ಸಮಾಚಾರ

ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅನಂತ್ ಕುಮಾರ್ ಹೆಗಡೆಗೆ ಗೇಟ್ ಪಾಸ್- ಕಾರಣವೇನು ಗೊತ್ತಾ?

ನವೆಂಬರ್ 3 ರಂದು ನಡೆಯುವ ರಾಜ್ಯದ ಉಪಚುನಾವಣೆಯಲ್ಲಿ ಕೇಂದ್ರ ಸಚಿವ ಅನಂತ್​​ಕುಮಾರ್ ಹೆಗಡೆ ಅವರನ್ನು ಬಿಜೆಪಿ ದೂರವಿಟ್ಟದೆ. ಯಾವುದೇ ಕ್ಷೇತ್ರಗಳಿಗೆ ಹೋಗಿ ಪ್ರಚಾರ ಮಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ.. ಉಪ ಚುನಾವಣೆಯ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಜೆಪಿ ಬಿಡುಗಡೆಗೊಳಿಸಿದ್ದು, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗ್ಡೆಯವರನ್ನು ಕೈ ಬಿಡಲಾಗಿದೆ.

ಹೇಳಿ ಕೇಳಿ ಅನಂತಕುಮಾರ್ ಹೆಗಡೆಯವರು ವಿವಾದಾತ್ಮಕ ಹೇಳಿಕೆಯನ್ನು ನೀಡುವುದರಲ್ಲಿ ನಿಸ್ಸೀಮರು. ಸಂವಿಧಾನವನ್ನೇ ಬದಲಿಸುತ್ತೇವೆ, ಪುಟಗೋಸಿ, ಜಾತ್ಯತೀತರಿಗೆ ಅಪ್ಪ ಅಮ್ಮ ಗೊತ್ತಿಲ್ಲ ಎಂಬಂತ ಅನೇಕ ಹೇಳಿಕೆಯಿಂದ ಪಕ್ಷಕ್ಕೆ ಮುಜುಗರ ಅನುಭವಿಸಿದೆ. ಈ ಹಿಂದಿನ ಕಹಿ ಅನುಭವದಿಂದ ಬಿಜೆಪಿ ಎಚ್ಚೆತ್ತುಕೊಂಡಿದೆ ಎನ್ನಲಾಗಿದೆ. ಅಲ್ಲದೇ ಹಿಂದುತ್ವದ ಬಗ್ಗೆ ಪ್ರಖರ ಮಾತುಗಳನ್ನಾಡಿ, ಹೋದಲ್ಲೆಲ್ಲಾ ಚಪ್ಪಾಳೆ ಸಿಳ್ಳೆ ಗಿಟ್ಟಿಸಿಕೊಳ್ಳುವ ಭರದಲ್ಲಿ ಅನಂತ್ ಕುಮಾರ್ ಹೆಗಡೆ ಅಲ್ಪಸಂಖ್ಯಾತ, ಜಾತ್ಯತೀತರ ಮತ್ತು ದಲಿತರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿರುವ ಉದಾಹರಣೆಗಳಿವೆ.

ಉಪ ಚುನಾವಣೆ ಎದುರಾಗಿರುವ ಎಲ್ಲಾ ಕ್ಷೇತ್ರಗಳಲ್ಲಿ ದಲಿತ ಮತ್ತು ಅಲ್ಪಸಂಖ್ಯಾತ ವರ್ಗದ ಮತಗಳು ಜಾಸ್ತಿ ಇದ್ದು ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಲಿವೆ.. ಒಂದು ವೇಳೆ ಅನಂತ್ ಕುಮಾರ್ ಹೆಗಡೆ ಅವರು ಪ್ರಚಾರದ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದರೆ ಚುನಾವಣೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಆದ್ದರಿಂದ, ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅವರನ್ನು ಕೈಬಿಡಲಾಗಿದೆ ಎಂದು ತಿಳಿದುಬಂದಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top