ಮನೋರಂಜನೆ

ಸ್ಯಾಂಡಲ್​ವುಡ್​ನಲ್ಲಿ ಮತ್ತೊಂದು #MeToo- ಅರ್ಜುನ್‌ ಸರ್ಜಾ ವಿರುದ್ಧ ಶೃತಿ ಹರಿಹರನ್‌ ಆರೋಪ.

ಸಿನಿಮಾ ಹೇರಿರೋಯಿನ್ನುಗಳಿಗೆ ಥರಥರದ ಕಾಟ ಕೊಡುವ ಪ್ರವೃತ್ತಿ ಎಲ್ಲ ಚಿತ್ರರಂಗಗಳಿಗೂ ಸಾಂಕ್ರಾಮಿಕವಾಗಿ ಹರಡಿರೋ ವಿಚಾರ ಈಗ ಗುಟ್ಟಾಗಿ ಉಳಿದಿಲ್ಲ. ಇಂಥಾ ಲೈಂಗಿಕ ಕಿರುಕುಳದ ವಿರುದ್ಧ ಸರಣಿ ಇದೀಗ ಎಲ್ಲೆಲ್ಲಿಯೋ ಬಿಚ್ಚಿಕೊಳ್ಳುತ್ತಿವೆ. ಇತ್ತೀಚಿನ ದಿನಗಳಲ್ಲಿ ದೇಶವ್ಯಾಪಿ ಭಾರಿ ಚರ್ಚೆಯನ್ನು ಹುಟ್ಟುಹಾಕಿರುವ ಇಂತಹ ಅನಿಷ್ಟ ಪಿಡುಗಿನ ವಿರುದ್ಧ ಭಾರತ ಚಿತ್ರರಂಗದ ಎಲ್ಲಾ ಭಾಷೆಯ ಪ್ರಸಿದ್ಧ ಯುವ ನಟಿಯರನೇಕರು ತಾವೇ ಅನುಭವಿಸಿದ್ದ ಕಾಸ್ಟಿಂಗ್ ಕೌಚ್ ಮನೋ ವ್ಯಾಕುಲವನ್ನು ಸಾಂದರ್ಭಿಕವಾಗಿ ಬಿಚ್ಚಿಡುತ್ತಿದ್ದಾರೆ..

ಇತ್ತೀಚಿಗೆ ಬಾಲಿವುಡ್ ನಟಿ ತನುಶ್ರೀ ದತ್ತಾ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ವಿರುದ್ಧ ಆರೋಪ ಮಾಡಿದೇಟಿಗೆ ಚಿತ್ರರಂಗದೊಳಗೆ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿ ಇಡೀ ದೇಶದಾದ್ಯಂತ ಸುದ್ದಿಗೆ ಗ್ರಾಸವಾಗಿತ್ತು. ಅದಾದೇಟಿಗೆ ಹಲವು ಚಿತ್ರರಂಗದ ನಟಿಯರೂ ಕೂಡ ಚಿತ್ರರಂಗದಲ್ಲಿ ತಮಗಾಗುತ್ತಿರುವ ಚಿತಾಹಿಂಸೆಯನ್ನು ಒಂದರ ಹಿಂದೊಂದರಂತೆ ಬಿಚ್ಚಿಡುತ್ತಾ ಬಂದಿದ್ದಾರೆ.. ಲೈಂಗಿಕ ಕಿರುಕುಳದ ವಿರುದ್ಧ Me Too ಅಭಿಯಾನ ಶುರುವಾಗಿದೆ..

 

 

ಬಾಲಿವುಡ್ ನಲ್ಲಿ #MeToo ಅಭಿಯಾನ ಜೋರಾಗಿದ್ದಂತೆ ಇತ್ತ ದಕ್ಷಿಣ ಭಾರತದ ಸಿನಿ ರಂಗದಲ್ಲೂ ಕೂಡ ಇದು ಸದ್ದು ಮಾಡುತ್ತಿದೆ. ಗಾಯಕ ರಘು ದೀಕ್ಷಿತ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದ ನಂತರ,ಇದೀಗ ನಟಿ ಶ್ರುತಿ ಹರಿಹರನ್​ ಸಹ ಖ್ಯಾತ ನಟ ಅರ್ಜುನ್ ಸರ್ಜಾ ಅವರಿದ ತಮಗಾದ ಅನುಭವದ ಕುರಿತು ಹೇಳಿಕೊಂಡಿದ್ದಾರೆ. ತಮಿಳಿನ ವಿಸ್ಮಯ ಸಿನಿಮಾದಲ್ಲಿ ಶೃತಿಹರಿಹರನ್​​ ಹಾಗೂ ಅರ್ಜುನ್​​ ಸರ್ಜಾ ಒಂದೇ ಸಿನಿಮಾದಲ್ಲಿ ನಟಿಸಿದ್ರು. ಈ ಸಿನಿಮಾ ಶೂಟಿಂಗ್​​ ವೇಳೆಯಲ್ಲಿ ಅರ್ಜುನ್​​ ಸರ್ಜಾ ನನ್ನೊಂದಿಗೆ ಅಸಹಜವಾಗಿ ವರ್ತಿಸುತ್ತಿದ್ರು” ಎಂದು ಹೇಳಿಕೆ ನೀಡಿದ್ದಾರೆ.

ವಾರಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಶ್ರುತಿ ಹರಿಹರನ್‌ ಅವರು ನಟ ಅರ್ಜುನ್ ಸರ್ಜಾ ವಿರುದ್ಧ ಮೀ ಟೂ ಆರೋಪ ಹೊರಿಸಿದ್ದಾರೆ. ಅರ್ಜುನ್‌ ಸರ್ಜಾ ಅವರ ಜತೆ ವಿಸ್ಮಯ ಸಿನಿಮಾದಲ್ಲಿ ನಟಿಸುವಾಗ ತನಗಾದ ಕೆಟ್ಟ ಅನುಭವಗಳ ಕುರಿತು ಹೇಳಿಕೊಂಡಿರುವ ಅವರು, ಸರ್ಜಾ ಅವರ ಜತೆ ನಟಿಸುವಾಗ ಕೆಟ್ಟ ಅನುಭವವಾಗಿತ್ತು. ತಮ್ಮ ಗಡಿರೇಖೆಯನ್ನೂ ದಾಟಿ ನನ್ನ ಜತೆ ವರ್ತಿಸಿದ್ದರು. ತಬ್ಬಿಕೊಳ್ಳುವ ದೃಶ್ಯದ ರಿಹರ್ಸಲ್‌ ವೇಳೆ ಅನ್​​ಕಂಫರ್ಟಬಲ್​ ಆಗುವ ರೀತಿ ವರ್ತಿಸಿದ್ದರು. ಆಗ ನಾನೇ ಒಂದು ಕ್ಷಣ ತಬ್ಬಿಬ್ಬಾಗಿದ್ದೆ ಎಂದು ಹೇಳಿಕೊಂಡಿದ್ದಾರೆ.

ಪತಿ – ಪತ್ನಿ ಪಾತ್ರದಲ್ಲಿ ಅಭಿನಯಿಸಿದರೆ ಗಡಿರೇಖೆ ಇರುತ್ತದೆ. ಆದರೆ ಅರ್ಜುನ್ ಸರ್ಜಾ ಆ ಗಡಿ ರೇಖೆಯನ್ನು ಸರ್ಜಾ ಮೀರಿದ್ದರು,, ಚಿತ್ರದಲ್ಲಿ ನಾನು ಅವರ ಹೆಂಡತಿಯಾಗಿ ನಟಿಸುತ್ತಿದ್ದೆ, ಅದರ ಪ್ರ್ಯಾಕ್ಟೀಸ್ ಮಾಡುತ್ತಿದ್ದೆವು. ಆಗ ಸರ್ಜಾ ‘ಇನ್ನೊಂಚೂರು ಹೀಗೆ ಪ್ರಾಕ್ಟೀಸ್ ಮಾಡಬಹುದಲ್ವಾ?’ ಅಂತ ಹೇಳಿ ಅವರು ನನ್ನನ್ನು ಜೋರಾಗಿ ತಬ್ಬಿಕೊಂಡರು. ಅವರ ವರ್ತನೆ ತುಂಬಾನೇ ಅಸಹ್ಯವಾಗಿತ್ತು. ಇದರಿಂದ ನನಗೆ ಇರಿಸು ಮುರುಸು ಉಂಟಾಗಿತ್ತು ಎಂದು ಶ್ರುತಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top