ಮನೋರಂಜನೆ

ಶಿವಣ್ಣನ ‘ಆನಂದ್’ ಸಿನಿಮಾಗೆ ಮುಹೂರ್ತದ ದಿನವೇ ಫಿಕ್ಸ್ ಆಗಲಿದೆ ಸಿನಿಮಾ ರಿಲೀಸ್ ಡೇಟ್.

ಬಹುಷಃ ಶಿವಣ್ಣನಷ್ಟು ಬ್ಯುಸಿ ಇರೋ ನಟ ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲ ಬೇರೆ ಯಾವ ಚಿತ್ರರಂಗದಲ್ಲಿ ಕಾಣಸಿಗದಿಲ್ಲವೇನೋ ಗೊತ್ತಿಲ್ಲ? ಯಾಕಂದ್ರೆ ಶಿವಣ್ಣನ ಕೈಯಲ್ಲಿರುವ ಸಿನಿಮಾಗಳನ್ನು ನೋಡಿದರೆ ಎಂಥವರೂ ಕಂಗಾಲಾಗುತ್ತಾರೆ. ಸಧ್ಯ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಬಿಡುಗಡೆಗೆ ಸಿದ್ಧವಾಗಿದ್ದು ಇದರೊಂದಿಗೆ ರುಸ್ತುಂ, ಕವಚ, ದ್ರೋಣ ಚಿತ್ರಗಳೂ ಒಂದಷ್ಟು ಭಾಗಗಳ ಚಿತ್ರೀಕರಣವನ್ನು ಮುಗಿಸಿಕೊಂಡಿವೆ. ಈಗಿರುವಾಗ ಮತ್ತೊಂದು ಸಿನಿಮಾದಲ್ಲಿ ಶಿವಣ್ಣ ತೊಡಗಿಸಿಕೊಳ್ಳುತ್ತಿದ್ದಾರೆ.

 

 

ಪಿ.ವಾಸು ನಿರ್ದೇಶನದಲ್ಲಿ ಮತ್ತು ದ್ವಾರಕೀಶ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ ಶಿವಣ್ಣ ನಟಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತಲ್ಲಾ ಆ ಬಗ್ಗೆ ಮತ್ತೊಂದು ಅಪ್ ಡೇಟ್ ಸಿಕ್ಕಿದೆ. ಅಂದಹಾಗೆ ಈ ಚಿತ್ರಕ್ಕೆ ‘ಆನಂದ್’ ಎಂದು ಟೈಟಲ್ ಇಡಲು ಚಿಂತಿಸಲಾಗುತ್ತಿದ್ದು ಇನ್ನಷ್ಟೇ ಫೈನಲ್ ಆಗಬೇಕಿದೆ. “ಆನಂದ್‌’ ಶಿವರಾಜಕುಮಾರ್‌ ಅವರ ಮೊದಲ ಚಿತ್ರ. ಈಗ ಮತ್ತೂಮ್ಮೆ ಈ ಟೈಟಲ್‌ನಡಿ ಸಿನಿಮಾ ಮಾಡುವ ತಯಾರಿ ನಡೆಯುತ್ತಿದೆ.

ನವೆಂಬರ್ 9 ರಂದು ಸಿನಿಮಾ ಮುಹೂರ್ತ ನೆರವೇರಲಿದೆ. ಡಿಸೆಂಬರ್ 10 ರಿಂದ ಶೂಟಿಂಗ್ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದ್ದು, ಆಗಸ್ಟ್ 9 2019 ರಂದು ವರಮಹಾಲಕ್ಷ್ಮಿ ಹಬ್ಬವಿದ್ದು ಅಂದೇ ಸಿನಿಮಾ ರೀಲಿಸ್ ಮಾಡಲು ಚಿತ್ರ ತಂಡ ನಿರ್ಧರಿಸಿದೆ.

ದ್ವಾರಕೀಶ್‌ ಬ್ಯಾನರ್‌ನಲ್ಲಿ ಯೋಗಿ ದ್ವಾರಕೀಶ್‌ ನಿರ್ಮಾಣದಲ್ಲಿ ಸೆಟ್ಟೇರ್ತಿರೋ ದ್ವಾರಕೀಶ್‌ ಬ್ಯಾನರ್‌ನ 52ನೇ ಚಿತ್ರದಲ್ಲಿ ರಚಿತಾ ರಾಮ್ ಅವರು ಶಿವಣ್ಣನಿಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಸಿನಿಮಾಗೆ ಉಳಿದ ಪಾತ್ರಗಳಿಗೆ ಕಲಾವಿದರನ್ನು ಆಯ್ಕೆ ಮಾಡಬೇಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top