಾರೆ. ಆಗಸ್ಟ್ 10ರಂದು ರಾತ್ರಿ ಮೈಸೂರಿಗೆ ತೆರಳಿ ವಾಸ್ತವ್ಯ ಮಾಡಲಿರುವ ಅವರು ಆಗಸ್ಟ್ 11ರಂದು ಬೆಳಗ್ಗೆ 8 ಗಮಟೆಗೆ ಮೈಸೂರಿನ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ದರ್ಶನ ಪಡೆದು ಮಂಡ್ಯ ಗೆ ಭೇಟಿ ನೀಡಿ ಭತ್ತ ನಾಟಿ ಮಾಡಲಿದ್ದಾರೆ. ರೈತರಾದ ಮಹದೇವಮ್ಮ, ದೇವರಾಜು, ಮಹೇಶ, ಹೇಮಲತ, ಮಾಯಮ್ಮ ಅವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನಾಟಿ ಮಾಡಲಿದ್ದಾರೆ

 

 

 

3 ವರ್ಷಗಳ ನಂತರ ಭತ್ತ ನಾಟಿ ಮಾಡುತ್ತಿದ್ದು, ರೈತರೊಂದಿಗೆ ನಾನೂ ಸಂತಸ ಹಂಚಿಕೊಳ್ಳಲು ಶನಿವಾರ ಮಂಡ್ಯದಲ್ಲಿ ಭತ್ತ ನಾಟಿ ಮಾಡಲಿದ್ದೇನೆ ಎಂದು ಸಿಎಂ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದರು. 3 ವರ್ಷದಿಂದ ತೊಗರಿ ಮತ್ತಿತರ ಬೆಳೆಗಳನ್ನು ಬೆಳೆಯುತ್ತಿದ್ದರು. ಈಗ ವಿರಾಮದ ಬಳಿಕ ಭತ್ತ ನಾಟಿ ಮಾಡುವ ಅವಕಾಶ ಸಿಕ್ಕಿದೆ. ಹೀಗಾಗಿ ಕೆಲ ಕಾಲ ಅವರೊಂದಿಗೆ ಕಳೆಯುತ್ತೇನೆ ಎಂದಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಗ್ರಾಮ ವಾಸ್ತವ್ಯದ ಮೂಲಕ ರಾಜ್ಯ ರೈತರಿಗೆ ಹತ್ತಿರವಾಗಿದ್ದ ಕುಮಾರಸ್ವಾಮಿ ಈಗಲೂ ಸಹ ಗ್ರಾಮ ವಾಸ್ತವ್ಯ ಮುಂದುವರೆಸುವುದಾಗಿ ಹೇಳಿದ್ದಾರೆ. ಇನ್ನು ಮಂಡ್ಯ ಜಿಲ್ಲೆಯ ಗ್ರಾಮದಲ್ಲಿ ಮಾತ್ರ ನಾಟಿ ಮಾಡುತ್ತಾರೋ ಮುಂಬರುವ ದಿನಗಳಲ್ಲಿ ಬೇರೆ ಜಿಲ್ಲೆಯಲ್ಲೂ ಕೂಡ ಈ ಕಾರ್ಯಕ್ರಮ ಮಾಡುತ್ತಾರೋ ಕಾದು ನೋಡಬೇಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top