ಮನೋರಂಜನೆ

“ಕಳೆದ ಸಲ ಶಿವರಾಜಕುಮಾರ್​ ದಂಡು ಕೊಟ್ಟಿಕೊಂಡು ಬಂದು ಕುಣಿದರೂ ಗೆಲ್ಲಲಾಗಲಿಲ್ಲ” ಕುಮಾರ್ ಬಂಗಾರಪ್ಪ ವಾಗ್ದಾಳಿ.

ಲೋಕಸಭಾ ಚುನಾವಣೆಗೂ ಮುನ್ನವೇ ರಾಜ್ಯದಲ್ಲಿ ಚುನಾವಣಾ ಕಣ ರಂಗೇರುತ್ತಿದೆ.. ನವೆಂಬರ್ 3ರಂದು ನಡೆಯುವ ಉಪ ಚುನಾವಣೆಗೆ BS ಯಡಿಯೂರಪ್ಪ ರಾಜೀನಾಮೆಯಿಂದಾಗಿ ತೆರವಾಗಿರುವ ಶಿವಮೊಗ್ಗದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಅವರು ಸ್ಪರ್ಧಿಸುತ್ತಿದ್ದಾರೆ. ಇನ್ನು ಬಿಜೆಪಿಯಿಂದ BSY ಪುತ್ರ ರಾಘವೇಂದ್ರ ಅವರು ಕಣಕ್ಕಿಳಿಯುತ್ತಿದ್ದಾರೆ.. ಹೀಗಾಗಿ ಶಿವಮೊಗ್ಗದಲ್ಲಿ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ ಮತ್ತು ಮಧು ಬಂಗಾರಪ್ಪ ನಡುವೆ ನೇರ ಹಣಾಹಣಿ ಏರ್ಪಡಲಿದೆ..

 

 

ರಾಘವೇಂದ್ರ ಮತ್ತು ಮಧು ಬಂಗಾರಪ್ಪ ನಡುವಿನ ಈ ಹಣಾಹಣಿಯ ಬಗ್ಗೆ ಮಧು ಬಂಗಾರಪ್ಪ ಅವರ ಸಹೋದರ ಕುಮಾರ್ ಬಂಗಾರಪ್ಪ ಪ್ರತಿಕ್ರಿಯಿಸಿ ಜೆಡಿಎಸ್ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು “ಈ ಹಿಂದೆ 2014ರ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್​ನಿಂದ ನನ್ನ ತಂಗಿ ಸ್ಪರ್ಧಿಸಿದ್ದಳು. ಆಗ ಶಿವರಾಜ್ ಕುಮಾರ್‌ ಚಿತ್ರರಂಗದ ದಂಡು ಕಟ್ಟಿಕೊಂಡು ಬಂದು ರಸ್ತೆ ತುಂಬಾ ಕುಣಿದುಕೊಂಡು ಪ್ರಚಾರ ಮಾಡಿದ್ದರು. ಆದರೆ ಅವರಿಗೆ ಗೆಲ್ಲಲು ಸಾಧ್ಯವಾಗಲಿಲ್ಲ. ಚುನಾವಣೆಗೆ ಸ್ಪರ್ಧಿಸುವ ಮೊದಲು ಅಭಿವೃದ್ಧಿ ಪರ ಚಿಂತನೆ ಇರಬೇಕು. ಆದರೆ ಕಾಂಗ್ರೆಸ್ ಹಾಗೂ ಜೆಡಿಎಸ್​ಗೆ ಅದು ಇಲ್ಲ” ಎಂದು ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್​ ಮತ್ತು ಜೆಡಿಎಸ್​ ಪಕ್ಷಗಳಿಗೆ ಲೋಕಸಭಾ ಚುನಾವಣೆ ಎಂದರೆ ಹುಡುಗಾಟವಾಗಿದೆ.. ಮಧು ಬಂಗಾರಪ್ಪ ಸ್ಪರ್ಧಿಸಿದ ಮಾತ್ರಕ್ಕೆ ಜಾತಿಯ ಜನರು ಒಂದಾಗಿ ಮತ ಹಾಕಿ ಗೆಲ್ಲಿಸುತ್ತಾರೆ ಎಂಬ ಭಾವನೆ ತಪ್ಪು.. ಕಳೆದ ಬಾರಿ ನನ್ನ ತಂಗಿ ಸ್ಪರ್ಧಿಸಿದ್ದಾಗಲೇ ಜಾತಿ ಜನರನ್ನು ಒಟ್ಟುಗೂಡಿಸಲು ಸಾಧ್ಯವಾಗಿರಲಿಲ್ಲ. ಈಗ ಶಿವಮೊಗ್ಗದಲ್ಲಿ ಜೆಡಿಎಸ್ ಪಕ್ಷಕ್ಕೆ ನೆಲೆಯೇ ಇಲ್ಲ.. ಕಾಂಗ್ರೆಸ್​ ಪಕ್ಷಕ್ಕೆ ಅಭ್ಯರ್ಥಿಯೂ. ಹಾಗಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದವರು ಜಾತಿ ಧರ್ಮದ ಆಧಾರದಲ್ಲಿ ಮತ ಪಡೆಯಬಹುದು ಎಂಬ ಭಾವನೆಯಲ್ಲಿ ಚುನಾವಣೆ ನಡೆಸಲು ಮುಂದಾಗಿದ್ದಾರೆ” ಎಂದು ಕಿಡಿಕಾರಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top