ಸಮಾಚಾರ

ಮಾಜಿ ಪ್ರಧಾನಿ ವಾಜಪೇಯಿ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ಬಿಜೆಪಿ ಮುಖಂಡರ ದೌಡು

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನಲೆಯಲ್ಲಿ ಮಾಜಿ ಪ್ರಧಾನಿ ವಾಜಪೇಯಿ ಅವರ ಆರೋಗ್ಯ ಏರುಪೇರಾಗಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಶಾ ಮತ್ತು ಕೇದ್ರ ಗೃಹ ಸಚಿ ರಾಜನಾಥ್​ ಸಿಂಗ್​ ಏಮ್ಸ್​​ ಆಸ್ಪತ್ರಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ಧಾರೆ ಎನ್ನಲಾಗಿದೆ.. ವೈದ್ಯರ ಸಲಹೆಯಂತೆ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಕಳೆದ ಮೂರು ದಶಕಗಳಿಂದ ವಾಜಪೇಯಿ ಅವರ ಖಾಸಗಿ ವೈದ್ಯರಾಗಿರುವ ಡಾ. ರಂದೀಪ್ ಗುಲೇರಿಯಾ ಅವರ ನೇತೃತ್ವದ ತಂಡ ವಾಜಪೇಯಿ ಅವರ ಆರೋಗ್ಯವನ್ನು ಪರಿಶೀಲಿಸುತ್ತಿದೆ..  ಆರೋಗ್ಯ ಸ್ಥಿತಿಯ ಬಗ್ಗೆ ಕ್ಷಣ ಕ್ಷಣದ ಮಾಹಿತಿ ಪ್ರಧಾನಿ ಕಾರ್ಯಾಲಯ ಪಡೆಯುತ್ತಿದೆ ಎನ್ನುತ್ತಿವೆ ಮೂಲಗಳು.

 

 

93 ವರ್ಷದ ವಾಜಪೇಯಿ ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಗೊಂಡು ಹಾಸಿಗೆ ಹಿಡಿದಿದ್ದರು., ಸದಾ ಗಾಲಿಕುರ್ಚಿಯಲ್ಲಿಯೇ ಸಹಾಯಕರ ನೆರವಿನಿಂದ ಓಡಾಡುವ ಸ್ಥಿತಿಗೆ ತಲುಪಿರುವ ವಾಜಪೇಯಿ ನೆನಪಿನ ಶಕ್ತಿಯನ್ನೂ ಕಳೆದುಕೊಂಡಿದ್ದರು ಎನ್ನಲಾಗಿತ್ತಿದೆ.. ಅತ್ಯಾಪ್ತರನ್ನೂ ಗುರುತುಹಿಡಿಯುವ ಶಕ್ತಿಯನ್ನು ವಾಜಪೇಯಿ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನಲೆಯಲ್ಲಿ ವಾಜಪೇಯಿ ಸಕ್ರಿಯ ರಾಜಕಾರಣದಿಂದ ದೂರ ಉಳಿದಿದ್ದರು. 2015ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವ, ಭಾರತ ರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಕಾಂಗ್ರೆಸ್ಸೇತರ ಸರ್ಕಾರದ ಪ್ರಧಾನಿಯಾಗಿ ಪೂರ್ಣಾವಧಿ (5 ವರ್ಷ) ಪೂರೈಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ವಾಜಪೇಯಿ ಪಾತ್ರರಾಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top