ಮನೋರಂಜನೆ

ಇಂದು ಡಾ.ವಿಷ್ಣುವರ್ಧನ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಹಿರಿಯ ನಟ ರಮೇಶ್ ಭಟ್

ವಿಷ್ಣು ಸೇನಾ ಸಮಿತಿ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ಪ್ರತಿ ವರ್ಷ ನೀಡುವ ಸಾಹಸ ಸಿಂಹ ಅಭಿನವ ಬಾರ್ಗವ ಡಾ||ವಿಷ್ಣುವರ್ಧನ್ ಪ್ರಶಸ್ತಿಯನ್ನ ಈ ಬಾರಿ ಹಿರಿಯ ನಟ ರಮೇಶ್ ಭಟ್ ಅವರಿಗೆ ನೀಡಲಾಗುತ್ತಿದೆ..

ಇಂದು ಸಾಯಂಕಾಲ (ಅಕ್ಟೋಬರ್ 16) 5 ಗಂಟೆಗೆ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ಕಚೇರಿಯ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ., ಪ್ರಶಸ್ತಿ 25 ಸಾವಿರ ರೂ.ನಗದು ಹಾಗೂ ಫಲಕ ಒಳಗೊಂಡಿದ್ದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

 

 

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದ್ದು ಡಾ ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ ಮತ್ತು ವಿಷ್ಣು ಅಭಿಮಾನಿಗಳ ಉಪಸ್ಥಿತಿ ಇರಲಿದೆ.

ಅಂದಹಾಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಪ್ರತಿ ವರ್ಷ ಅಭಿನವ ಭಾರ್ಗವ ಡಾ.ವಿಷ್ಣುವರ್ಧನ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಮೊದಲನೇ ವರ್ಷ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರಿಗೆ, 2ನೇ ವರ್ಷ ರೆಬೆಲ್ ಸ್ಟಾರ್ ಡಾ.ಅಂಬರೀಷ್ ಅವರಿಗೆ, 3ನೇ ವರ್ಷ ಹಿರಿಯ ನಟಿ ಡಾ.ಲೀಲಾವತಿ ಅವರಿಗೆ, 4ನೇ ವರ್ಷ ಡಾ.ಗಿರೀಶ್ ಕಾಸರವಳ್ಳಿ ಅವರಿಗೆ ನೀಡಲಾಗಿತ್ತು. ಅಂತೆಯೇ ಈ ವರ್ಷ ವಿಷ್ಣುವರ್ಧನ್ ಅವರ ಆಪ್ತ ಬಳಗದಲ್ಲಿ ಹೆಚ್ಚು ಗುರುತಿಸಿಕೊಂಡಿದ್ದ ರಮೇಶ್ ಭಟ್ ಅವರಿಗೆ ನೀಡಲಾಗುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top