ಮನೋರಂಜನೆ

ಅರ್ಜುನ್ ಸರ್ಜಾ ಮ್ಯಾನೇಜರ್ ಗೆ 1.5 ಕೋಟಿ ರೂ. ಡೀಲಿಂಗ್ ,ಶೃತಿ ಹರಿಹರನ್ ಸ್ಪಷ್ಟನೆ

ಬಾಲಿವುಡ್‌ನಲ್ಲಿ ಹುಟ್ಟಿಕೊಂಡ ಮೀ ಟೂ ಅಭಿಯಾನ ಸ್ಯಾಂಡಲ್‌ವುಡ್‌ನತ್ತಲೂ ಬಂದಿದೆ. ನಟಿಯರನೇಕರು ತಮಗಾದ ಲೈಂಗಿಕ ಕಿರುಕುಳಗಳ ಬಗ್ಗೆ ಹೇಳಿಕೊಂಡಿದ್ದಾರೆ. ಮತ್ತೆ ಕೆಲವರು ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ ನೊಂದವರ ಬೆನ್ನಿಗೆ ನಿಂತಿದ್ದಾರೆ. ಇದೀಗ ನಟ ಅರ್ಜುನ್‌ ಸರ್ಜಾ ವಿರುದ್ಧ ಯುವ ನಟಿ ಶೃತಿ ಹರಿಹರನ್‌ ಕಿರುಕುಳ ನೀಡಿದ್ದ ಆಪಾದನೆ ಮಾಡಿದ್ದಾರೆ.ನಟಿ ಶ್ರುತಿ ಹರಿಹರನ್​ ಸಹ ಖ್ಯಾತ ನಟ ಅರ್ಜುನ್ ಸರ್ಜಾ ಅವರಿದ ತಮಗಾದ ಅನುಭವದ ಕುರಿತು ಹೇಳಿಕೊಂಡಿದ್ದಾರೆ. ತಮಿಳಿನ ವಿಸ್ಮಯ ಸಿನಿಮಾದಲ್ಲಿ ಶೃತಿಹರಿಹರನ್​​ ಹಾಗೂ ಅರ್ಜುನ್​​ ಸರ್ಜಾ ಒಂದೇ ಸಿನಿಮಾದಲ್ಲಿ ನಟಿಸಿದ್ರು. ಈ ಸಿನಿಮಾ ಶೂಟಿಂಗ್​​ ವೇಳೆಯಲ್ಲಿ ಅರ್ಜುನ್​​ ಸರ್ಜಾ ನನ್ನೊಂದಿಗೆ ಅಸಹಜವಾಗಿ ವರ್ತಿಸುತ್ತಿದ್ರು” ಎಂದು ಹೇಳಿಕೆ ನೀಡಿದ್ದಾರೆ.

ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಸ್ಯಾಂಡಲ್‍ವುಡ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಶ್ರುತಿ ಪರ ಧ್ವನಿಯೆತ್ತಿದರೆ, ಕೆಲವರು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ.. ಇನ್ನೂ ಕೆಲವರು ಈ ವಿಚಾರಕ್ಕೆ ರಾಜಕೀಯ ಎಳೆದು ಧರ್ಮದ ಬಣ್ಣ ಕತ್ತೆ ಗಬ್ಬೆಬ್ಬಿಸಿದ್ದಾರೆ.. ಶ್ರುತಿ ಹರಿಹರನ್ ಮಾಡಿರುವ ಆರೋಪ ಈಗ ಯಾವ್ಯಾವುದೋ ತಿರುವುಗಳನ್ನ ಪಡೆದುಕೊಂಡಿದೆ. ಅರ್ಜುನ್ ಸರ್ಜಾ ಅವರನ್ನು ಸಮರ್ಥಿಸುವ ಭರದಲ್ಲಿ ಶೃತಿ ಹರಿಹರನ್ ನಡತೆ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಕೆಲವು ನಿರ್ಮಾಪಕರು, ನಟರು, ಜನಸಾಮಾನ್ಯರು ಮಿತಿಮೀರಿ ವರ್ತಿಸುತ್ತಿದ್ದಾರೆ. ಅಂತೆಯೇ ಶೃತಿಯನ್ನು ಸಮರ್ಥಿಸುವ ಭರದಲ್ಲಿ ಅರ್ಜುನ್ ಸರ್ಜಾ ಅವರಿಗೆ ಸ್ರೀಪೀಡಕನ ಪಟ್ಟ ಕಟ್ಟುವ ಕೆಲಸವೂ ಚಾಲ್ತಿಯಲ್ಲಿದೆ . ಈ ಎಲ್ಲಾ ವಿಚಾರಗಳ ಬಗ್ಗೆ ಸ್ವತಃ ಶ್ರುತಿ ಹರಿಹರನ್ ಅವರೇ ಟ್ವಿಟರ್ ಮೂಲಕ ಆರು ಅಂಶಗಳನ್ನ ಮುಂದೆ ಇಟ್ಟಿದ್ದರು .

 

 

 

ಈ ಬೆನ್ನಲೇ ಈ ಘಟನೆಯನ್ನು ದುರಪಯೋಗ ಮಾಡುವವರ ಸಂಖ್ಯೆಯು ಹೆಚ್ಚುತ್ತಿದೆ ,ಶ್ರುತಿ ಹರಿಹರನ್ ಮೀ ಟೂ ಆರೋಪ ಮಾಡಿದ ಮರುದಿನವೇ ಅನಾಮಿಕರೊಬ್ಬರು ನಟ ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಕರೆ ಮಾಡಿದ್ದಾನೆ. ನಾನು ಶೃತಿ ಹರಿಹರನ್ ಆಪ್ತ ಎಂದು ಹೇಳಿಕೊಂಡ ವ್ಯಕ್ತಿ, ಆರೋಪವನ್ನು ಮುಚ್ಚಿಹಾಕಲು ಹಾಗೂ ಸಂಧಾನ ಮಾಡಿಕೊಳ್ಳಲು ನಮಗೆ 1.5 ಕೋಟಿ ರೂ. ನೀಡಬೇಕು ಅಂತಾ ಬೇಡಿಕೆ ಇಟ್ಟಿದ್ದಾನೆ ಎಂದು ಶಿವಾರ್ಜುನ್ ತಿಳಿಸಿದ್ದರು.ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರಿಗೆ ಅನಾಮಿಕರೊಬ್ಬ ಕರೆ ಮಾಡಿರುವ ವಿಚಾರವಾಗಿ ಖಾಸಗಿ ಟಿವಿಗೆ ಪ್ರತಿಕ್ರಿಯೆ ನೀಡಿದ ಶೃತಿ ಹರಿಹರನ್, ಇದು ಸುಳ್ಳು ಆರೋಪ. ನಮ್ಮ ಅಪ್ಪ, ಅಮ್ಮ, ಅಜ್ಜಿ, ತಾತ ಹಾಗೂ ಸಂಬಂಧಿಕರನ್ನು ನಾನು ಕರೆದುಕೊಂಡು ಬಂದಿಲ್ಲ. ನಾನು ಏಕಾಂಗಿಯಾಗಿ ಹೋರಾಟ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಕುಟುಂಬದವರ ಅಥವಾ ಸ್ನೇಹಿತರ ಸಹಾಯ ಪಡೆಯುವುದಿಲ್ಲ. ಅಷ್ಟೇ ಅಲ್ಲದೆ ನನ್ನ ಆಪ್ತ ರಾಮ್ ಈ ವಿಚಾರದಲ್ಲಿ ತಲೆ ಹಾಕಿಲ್ಲ ಎಂದು ತಿಳಿಸಿದ್ದಾರೆ.

ಕರೆ ಮಾಡಿದ ವ್ಯಕ್ತಿ ಯಾವುದೇ ಪರಿಚಯ ಹೇಳಿಕೊಳ್ಳದೇ ಮಾತಿಗೆ ಇಳಿದಿದ್ದಾನೆ. ತಮ್ಮ ಬೇಡಿಕೆ ತಿಳಿಸುತ್ತಿದ್ದಂತೆ ಫೋನ್ ಕಟ್ ಮಾಡಿದ್ದ. ಇಬ್ಬರ ಆರೋಪ ಪ್ರತ್ಯಾರೋಪದ ಲಾಭ ಪಡೆಯಲು ಮೂರನೇ ವ್ಯಕ್ತಿ ಈ ರೀತಿ ಕರೆ ಮಾಡಿ ಈ ಘಟನೆಯನ್ನು ಮಿಸ್ ಯೂಸ್ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top