fbpx
ಮನೋರಂಜನೆ

“ನಾನು ಅರ್ಜುನ್ ಸರ್ಜಾರನ್ನು ಅಪರಾಧಿ ಎಂದು ಹೇಳಿಲ್ಲ, ಆದರೇ…” – ಪ್ರಕಾಶ್ ರೈ

ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಸ್ಯಾಂಡಲ್‍ವುಡ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಶ್ರುತಿ ಪರ ಧ್ವನಿಯೆತ್ತಿದರೆ, ಕೆಲವರು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ.. ಇನ್ನೂ ಕೆಲವರು ಈ ವಿಚಾರಕ್ಕೆ ರಾಜಕೀಯ ಎಳೆದು ಧರ್ಮದ ಬಣ್ಣ ಕತ್ತೆ ಗಬ್ಬೆಬ್ಬಿಸಿದ್ದಾರೆ.. ಶ್ರುತಿ ಹರಿಹರನ್ ಮಾಡಿರುವ ಆರೋಪ ಈಗ ಯಾವ್ಯಾವುದೋ ತಿರುವುಗಳನ್ನ ಪಡೆದುಕೊಂಡಿದೆ. ಅರ್ಜುನ್ ಸರ್ಜಾ ಅವರನ್ನು ಸಮರ್ಥಿಸುವ ಭರದಲ್ಲಿ ಶೃತಿ ಹರಿಹರನ್ ನಡತೆ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಕೆಲವು ನಿರ್ಮಾಪಕರು, ನಟರು, ಜನಸಾಮಾನ್ಯರು ಮಿತಿಮೀರಿ ವರ್ತಿಸುತ್ತಿದ್ದಾರೆ. ಅಂತೆಯೇ ಶೃತಿಯನ್ನು ಸಮರ್ಥಿಸುವ ಭರದಲ್ಲಿ ಅರ್ಜುನ್ ಸರ್ಜಾ ಅವರಿಗೆ ಸ್ರೀಪೀಡಕನ ಪಟ್ಟ ಕಟ್ಟುವ ಕೆಲಸವೂ ಚಾಲ್ತಿಯಲ್ಲಿದೆ . ಈ ಎಲ್ಲಾ ವಿಚಾರಗಳ ಬಗ್ಗೆ ಇದೀಗ ಬಹುಭಾಷಾ ನಟ ಪ್ರಕಾಶ್ ರೈ ತಮ್ಮ ಫೇಸ್ಬುಕ್ ನಲ್ಲಿ ಸವಿಸ್ತಾರವಾಗಿ ಬರೆದುಕೊಂಡಿದ್ದಾರೆ.

“ಅರ್ಜುನ್ ಸರ್ಜಾ ಕ್ಷಮೆ ಕೇಳಬಹುದಾಗಿತ್ತು ಅಂತ ನಾನು ಹೇಳಿದಾಗ ಜಗತ್ತು ನನ್ನ ಮೇಲೆ ತಿರುಗಿಬಿದ್ದಿತು. ಅರ್ಜುನ್ ಸರ್ಜಾ ತಪ್ಪು ಮಾಡಿದ್ದಾರೆ ಅಂತ ನಾನೆಂದೂ ಹೇಳಿರಲಿಲ್ಲ. ನಾನು ತಪ್ಪಾಗಿ ನಡೆದುಕೊಂಡಿದ್ದೇನೆ ಎಂಬ ಭಾವವನ್ನು ನಿನ್ನಲ್ಲಿ ಹುಟ್ಟಿಸಿದ್ದರೆ ಕ್ಷಮಿಸಿ ಅಂತ ಒಂದು ಕ್ಷಮಾಪಣೆಯನ್ನು ಮುಂದಿಡುವುದು ಆರೋಗ್ಯವಂಥ ಜೀವದ ಮೊದಲ ಲಕ್ಷಣ. ಸಿನಿಮಾದಲ್ಲಿ ಯಾವ ಕಾರಣಕ್ಕೋ ಯಾವ ಹೊತ್ತಿನಲ್ಲೋ ಯಾವುದೋ ಒಂದು ಸ್ಪರ್ಶ ಕೆಟ್ಟದ್ದು ಅಂತ ನಾಯಕಿಗೂ ಅನಿಸಿರಬಹುದು. ನಾಯಕನಿಗೂ ಅನಿಸಿರಬಹುದು. ಅದನ್ನು ಒಬ್ಬಾಕೆ ಹೇಳಿದಾಗ, ಹೌದೇ, ಹಾಗೇನಾದರೂ ಆಗಿದ್ದರೆ ಅದು ಉದೇಶಪೂರ್ವಕ ಅಲ್ಲ, ನನಗದು ಗೊತ್ತೂ ಆಗಲಿಲ್ಲ ಎಂದುಬಿಡುವುದಕ್ಕೆ ಅಹಂಕಾರ ಯಾಕೆ ಅಡ್ಡಿಬರಬೇಕು?” ಎಂದು ನೆನ್ನೆ ತಾನೇ ಪ್ರಕಾಶ್ ರೈ ಪೋಸ್ಟ್ ಮಾಡಿದ್ದರು.

ನಾನು ಅರ್ಜುನ್ ಸರ್ಜಾರನ್ನು ಅಪರಾಧಿ ಎಂದು ಹೇಳಿಲ್ಲ, ಆದರೇ..:
ಅದರಲ್ಲಿ, ಅರ್ಜುನ್ ನನ್ನ ಬಹುಕಾಲದ ಗೆಳೆಯ… ಸಹ ಪ್ರಯಾಣಿಕ… ಆತನನ್ನು ನಾನು ತುಂಬಾ ಚೆನ್ನಾಗಿ, ನಿಮ್ಮೆಲ್ಲರಿಗಿಂತಲೂ ಆಂತರಿಕವಾಗಿ ಬಲ್ಲೆ… ನಾನು ಎಲ್ಲೂ ಆತನನ್ನು ಸಾರಾಸಗಟಾಗಿ ಅಪರಾಧಿ ಎನ್ನಲಿಲ್ಲ… ಯಾರ ಬಗ್ಗೆಯೂ ಅರ್ಥವಿಲ್ಲದ ದೂಷಣೆ ಮಾಡುವವನೂ ನಾನಲ್ಲ… ಎಂದು ಬರೆದಿದ್ದಾರೆ.

ಶ್ರುತಿ.. ಎಲ್ಲರೂ ದೂಷಿಸುತ್ತಿರುವಂತೆ ಅವಕಾಶಿವಾಡಿ ಹೆಣ್ಣು ಮಗಳಲ್ಲ.. ಅಪ್ಪಟ ಪ್ರತಿಭಾವಂತೆ.. ದಿಟ್ಟ ಹೆಣ್ಣು.. ನಮ್ಮೆಲ್ಲರಂತೆ ಇವರನ್ನೂ ಬೆಳೆಸಿರುವುದು ನಮ್ಮ ಸಮಾಜವೇ….
ಈ ಇಬ್ಬರೂ ಚಿತ್ರರಂಗದಲ್ಲಿ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಕೆಲಸ ಮಾಡಬೇಕಾದವರೂ.. ಮಾಡಲು ಸಾಧ್ಯವಿರುವವರು..
ಈ ಸತ್ಯದ ಹಿನ್ನೆಲೆಯಲ್ಲಿ ನಾನು ತುಂಬಾ ಮಾರ್ಮಿಕವಾಗಿ ಕೆಳುತ್ತಿರುವ್ ಸೂಕ್ಷ್ಮತೆಯ ಪ್ರತಿಕ್ರಿಯೆ ಎಲ್ಲಿರಿಗೂ ಅರ್ಥವಾದರೆ ಒಳಿತು…
ಪಕ್ಷಪಾತವಿಲ್ಲದೆ.. ಪೂರ್ವಾಗ್ರಹಪೀಡಿತರಲ್ಲದ ಕೆಲವು ಹಿರಿಯರು ಇಬ್ಬರನ್ನೂ ಕರೆಸಿ ಕೂರಿಸಿ ತಕ್ಷಣವೇ ಇತ್ಯರ್ಥಿಸಿ… ಎಂದು ಬರೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top