ಮನೋರಂಜನೆ

“ಅರ್ಜುನ್ ಸರ್ಜಾ ಕ್ಷಮೆ ಕೇಳುವುದು ದೊಡ್ಡತನ” ಶ್ರುತಿ ಹರಿಹರನ್ ಬೆಂಬಲಕ್ಕೆ ನಿಂತ ಪ್ರಕಾಶ್ ರೈ.

ಬಾಲಿವುಡ್‌ನಲ್ಲಿ ಹುಟ್ಟಿಕೊಂಡ ಮೀ ಟೂ ಅಭಿಯಾನ ಸ್ಯಾಂಡಲ್‌ವುಡ್‌ನತ್ತಲೂ ಬಂದಿದೆ. ನಟಿಯರನೇಕರು ತಮಗಾದ ಲೈಂಗಿಕ ಕಿರುಕುಳಗಳ ಬಗ್ಗೆ ಹೇಳಿಕೊಂಡಿದ್ದಾರೆ. ಮತ್ತೆ ಕೆಲವರು ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ ನೊಂದವರ ಬೆನ್ನಿಗೆ ನಿಂತಿದ್ದಾರೆ. ಇದೀಗ ನಟ ಅರ್ಜುನ್‌ ಸರ್ಜಾ ವಿರುದ್ಧ ಯುವ ನಟಿ ಶೃತಿ ಹರಿಹರನ್‌ ಕಿರುಕುಳ ನೀಡಿದ್ದ ಆಪಾದನೆ ಮಾಡಿದ್ದಾರೆ.

ನಟಿ ಶ್ರುತಿ ಹರಿಹರನ್​ ಸಹ ಖ್ಯಾತ ನಟ ಅರ್ಜುನ್ ಸರ್ಜಾ ಅವರಿದ ತಮಗಾದ ಅನುಭವದ ಕುರಿತು ಹೇಳಿಕೊಂಡಿದ್ದಾರೆ. ತಮಿಳಿನ ವಿಸ್ಮಯ ಸಿನಿಮಾದಲ್ಲಿ ಶೃತಿಹರಿಹರನ್​​ ಹಾಗೂ ಅರ್ಜುನ್​​ ಸರ್ಜಾ ಒಂದೇ ಸಿನಿಮಾದಲ್ಲಿ ನಟಿಸಿದ್ರು. ಈ ಸಿನಿಮಾ ಶೂಟಿಂಗ್​​ ವೇಳೆಯಲ್ಲಿ ಅರ್ಜುನ್​​ ಸರ್ಜಾ ನನ್ನೊಂದಿಗೆ ಅಸಹಜವಾಗಿ ವರ್ತಿಸುತ್ತಿದ್ರು” ಎಂದು ಹೇಳಿಕೆ ನೀಡಿದ್ದಾರೆ.

 

 

ಪ್ರಕಾಶ್ ರೈ ಬೆಂಬಲ:
ನಟ ಪ್ರಕಾಶ್ ರಾಜ್ ನಟಿ ಶ್ರುತಿ ಹರಿಹರನ್ ಪರ ನಿಂತಿದ್ದು, ಅವರಿಗಾದ ನೋವಿಗೆ ಸರ್ಜಾ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಶ್ರುತಿ ಹರಿಹರನ್ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತೆ..ದಿಟ್ಟ ಹೆಣ್ಣು. ಅರ್ಜುನ್ ಸರ್ಜಾ ಕೂಡ ಕನ್ನಡದ ಹೆಮ್ಮೆ. ನಾನು ಶ್ರುತಿ ಹರಿಹರನ್ ರವರ ಪರವಾಗಿ.. ಈ ಮೂಲಕ ಎಲ್ಲಾ ನೊಂದ ಹೆಣ್ಣು ಮಕ್ಕಳ ಪರವಾಗಿ ನಿಲ್ಲುತ್ತೇನೆ ಎಂದು ನಟ ಪ್ರಕಾಶ್‌ ರೈ ತಿಳಿಸಿದ್ದಾರೆ.

ಅರ್ಜುನ್ ಸರ್ಜಾ ಹಿರಿಯ ನಟರೂ ಎಂಬುದನ್ನೂ ಮರೆಯದಿರೋಣ. ಆದರೆ ಶ್ರುತಿಯವರ ಆರೋಪದ ಹಿನ್ನೆಲೆಯಲ್ಲಿ.. ಆ ಹೆಣ್ಣು ಅನುಭವಿಸಿದ ಅಸಹಾಯಕತೆ…ಅವಮಾನ…ಇಷ್ಟು ದಿನಗಳ ಕಾಲ ತನ್ನೊಳಗೆ ಹುದುಗಿಸಿಟ್ಟ ಆ ಗಾಯದ ನೋವನ್ನು ಅರ್ಥಮಾಡಿಕೊಳ್ಳಬೇಕಾಗಿದೆ.

ಅರ್ಜುನ್‌ವರು ಈ ಆರೋಪವನ್ನು ಅಲ್ಲಗಳೆದರೂ, ಅವರ ಆ ದಿನದ ವರ್ತನೆ ಆಕೆಯಲ್ಲಿ ಉಂಟುಮಾಡಿದ ನೋವಿಗಾಗಿ ಕ್ಷಮೆ ಕೇಳುವುದು ದೊಡ್ಡತನದ ಲಕ್ಷಣ. ಅರಿತೋ ಅರಿಯದೆಯೋ ನಾವು ಗಂಡಸರು ಹುಟ್ಟಿನಿಂದಲೇ ಹೆಣ್ಣಿನ ಬೇಕು ಬೇಡಗಳ ಬಗ್ಗೆ ಸೂಕ್ಷ್ಮತೆಯನ್ನು ಕಳೆದುಕೊಂಡಿರುವುದು ನಿಜ. ಹೆಣ್ಣುಮಕ್ಕಲೂ ತಮ್ಮ ಹಕ್ಕನ್ನು ಅರಿಯದೆ ಇರುವುದೂ ಅಷ್ಟೇ ನಿಜ…ಪ್ರಸ್ತುತ ಹೆಣ್ಣುಮಕ್ಕಳ ಮಿ ಟೂ ಅಭಿಯಾನ ಮುಂದಿನ ದಿನಗಳಲ್ಲಾದರೂ ನಮ್ಮ ಸಮಾಜದಲ್ಲಿ ಅವರ ಮೇಲಿನ ಶತಮಾನಗಳ ದೌರ್ಜನ್ಯಕ್ಕೆ .. ಅವಮಾನಗಳಿಗೆ.. ಅಸಹಾಯಕತೆಗೆ, ಕೊನೆಯನ್ನು ಕಾಣಲಿ… ನಾನು ಶ್ರುತಿ ಹರಿಹರನ್ ಅವರ ಪರವಾಗಿ ಈ ಮೂಲಕ ಎಲ್ಲ ನೊಂದ ಹೆಣ್ಣು ಮಕ್ಕಳ ಪರವಾಗಿ ನಿಲ್ಲುತ್ತೇನೆ”. ಎಂದು ಪ್ರಕಾಶ್ ರೈ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top