ಸಮಾಚಾರ

ಆಸ್ಪತ್ರೆಯಿಂದ ಇಂದು ಶಿವರಾಜ್ ಕುಮಾರ್ ಡಿಸ್ಚಾರ್ಜ್.

ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ಡಿಸ್ಚಾರ್ಜ್ ಆಗಲಿದ್ದಾರೆ. ಶಿವಣ್ಣನ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಆಸ್ಪತ್ರೆಯಿಂದ ಮನೆಗೆ ತೆರಳಲಿದ್ದಾರೆ.

ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದ ನಟ ಶಿವ ರಾಜ್ಕುಮಾರ್ ಮೊನ್ನೆ(ಅಕ್ಟೋಬರ್ 15) ನಗರದ ಮಲ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಶಿವರಾಜ್​ ಕುಮಾರ್​ ಜೊತೆ ಆಸ್ಪತ್ರೆಯಲ್ಲಿ ಕುಟುಂಬ ಸದಸ್ಯರಿದ್ದು, ಈಗಾಗಲೇ ಪುನೀತ್ ಸೇರಿದಂತೆ ರಾಜಕುಮಾರ್ ಕುಟುಂಬದ ಸದಸ್ಯರು ಆಸ್ಪತ್ರೆಗೆ ತೆರಳಿ ಶಿವಣ್ಣನ ಆರೋಗ್ಯ ವಿಚಾರಿಸಿದ್ದರು.

ವೈರಲ್ ಜ್ವರ ಬಂದಿದ್ದು, ಡ್ರಿಪ್ಸ್ ನೀಡುತ್ತಿದ್ದಾರೆ. ಮನೆಯಲ್ಲಿ ಡ್ರಿಪ್ಸ್ ಹಾಕಲು ಆಗದಿರುವ ಕಾರಣ ಅವರು ಆಸ್ಪತ್ರೆಗೆ ಬರುವ ಅನಿವಾರ್ಯ ಬಂತು. ಶಿವಣ್ಣ ಕ್ಷೇಮವಾಗಿದ್ದಾರೆ ಎಂದು ತಿಳಿದುಬಂದಿದೆ.

ಸಧ್ಯ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಬಿಡುಗಡೆಗೆ ಸಿದ್ಧವಾಗಿದ್ದು ಇದರೊಂದಿಗೆ ರುಸ್ತುಂ, ಕವಚ, ದ್ರೋಣ ಚಿತ್ರಗಳೂ ಒಂದಷ್ಟು ಭಾಗಗಳ ಚಿತ್ರೀಕರಣವನ್ನು ಮುಗಿಸಿಕೊಂಡಿವೆ. ಚಿತ್ರರಂಗದಲ್ಲಿ ಫುಲ್‌ ಬ್ಯುಸಿಯಾಗಿರುವ ಶಿವಣ್ಣ ತುಸು ಆಯಾಸಗೊಂಡಿದ್ದರಿದ ಜ್ವರ ಬಂದಿದ್ದು ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top