fbpx
ಸಮಾಚಾರ

ಲೋಕಸಭಾ ಚುನಾವಣೆಗೆ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸ್ಪರ್ಧೆ? ಯಾವ ಕ್ಷೇತ್ರ ಗೊತ್ತಾ?

ಮುಂದಿನ ವರ್ಷದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರ್ನಾಟಕದಲ್ಲಿ ಸ್ಪರ್ಧಿಸುತ್ತಾರೆ ಎನ್ನುವ ಗುಸು ಗುಸು ಶುರುವಾಗಿದೆ. ಈ ಹಿಂದೆ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಸ್ಪರ್ಧೆ ಮಾಡಿ ಗೆದ್ದ ರೀತಿಯಲ್ಲಿಯೇ ರಾಹುಲ್‌ ಗಾಂಧಿ ಅವರು ಕೂಡ ಕರ್ನಾಟಕದಿಂದಲೇ ಸ್ಪರ್ಧಿಸಲು ಚಿಂತನೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿ ಅವರು ಬೀದರ್‌ ಲೋಕಸಭಾ ಕ್ಷೇತ್ರದ ಮೇಲೆ ಕಣ್ಣು ಹಾಕಿದ್ದಾರೆ ಎನ್ನೋ ಮಾತು ದಟ್ಟವಾಗಿದೆ.

ಆಗಸ್ಟ್ 13ರಂದು ಬೀದರ್‌ನಲ್ಲಿ ‘ಜನಧ್ವನಿ’ ಸಮಾವೇಶವನ್ನು ಕಾಂಗ್ರೆಸ್‌ ಆಯೋಜಿಸಿದ್ದು ಇದು ಬೀದರ್ ನಲ್ಲಿ ರಾಹುಲ್ ಸ್ಪರ್ಧೆಗೆ ಸಿದ್ಧತೆಯೇ ಎಂಬ ಸಂಶಯಕ್ಕೆ ಕಾರಣಮಾಡಿಕೊಟ್ಟಿದೆ.. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು, ‘’ರಾಹುಲ್‌ ಗಾಂಧಿ ಅವರು ಎಲ್ಲಿ ಬೇಕಾದರೂ ಸ್ಪರ್ಧಿಸಬಹುದು, ಅದು ಅವರಿಗೆ ಬಿಟ್ಟ ವಿಚಾರ. ಬೀದರ್‌ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ಸ್ಪರ್ಧಿಸುವ ಬಗ್ಗೆ ಈಗಲೇ ಹೇಳಲು ಆಗುವುದಿಲ್ಲ. ನಾನು ಹೇಳಕ್ಕಾಗಲ್ಲ’ ಎಂದು ಹೇಳಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಈಶ್ವರ ಖಂಡ್ರೆ ಅವರನ್ನು ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಿರುವ ಹಿನ್ನೆಲೆಯಲ್ಲಿ ಮತ್ತು ಉತ್ತರ ಕರ್ನಾಟಕ ಭಾಗಕ್ಕೆ ಕೊಡುಗೆ ನೀಡಿದ ಸಲುವಾಗಿ ರಾಹುಲ್‌ ಗಾಂಧಿ ಅವರನ್ನು ಅಭಿನಂದಿಸಲು ‘ಜನಧ್ವನಿ’ ಸಮಾವೇಶವನ್ನು ಆಯೋಜಿಸಲಾಗಿದೆ. ಆಗಸ್ಟ್ 13ರ ಸೋಮವಾರ ಬೆಳಿಗ್ಗೆ 11ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ‘ಜನಧ್ವನಿ’ ಸಮಾವೇಶಕ್ಕೆ ರಾಹುಲ್‌ ಗಾಂಧಿ ಆಗಮಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top