ಮನೋರಂಜನೆ

ಅಭಿಮಾನಿಗಳ ಪೈಶಾಚಿಕ ಕೃತ್ಯಕ್ಕೆ ಕಿಚ್ಚ ಸುದೀಪ್ ಗರಂ.

ಕನ್ನಡ ಚಿತ್ರರಂಗದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾ ಇದೇ ವಾರ ದೇಶಾದ್ಯಂತ ತೆರೆಕಂಡಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಕೇವಲ ಮೂರೇ ದಿನಗಳಲ್ಲಿ ಬರೋಬ್ಬರಿ 46ಕೋಟಿ ರೂಗಳನ್ನ ಬಾಚಿಕೊಂಡಿದ್ದು ಸ್ಯಾಂಡಲ್​ವುಡ್​ನ ಈ ಹಿಂದಿನ ಎಲ್ಲಾ ದಾಖಲೆಗಳನ್ನು ‘ದಿ ವಿಲನ್’ ಸಿನಿಮಾ ಧೂಳೀಪಟ ಮಾಡಿದೆ. ಸ್ಯಾಂಡಲ್​ವುಡ್​​ನ ಇಬ್ಬರು ಘಟಾನುಘಟಿ ಸ್ಟಾರ್​​ ನಟರು ಬಾಕ್ಸ್ ಆಫೀಸ್ ಅನ್ನು ಚಿಂದಿ ಉಡಾಯಿಸಿದ್ದಾರೆ. ಕನ್ನಡ ಸಿನಿಮಾವೊಂದು ಈ ಪಾಟಿ ಕಲೆಕ್ಷನ್ ಮಾಡಿರುವುದು ನಿಜಕ್ಕೂ ಸಂತೋಷ..

 

 

 

ಆದ್ರೆ ಕಿಚ್ಚ ಸುದೀಪ್ ಅಭಿಮಾನಿಗಳು ಕೋಣ, ಕುರಿಗಳಂತ ಪ್ರಾಣಿಗಳನ್ನು ಬಲಿ ಕೊಟ್ಟು ಕಟೌಟ್ ಹಾಗೂ ಪೋಸ್ಟರ್ ಗೆ ರಕ್ತದ ಅಭಿಷೇಕ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಚಾರ ಕಿಚ್ಚ ಸುದೀಪ್ ಕಿವಿಗೂ ಬಿದ್ದಿದೆ. ಹೀಗಾಗಿ, ಇಂತಹ ಪೈಶಾಚಿಕ ಕೃತ್ಯಗಳನ್ನು ನಿಲ್ಲಿಸುವಂತೆ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದಾರೆ.

“ಈ ರೀತಿಯ ಕೃತ್ಯಗಳನ್ನು ನಡೆಸುತ್ತಿರುವುದು ನಿಜಕ್ಕೂ ಅಮಾನವೀಯ. ನಾನು ನಿಮ್ಮ ಬಳಿ ಮನವಿ ಮಾಡಿಕೊಳ್ಳುತ್ತೇನೆ ದಯವಿಟ್ಟು ಇದನ್ನು ನಿಲ್ಲಿಸಿ. ವಿಲನ್ ಚಿತ್ರತಂಡ ನಿಮ್ಮ ಈ ರೀತಿಯ ಪ್ರೀತಿ ಹಾಗೂ ಗೌರವ ನೋಡಲು ಇಷ್ಟಪಡುವುದಿಲ್ಲ. ದಯವಿಟ್ಟು ಪ್ರಾಣಿಗಳನ್ನು ಬಲಿ ಕೊಡುವುದನ್ನು ನಿಲ್ಲಿಸಿ” ಎಂದು ಟ್ವೀಟ್ ಮಾಡಿ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top