ಸಮಾಚಾರ

ಮಂಡ್ಯ ಉಪಚುನಾವಣೆಗೆ ಬಿಜೆಪಿಯಿಂದ ತೇಲಿಬಂದ ಅಚ್ಚರಿ ಹೆಸರು.

ಸಚಿವ ಪುಟ್ಟರಾಜು ಅವರ ರಾಜೀನಾಮೆಯಿಂದಾಗಿ ತೆರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ಸದ್ಯದಲ್ಲೇ ನಡೆಯಲಿದ್ದು ಬಿಜೆಪಿಯಿಂದ ಮಾಜಿ ಉಪ ಮುಖ್ಯಮಂತ್ರಿ ಆರ್ ಅಶೋಕ್‍ರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ. ಒಕ್ಕಲಿಗ ನಾಯಕರಾಗಿರೋ ಆರ್.ಅಶೋಕ್ ಅವರೇ ಒಕ್ಕಲಿಗ ಪ್ರಾಧನ್ಯತೆ ಹೆಚ್ಚಿರುವ ಮಂಡ್ಯ ಕ್ಷೇತ್ರಕ್ಕೆ ಸೂಕ್ತವಾದ ಅಭ್ಯರ್ಥಿ ಅಂತ ಬಿಜೆಪಿ ನಿರ್ಧರಿಸಿದೆ ಎನ್ನಲಾಗಿತ್ತು.

ಈಗಾಗಲೇ ಮೈತ್ರಿ ಸರ್ಕಾರದಲ್ಲಿ ಜೆಡಿಎಸ್, ಕಾಂಗ್ರೆಸ್ ಮುಖಂಡರುಗಳ ನಡುವೆ ತಿಕ್ಕಾಟ ಶುರುವಾಗಿದೆ ಇದರ ಪ್ರಯೋಜನ ಪಡೆದುಕೊಳ್ಳಲು ನಾವು ಪ್ರಬಲವಾದ ಅಭ್ಯರ್ಥಿಯನ್ನೇ ಕಣಕ್ಕಿಳಿಸಬೇಕಿದೆ.. ಹಾಗಾಗಿ ಒಕ್ಕಲಿಗರ ಪ್ರಭಾವ ಇರುವ ಮಂಡ್ಯ ಲೋಕಸಭೆ ಉಪಚುನಾವಣೆಗೆ ಆರ್.ಅಶೋಕ್ ಅವರನ್ನ ನಿಲ್ಲಿಸಬೇಕು. RSSನ ಅಭಿಪ್ರಾಯ ಕೂಡ ಇದೇ ಆಗಿದೆ ಎಂಬ ಮಾತು ಬಿಜೆಪಿ ವಲಯಗಳಲ್ಲಿ ಕೇಳಿಬಂದಿತ್ತು.

ಅಶೋಕ್ ಹಿಂದೇಟು.
ಆರ್. ಅಶೋಕ್​ ಒಕ್ಕಲಿಗ ಸಮುದಾಯದವರಾಗಿದ್ದರೂ ಸಹ ಮಂಡ್ಯದಲ್ಲಿ ಸ್ಪರ್ಧಿಸಲು ಹಿಂದೇಟು ಹಾಕಿದ್ದಾರೆ. ಯಾವುದೇ ಕಾರಣಕ್ಕೂ ಮಂಡ್ಯದಲ್ಲಿ ಸ್ಪರ್ಧಿಸಲ್ಲ ಎಂದು ಪಕ್ಷದ ವರಿಷ್ಠರಿಗೆ ಹೇಳಿದ್ದು, ಬೆಂಗಳೂರಿನಿಂದ ಮಂಡ್ಯಕ್ಕೆ ಹೋಗಿ ಸ್ಪರ್ಧೆ ಮಾಡುವುದು ಕಷ್ಟ ಎಂದಿದ್ದಾರೆ. ಕಡಿಮೆ ಅವಧಿಯಲ್ಲಿ ಕ್ಷೇತ್ರ ಸುತ್ತಾಡುವುದು ಕಷ್ಟ ಎಂಬುದು ಅವರ ಅಭಿಪ್ರಾಯವಾಗಿದೆ. ಅಶೋಕ್​ ಅಭಿಪ್ರಾಯಕ್ಕೆ ಮನ್ನಣೆ ನೀಡಿರುವ ಬಿಜೆಪಿ, ಒಕ್ಕಲಿಗ ಸಂಘದ ನಿರ್ದೇಶಕ ಶಿವಲಿಂಗಯ್ಯರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಎನ್ನಲಾಗಿದೆ.

ಮಂಡ್ಯದಲ್ಲಿ ಸ್ಪರ್ಧಿಸಲು ಆರ್.ಅಶೋಕ್ ಹಿಂದೇಟು ಹಾಕಿದ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯವರೇ ಆದ ಹಾಲಿ ಬಿಜೆಪಿ ವಕ್ತಾರರಾಗಿರುವ ಅಶ್ವತ್ ನಾರಾಯಣ ಅವರನ್ನು ಅಂತಿಮಗೊಳಿಸಲು ಬಿಜೆಪಿ ನಿರ್ಧರಿಸಿದ್ದು, ಸದ್ಯದಲ್ಲೇ ಅಧಿಕೃತ ಘೋಷಣೆ ಸಾಧ್ಯತೆ ಇದೆ.ಅಶ್ವತ್ ನಾರಾಯಣ್ ಅವರು ಮೂಲತಃ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಮಾಚನಹಳ್ಳಿ ಗ್ರಾಮದವರಾಗಿದ್ದರಿಂದ ಜೆಡಿಎಸ್ ಗೆ ಬಿಗ್ ಫೈಟ್ ಕೊಡಬಹುದು ಎಬುವುದು ಬಿಜೆಪಿಯ ಪ್ಲಾನ್ ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top