fbpx
ಮನೋರಂಜನೆ

2019ರ ಚುನಾವಣೆಗೆ BJP ರಣತಂತ್ರ: ಹಾಸನದಲ್ಲಿ ಕ್ರಿಕೆಟಿಗ ಶ್ರೀನಾಥ್’ಗೆ ಬಿಜೆಪಿ ಅಭ್ಯರ್ಥಿ?

ಮುಂದಿನ 2019ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಲೇ ರಾಜ್ಯದಲ್ಲಿ ರಾಜಕೀಯ ಬಿರುಸು ಪಡೆಯುತ್ತಿವೆ. ಪ್ರತಿಷ್ಠೆಯ ಕಣವಾಗಿರುವ ಈ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ರಾಜಕೀಯ ಪಕ್ಷಗಳು ಯಾವ್ಯಾವ ಪ್ರಭಾವಿ ವ್ಯಕ್ತಿಗಳನ್ನ ಬುಟ್ಟಿಗೆ ಹಾಕಿಕೊಂಡರೆ ಗೆಲುವು ಸಲೀಸಾಗುತ್ತದೆ ಎಂಬ ಲೆಕ್ಕಾಚಾರದಲ್ಲಿವೆ. ಅಂತೆಯೇ ರಾಜ್ಯದ ಆಡಳಿತಾರೂಢ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಶಾಕ್ ನೀಡಲು ಬಿಜೆಪಿ ರಣತಂತ್ರವನ್ನೇ ರೂಪಿಸುತ್ತಿದ್ದು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಘಟಾನುಘಟಿಗಳನ್ನು ಕಣಕ್ಕಿಳಿಸಲು ಯೋಜನೆ ಹಾಕಿಕೊಳ್ಳುತ್ತಿದೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಹಾಸನ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬದಲು ಪ್ರಜ್ವಲ್ ಸ್ಪರ್ಧೆ ಮಾಡಿದರೆ ಹಾಸನ ಜಿಲ್ಲೆಯವರೇ ಆಗಿರುವ ಶ್ರೀನಾಥ್ ಅಥವಾ ಗೋಪಿನಾಥ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆ ನಡೆಸಲಾಗಿದ್ದು ಈ ಮೂಲಕ ಹಾಸನದಲ್ಲಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಬಗ್ಗೆ ಕಾರ್ಯಕರ್ತರಲ್ಲಿರುವ ಅಸಮಧಾನದ ಲಾಭವನ್ನು ಪಡೆಯಲು ಬಿಜೆಪಿ ತಂತ್ರ ರೂಪಿಸಿದೆ ಎಂದು ಬಿಜೆಪಿ ಪಕ್ಷದ ಉನ್ನತ ಮೂಲಗಳ ಮಾಹಿತಿ ಲಭ್ಯವಾಗಿದೆ.

ಇನ್ನು ಜೆಡಿಎಸ್ ಕಾಂಗ್ರೆಸ್ ಮೈತ್ರಿ ಬಗ್ಗೆ ಅಸಮಾಧಾನ ಇರುವ ನಾಯಕರುಗಳನ್ನ ಬಿಜೆಪಿಗೆ ಸೆಳೆದು ಮೈತ್ರಿ ಪಕ್ಷಗಳನ್ನ ವೀಕ್ ಮಾಡಲು ಚಿಂತನೆ ಮಾಡಲಾಗಿದೆ.. ಒಟ್ಟಿನಲ್ಲಿ ಬಿಜೆಪಿಯ ಈ ಮಾಸ್ಟರ್ ಪ್ಲಾನ್ ವರ್ಕಔಟ್ ಆಗುತ್ತದೆಯೇ, ಶ್ರೀನಾಥ್ ಬಿಜೆಪಿ ಸೇರುತ್ತಾರೆಯೇ? ಎಂಬೆಲ್ಲಾ ಪ್ರಶ್ನೆಗಳಿಗೆ ಸ್ವಲ್ಪ ದಿನಗಳಲ್ಲಯೇ ಉತ್ತರ ಕೂಡ ಬೀಳಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top