ಮನೋರಂಜನೆ

“My dear ಹೀರೋ” ಅಂದ್ರು ಪ್ರಿಯಾ ಸುದೀಪ್ ,ಏನ್ ಆ ಹೀರೋ ಕಥೆ ನೀವೇ ನೋಡಿ

ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ದಿ ವಿಲನ್ ಇಂದು ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಆದರೆ ಸಿನಿಮಾ ಬಿಡುಗಡೆಯ ಮೊದಲೇ ಈ ಬಗ್ಗೆ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.ಈ ಹಿಂದೆ ನಿರ್ದೇಶಕ ಪ್ರೇಮ್​ ಅವರು , ದಿ ವಿಲನ್​ನಲ್ಲಿ ಸುದೀಪ್​ ಲುಕ್​ನ್ನು ಫಸ್ಟ್​ ಪ್ರಿಯಾಗೆ ತೋರಿಸಿ ಸೂಪರ್​ ಎನಿಸಿದ್ದರಂತೆ. ಅದನ್ನೇ ಸಿನಿಮಾದಲ್ಲಿ ಸುದೀಪ್​ಗೆ ಲುಕ್​ ಚೇಂಜ್​ ಮಾಡಲಾಗಿತ್ತಂತೆ. ಪ್ರಿಯಾ ನೋಡಿದ ಮೇಲೆ ಇಡೀ ಸಿನಿಮಾ ದಲ್ಲಿ ಸುದೀಪ್​ ಅದೇ ಲುಕ್ನಲ್ಲಿ ಕ್ರೇಜಿ ಬಾಯ್​ ಥರಾ ಕಾಣ್ತಿದ್ದಾರೆ ಎಂದು ಪ್ರೇಮ್ ಎಂದಿದ್ದರು.

.ಪ್ರಿಯಾ ಸುದೀಪ್ ಅವರು, ”ನಾನು ಇದುವೆರೆಗೂ ಈ ರೀತಿಯ ಕ್ರೇಜ್ ಅನ್ನು ಈ ಹಿಂದೆ ನೋಡಿಯೇ ಇರಲಿಲ್ಲ. ರಾಜ್ಯಾದ್ಯಂತ ಇದು ಹಬ್ಬದ ರೀತಿ ಆಗಿದೆ. ಎನರ್ಜಿಟಿಕ್ ಶಿವಣ್ಣ, ನಿರ್ದೇಶಕ ಪ್ರೇಮ್ ಹಾಗೂ ನನ್ನ ಪ್ರೀತಿಯ ಹೀರೋ ಸುದೀಪ್ ಸೇರಿದಂತೆ ಇಡೀ ‘ದಿ ವಿಲನ್’ ಚಿತ್ರತಂಡಕ್ಕೆ ನನ್ನ ಶುಭಾಶಯಗಳು” ಎಂದು ಬರೆದು ಟ್ವೀಟ್ ಮಾಡಿದ್ದಾರೆ.ಇಂದು ಹಲವು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಿ ಭರ್ಜರಿ ಯಶಸ್ವಿ ಪ್ರದರ್ಶನವನ್ನು ಕಾಣುತ್ತಿದೆ. ಇತ್ತೀಚೆಗೆ ಸುದೀಪ್ ಕುಟುಂಬ ಮೆಗಾಸ್ಟಾರ್ ಚಿರಂಜೀವಿ ಅವರನ್ನು ಭೇಟಿಯಾಗಿದ್ದರು. ಭೇಟಿಯಾಗಿದ್ದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

 

 

 

ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟ ಸುದೀಪ್ ‘ಅವುಕು ರಾಜಾ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಮುಖ್ಯ ಪಾತ್ರ ಪೋಷಿಸುತ್ತಿರುವ ಸುದೀಪ್ ಅವರ ಲುಕ್ ಈಗಾಗಲೇ ಬಹಿರಂಗವಾಗಿದೆಸೈರಾ ನರಸಿಂಹ ರೆಡ್ಡಿ’ ಚಿತ್ರದ ಶೂಟಿಂಗ್ ನ ಬಿಡುವಿನ ವೇಳೆ ಚಿರಂಜೀವಿ ಜೊತೆಗೆ ಸುದೀಪ್ ಕುಟುಂಬ ಸಮಯ ಕಳೆದಿದೆ. ಚಿರಂಜೀವಿ ಜೊತೆಗೆ ಸುದೀಪ್ ಪುತ್ರಿ ಸಾನ್ವಿ ಕೂಡ ಫೋಟೋ ತೆಗೆಸಿಕೊಂಡಿದ್ದಾರೆ. ಈ ಫೋಟೋ ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top