ಮನೋರಂಜನೆ

ಮೀಟೂ ತಂದ ಸಂಕಷ್ಟ- ಶ್ರುತಿ ಹರಿಹರನ್ ಮೇಲೆ ಕೇಸು ಜಡಿದ ಅರ್ಜುನ್ ಸರ್ಜಾ.

ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಸ್ಯಾಂಡಲ್‍ವುಡ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಶ್ರುತಿ ಪರ ಧ್ವನಿಯೆತ್ತಿದರೆ, ಕೆಲವರು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ.. ಅರ್ಜುನ್ ಸರ್ಜಾ ಅವರನ್ನು ಸಮರ್ಥಿಸುವ ಭರದಲ್ಲಿ ಶೃತಿ ಹರಿಹರನ್ ನಡತೆ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಕೆಲವು ನಿರ್ಮಾಪಕರು, ನಟರು, ಜನಸಾಮಾನ್ಯರು ಮಿತಿಮೀರಿ ವರ್ತಿಸುತ್ತಿದ್ದಾರೆ. ಅಂತೆಯೇ ಶೃತಿಯನ್ನು ಸಮರ್ಥಿಸುವ ಭರದಲ್ಲಿ ಅರ್ಜುನ್ ಸರ್ಜಾ ಅವರಿಗೆ ಸ್ರೀಪೀಡಕನ ಪಟ್ಟ ಕಟ್ಟುವ ಕೆಲಸವೂ ಚಾಲ್ತಿಯಲ್ಲಿದೆ . ಈ ಎಲ್ಲಾ ವಿಚಾರಗಳು ಚಾಲ್ತಿಯಲ್ಲಿರುವಾಗಲೇ ಶ್ರುತಿ ಅವರಿಗೆ ಸಂಕಷ್ಟ ಎದುರಾಗಿದೆ.

ನಟ ಅರ್ಜುನ್ ಸರ್ಜಾ ಶ್ರುತಿ ವಿರುದ್ಧ ಮಾನನಷ್ಟ ಪ್ರಕರಣ ದಾಖಲಿಸಿದ್ದಾರೆ. ₹5 ಕೋಟಿಗೆ ಮಾನನಷ್ಟ ಮೊಕದ್ದಮೆ ಹೂಡಲು ಸರ್ಜಾ ನಿರ್ಧರಿಸಿದ್ದಾರೆ. ಇಂದು ಸಂಜೆ ಸುದ್ದಿಗೋಷ್ಟಿಯ ಬಳಿಕ ಅರ್ಜುನ್​ ಸರ್ಜಾ, ಧೃವ ಸರ್ಜಾ ಮೂಲಕ ಸಿವಿಲ್ ಕೋರ್ಟ್​​ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಲಿದ್ದಾರೆ. ಶ್ರುತಿ ಆರೋಪಗಳು ಗಂಭೀರವಾಗಿದ್ದು ಅವರ ಜತೆ ಸಂಧಾನ ಸಾಧ್ಯವೇ ಇಲ್ಲ ಎಂದು ನಟ ಅರ್ಜುನ್ ಸರ್ಜಾ ಹೇಳಿದ್ದಾರೆ.

ಇಂದು ಸಂಜೆ 4 ಗಂಟೆಗೆ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಂಧಾನ ಸಭೆ ನಿಗದಿಯಾಗಿತ್ತು. ಮಾನನಷ್ಟ ಮೊಕದ್ದಮೆ ಹಿನ್ನೆಲೆಯಲ್ಲಿ ಸಂಧಾನ ಸಭೆ ನಡೆಯುವುದು ಅನುಮಾನ ಎಂಬ ಮಾತುಗಳು ಕೇಳಿಬರುತ್ತಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top