ಮನೋರಂಜನೆ

ಮೀಟೂ ಎಫೆಕ್ಟ್- ಶ್ರುತಿ ಹರಿಹರನ್ ವಿರುದ್ಧ ಎಫ್ಐಆರ್ ದಾಖಲು.

ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಸ್ಯಾಂಡಲ್‍ವುಡ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಶ್ರುತಿ ಪರ ಧ್ವನಿಯೆತ್ತಿದರೆ, ಕೆಲವರು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ.. ಅರ್ಜುನ್ ಸರ್ಜಾ ಅವರನ್ನು ಸಮರ್ಥಿಸುವ ಭರದಲ್ಲಿ ಶೃತಿ ಹರಿಹರನ್ ನಡತೆ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಕೆಲವು ನಿರ್ಮಾಪಕರು, ನಟರು, ಜನಸಾಮಾನ್ಯರು ಮಿತಿಮೀರಿ ವರ್ತಿಸುತ್ತಿದ್ದಾರೆ. ಅಂತೆಯೇ ಶೃತಿಯನ್ನು ಸಮರ್ಥಿಸುವ ಭರದಲ್ಲಿ ಅರ್ಜುನ್ ಸರ್ಜಾ ಅವರಿಗೆ ಸ್ರೀಪೀಡಕನ ಪಟ್ಟ ಕಟ್ಟುವ ಕೆಲಸವೂ ಚಾಲ್ತಿಯಲ್ಲಿದೆ . ಈ ಎಲ್ಲಾ ವಿಚಾರಗಳು ಚಾಲ್ತಿಯಲ್ಲಿರುವಾಗಲೇ ಶ್ರುತಿ ಅವರಿಗೆ ಸಂಕಷ್ಟ ಎದುರಾಗಿದೆ.

ಇಮೇಲ್ ಮತ್ತು ಟ್ವಿಟ್ಟರ್ ಹ್ಯಾಕ್ ಮಾಡಿದ ಹಿನ್ನೆಲೆಯಲ್ಲಿ ಅರ್ಜುನ್ ಸರ್ಜಾ ಅವ್ರು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ದುಷ್ಕರ್ಮಿಗಳು ಪ್ರೀಪ್ಲಾನ್ ಮಾಡಿಕೊಂಡು ಕಳೆದ ಆರು ತಿಂಗಳಿಂದ ಹ್ಯಾಕ್ ಮಾಡುತ್ತಿದ್ದಾರೆ. ಜೊತೆಗೆ ಇಮೇಲ್ ಹ್ಯಾಕ್ ಮಾಡಿದ ದುಷ್ಕರ್ಮಿಗಳು ವಿವಿಧ ಮೇಲ್‍ಗಳನ್ನು ಕಳಿಸುತ್ತಿದ್ದಾರೆ. ಹೀಗಾಗಿ ದೂರಿಗೆ ಸಂಬಂಧಿಸಿದಂತೆ ಕೆಲವು ದಾಖಲೆಗಳನ್ನು ಅರ್ಜುನ್ ಸರ್ಜಾ ಮ್ಯಾನೇಜರ್ ಶಿವಾರ್ಜುನ್ ಅವರು ಇಂದು ತಲುಪಿಸಿದ್ದಾರೆ.

ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಒಳಸಂಚು ರೂಪಿಸಿ, ಅವರ ಸಾಮಾಜಿಕ ಜಾಲತಾಣಗಳನ್ನ ಹ್ಯಾಕ್ ಮಾಡಿ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿದ್ದಾರೆ. ಶಿವ ಅರ್ಜುನ್ ಅವರ ಈ ದೂರಿನ ಅಡಿಯಲ್ಲಿ ಸೈಬರ್ ಪೊಲೀಸರು ಶ್ರುತಿ ಹರಿಹರನ್ ವಿರುದ್ಧ ಭಾರತೀಯ ದಂಡ ಸಂಹಿತೆ 120B, 385, 34, 109, 419, 114, 420 ಅಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.. ಇದರ ಜೊತೆಗೆ ಮಾಹಿತಿ ತಂತ್ರಜ್ಞಾನ ಕಾಯದೆಯಡಿಯಲ್ಲಿ ಕೂಡ ಈ ಕೇಸು ದಾಖಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top