ಮನೋರಂಜನೆ

ಸರ್ಜಾ ವಿರುದ್ಧದ ಸೇಡಿಗಾಗಿ ಶೃತಿ ಹರಿಹರನ್ ಬೆನ್ನಿಗೆ ನಿಂತರೇ ಬಿರುಗಾಳಿ ಚೇತನ್?

ಬಾಲಿವುಡ್‌ನಲ್ಲಿ ಹುಟ್ಟಿಕೊಂಡ ಮೀ ಟೂ ಅಭಿಯಾನ ಸ್ಯಾಂಡಲ್‌ವುಡ್‌ನತ್ತಲೂ ಬಂದಿದೆ. ನಟಿಯರನೇಕರು ತಮಗಾದ ಲೈಂಗಿಕ ಕಿರುಕುಳಗಳ ಬಗ್ಗೆ ಹೇಳಿಕೊಂಡಿದ್ದಾರೆ. ಮತ್ತೆ ಕೆಲವರು ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ ನೊಂದವರ ಬೆನ್ನಿಗೆ ನಿಂತಿದ್ದಾರೆ. ಇದೀಗ ನಟ ಅರ್ಜುನ್‌ ಸರ್ಜಾ ವಿರುದ್ಧ ಯುವ ನಟಿ ಶೃತಿ ಹರಿಹರನ್‌ ಕಿರುಕುಳ ನೀಡಿದ್ದ ಆಪಾದನೆ ಮಾಡಿದ್ದಾರೆ.

ನಟಿ ಶ್ರುತಿ ಹರಿಹರನ್​ ಸಹ ಖ್ಯಾತ ನಟ ಅರ್ಜುನ್ ಸರ್ಜಾ ಅವರಿದ ತಮಗಾದ ಅನುಭವದ ಕುರಿತು ಹೇಳಿಕೊಂಡಿದ್ದಾರೆ. ತಮಿಳಿನ ವಿಸ್ಮಯ ಸಿನಿಮಾದಲ್ಲಿ ಶೃತಿಹರಿಹರನ್​​ ಹಾಗೂ ಅರ್ಜುನ್​​ ಸರ್ಜಾ ಒಂದೇ ಸಿನಿಮಾದಲ್ಲಿ ನಟಿಸಿದ್ರು. ಈ ಸಿನಿಮಾ ಶೂಟಿಂಗ್​​ ವೇಳೆಯಲ್ಲಿ ಅರ್ಜುನ್​​ ಸರ್ಜಾ ನನ್ನೊಂದಿಗೆ ಅಸಹಜವಾಗಿ ವರ್ತಿಸುತ್ತಿದ್ರು” ಎಂದು ಹೇಳಿಕೆ ನೀಡಿದ್ದಾರೆ. ಅರ್ಜುನ್​ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ನಟಿ ಶ್ರುತಿ ಹರಿಹರನ್ ಅವರ ಪರ ನಟ ಬಿರುಗಾಳಿ ಚೇತನ್ ಕೂಡ ನಿಂತಿದ್ದಾರೆ. ಆದರೆ ಚೇತನ್ ಹಣದ ಕಾರಣದಿಂದ ಶೃತಿ ಹರಿಹರನ್ ಬೆನ್ನಿಗೆ ನಿಂತಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

 

 

“ಪ್ರೇಮಬರಹ ಸಿನಿಮಾಗೆ ಮೊದಲು ಚೇತನ್ ಆಯ್ಕೆಯಾಗಿದ್ದರು. ಆ ವೇಳೆ ಅವರಿಗೆ ಆಪ್ಪ ₹10 ಲಕ್ಷ ಅಡ್ವಾನ್ಸ್ ಕೊಟ್ಟಿದ್ದರು. ಕಾರಣಾಂತರಗಳಿಂದ ಸಿನಿಮಾದಿಂದ ಅವರನ್ನು ಕೈ ಬಿಡಲಾಯ್ತು. ಆದರೆ, ಇಲ್ಲಿವರೆಗೂ ಚೇತನ್​ ಹಣ ವಾಪಸ್ ಮಾಡಿಲ್ಲ. ಚೇತನ್​ಗೆ ನೀಡಿದ್ದ ಅಡ್ವಾನ್ಸ್​ ₹10ಲಕ್ಷ ಹಣವನ್ನು ವಾಪಸ್ ನೀಡುವಂತೆ ಚಿತ್ರ ನಿರ್ಮಾಪಕ ಅರ್ಜುನ್ ಸರ್ಜಾ ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟ ಚೇತನ್, ಅರ್ಜುನ್ ಸರ್ಜಾ ಮೇಲೆ ಸಿಟ್ಟಾಗಿದ್ದರು. ಈ ಸೇಡನ್ನು ತೀರಿಸಿಕೊಳ್ಳುವ ಸಲುವಾಗಿ ಶ್ರುತಿಹರಿಹರನ್ ಪರವಾಗಿ ಚೇತನ್ ಮಾತನಾಡುತ್ತಿದ್ದಾರೆ” ಎಂದು ಅರ್ಜುನ್ ಸರ್ಜಾ ಸ್ನೇಹಿತರೊಬ್ಬರು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top