ಮನೋರಂಜನೆ

#MeToo: ಸಂಜನಾ ವಿರುದ್ಧ’ಗಂಡ-ಹೆಂಡತಿ’ ಸಿನಿಮಾದ ನಿರ್ದೇಶಕ ರವಿ ಶ್ರೀವತ್ಸ ದೂರು.

ಬಾಲಿವುಡ್​ ಸೇರಿದಂತೆ ಎಲ್ಲಾ ಕಡೆ ಸಂಚಲನ ಮೂಡಿಸುತ್ತಿರುವ #MeToo ಅಭಿಯಾನ ವಿವಾದದ ಕೇಂದ್ರ ಬಿಂದುವಾಗುತ್ತಿವೆ. ಇತ್ತೀಚೆಗಷ್ಟೆ ನಟಿ ಸಂಜನಾ ಗಲ್ರಾಣಿ ಅವರು ನಿರ್ದೇಶಕ ರವಿ ಶ್ರೀವತ್ಸ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ‘ಗಂಡ ಹೆಂಡತಿ’ ಸಿನಿಮಾದ ಶೂಟಿಂಗ್ ಸಮಯದಲ್ಲಿ ನಿರ್ದೇಶಕ ತನಗೆ ಮುಜುಗರವಾಗುವಂತೆ ಚುಂಬನ ಹಾಗೂ ಹಸಿಬಿಸಿ ದೃಶ್ಯಗಳಲ್ಲಿ ಅಭಿನಯಿಸಲು ತನ್ನ ಮೇಲೆ ಒತ್ತಡ ಹೇರಿದ್ದರು. ಅದಕ್ಕೆ ವಿರೋಧಿಸಿದಕ್ಕೆ ಅವರು ತನಗೆ ಬೆದರಿಕೆ ಹಾಕಿ 50ಕ್ಕೂ ಹೆಚ್ಚು ಚುಂಬನದ ದೃಶ್ಯಗಳನ್ನು ಚಿತ್ರೀಕರಿಸಿದ್ದರು. ಅದು ಅವರ ಮೊದಲ ಸಿನಿಮಾ, ಆಗ ಅವರಿಗೆ 16 ವರ್ಷವಾಗಿದ್ದ ಕಾರಣ ಏನು ಮಾಡಬೇಕೆಂದು ತೋಚದೆ ಸುಮ್ಮನೆ ಇದ್ದರು ಆರೋಪಿಸಿದ್ದರು.

ನಟಿ ಸಂಜನಾ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. 12 ವರ್ಷಗಳ ನಂತರ ಸುಮ್ಮನೆ ಆರೋಪ ಮಾಡುತ್ತಿದ್ದಾರೆ. ಸಂಜನಾ ವಿರುದ್ಧ ಕ್ರಮಕೈಗೊಳ್ಳಬೇಕೆಂದು ರವಿ ಶ್ರೀವತ್ಸ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದಾರೆ. ಅಲ್ಲದೇ ಮುಂದಿನ ದಿನಗಳಲ್ಲಿ ಈ ಬಗ್ಗೆ ಕಾನೂನು ಹೋರಾಟ ಮಾಡುವುದಾಗಿಯೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಸದ್ಯ ರವಿ ಅವರ ದೂರನ್ನು ಸ್ವೀಕರಿಸಿರುವ ವಾಣಿಜ್ಯ ಮಂಡಳಿ ಅಧ್ಯಕ್ಷ ಚಿನ್ನೇಗೌಡ ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ.

ನಟಿ ಸಂಜನಾ ಮಾಡಿರುವ ಆರೋಪಕ್ಕೆ ಫೇಸ್ಬುಕ್ ನಲ್ಲಿ ಪ್ರತಿಕ್ರಿಯಿಸಿರುವ ನಿರ್ದೇಶಕ ರವಿ ಶ್ರೀವತ್ಸ ಕೆಲವೊಂದು ಆಪಾದನೆ, ಆರೋಪ, ನಿಂದನೆಗಳು ಬಂದಾಗ ಅವುಗಳಿಗೆ ಉತ್ತರ ಕೊಡದೇ ಸುಮ್ಮನಿರುವುದೇ ಸರಿ ಅಂದುಕೊಂಡಿದ್ದೆ ಆದರೆ ಅದು ತಪ್ಪು ಎಂದು ನನಗೆ ಈಗ ಅರ್ಥವಾಗಿದ್ದು ಡೆಡ್ಲಿ ಈಸ್ ಮಿಸ್ಟರ್ ಪರ್ಫೆಕ್ಟ್ ಎಂದು ನಿರೂಪಿಸುತ್ತೇನೆ ಎಂದು ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top