ಸಿನಿಮಾ

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಿರುದ್ಧ FIR ದಾಖಲು- ಕಾರಣವೇನು ಗೊತ್ತಾ?

ಮಾಡಿದ್ದು ಮೂರೇ ಚಿತ್ರಗಳಾಗಿದ್ದರೂ ಮೂರಕ್ಕೆ ಮೂರನ್ನು ಸೂಪರ್ ಹಿಟ್ ಚಿತ್ರಗಳನಾಗಿಸಿ ಚಂದನವನದ ಯುವ ಸ್ಟಾರ್ ನಟನಾಗಿ ಬೆಳೆದಿರುವಾತ ಆಕ್ಷನ್ ಪ್ರಿನ್ಸ್ ದೃವ ಸರ್ಜಾ. ಅದ್ದೂರಿ, ಬಹುದ್ದೂರ್, ಭರ್ಜರಿಗಳಂತಹ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿರೋ ದೃವ ಸರ್ಜಾ ಅತಿ ಕಡಿಮೆ ಅವಧಿಯಲ್ಲಿಯೇ ಟಾಪ್ ಸ್ಟಾರ್’ಗಳ ಪಟ್ಟಿಯಲ್ಲಿ ಸೇರಿಕೊಂಡಿದ್ದಾರೆ., ಇಂಥಾ ದ್ರುವ ಸರ್ಜಾ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ.

ಅನಧಿಕೃತ ಜಾಹೀರಾತು ಫಲಕಗಳನ್ನು ತೆರವುಗೊಳಿಸುವಂತೆ ಸೂಚನೆ ನೀಡಿದ್ದರೂ, ದ್ರುವ ಹೆಸರಿನಲ್ಲಿ ಅಭಿಮಾನಿಗಳು ಪ್ಲೆಕ್ಸ್, ಮತ್ತು ಕಟ್ ಔಟ್ ಹಾಕಿರುವ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ., ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಈ ಬಗ್ಗೆ ದೂರು ನೀಡಿದ್ದವರು ಯಾರು ಎಂಬುದು ತಿಳಿದುಬಂದಿಲ್ಲ…

ಇತ್ತೀಚಿಗೆ ದ್ರುವ ಸರ್ಜಾ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು, ಆ ವೇಳೆ ಅವರಿಗೆ ಶುಭಾಶಯ ಕೋರುವ ಅನೇಕ ಪ್ಲೆಕ್ಸ್, ಬ್ಯಾನರ್ ಗಳನ್ನು ಅಭಿಮಾನಿಗಳು ಅವರ ನಿವಾಸದ ಸುತ್ತ ಮುತ್ತ ಹಾಕಿದ್ದರು. ಈ ಪ್ಲೆಕ್ಸುಗಳನ್ನ ಧ್ರುವ ಸರ್ಜಾ ಹಾಕಿಲ್ಲದಿದ್ದರೂ ಅವುಗಳ ಮೇಲೆ ಅವರ ಫೋಟೋ ಮತ್ತು ಹೆಸರು ಇರುವುದರಿಂದ ಅವರ ವಿರುದ್ಧ FIR ದಾಖಲಿಸಲಾಗಿದೆ.

ಹೊರ್ಡಿಂಗ್ ಹಾಗೂ ಫ್ಲೆಕ್ಸ್ ಗಳಿಂದ ನಗರದ ಸೌಂಧರ್ಯಕ್ಕೆ ಧಕ್ಕೆಯಾಗುತ್ತಿದ್ದು, ಅವುಗಳನ್ನು ಕೂಡಲೇ ತೆರವುಗೊಳಿಸಬೇಕು ಎಂದು ಹೈಕೋರ್ಟ್ ಬಿಬಿಎಂಪಿಗೆ ಆದೇಶಿಸಿತ್ತು. ಬಳಿಕ ನಗರದಲ್ಲಿ ಅನಧಿಕೃತ ಜಾಹೀರಾತು, ಫ್ಲೆಕ್ಸ್ ಗಳನ್ನು ಬಿಬಿಎಂಪಿ ನಿಷೇಧಿಸಿತ್ತು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top