ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಸ್ಯಾಂಡಲ್ವುಡ್ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಶ್ರುತಿ ಪರ ಧ್ವನಿಯೆತ್ತಿದರೆ, ಕೆಲವರು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ.. ಅರ್ಜುನ್ ಸರ್ಜಾ ಅವರನ್ನು ಸಮರ್ಥಿಸುವ ಭರದಲ್ಲಿ ಶೃತಿ ಹರಿಹರನ್ ನಡತೆ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಕೆಲವು ನಿರ್ಮಾಪಕರು, ನಟರು, ಜನಸಾಮಾನ್ಯರು ಮಿತಿಮೀರಿ ವರ್ತಿಸುತ್ತಿದ್ದಾರೆ. ಅಂತೆಯೇ ಶೃತಿಯನ್ನು ಸಮರ್ಥಿಸುವ ಭರದಲ್ಲಿ ಅರ್ಜುನ್ ಸರ್ಜಾ ಅವರಿಗೆ ಸ್ರೀಪೀಡಕನ ಪಟ್ಟ ಕಟ್ಟುವ ಕೆಲಸವೂ ಚಾಲ್ತಿಯಲ್ಲಿದೆ.
What do u say friends let’s stand and support the Gentlemen… #istandwithgentlemen @DhruvaSarja @meghanasraj @aishwaryaarjun @anj_arjun pic.twitter.com/EcdAAD1uvH
— Chiranjeevi Sarja (@chirusarja) October 25, 2018
ಈ ಎಲ್ಲಾ ವಿಚಾರಗಳು ಚಾಲ್ತಿಯಲ್ಲಿರುವಾಗಲೇ ಮೀಟೂ ಅಭಿಯಾನದಲ್ಲಿ ನಟ ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ವಿಫಲವಾಗಿವೆ. ಪ್ರಕರಣ ಈಗ ಕೋರ್ಟ್ ಮೆಟ್ಟಿಲನ್ನೂ ಹತ್ತಿವೆ.. ಈ ನಡುವೆಯೇ ಅಂಕಲ್ ಅರ್ಜುನ್ ಸರ್ಜಾ ಅವರ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಟ ಚಿರಂಜೀವಿ ಸರ್ಜಾ ಅವರು ಕ್ಯಾಂಪೇನ್ ಶುರು ಮಾಡಿದ್ದಾರೆ.
ತಮ್ಮ ಟ್ಟಿಟ್ಟರ್ ನಲ್ಲಿ “ಸ್ನೇಹಿತರೆ ನಾನು ಜೆಂಟಲ್ಮ್ಯಾನ್ ಅರ್ಜುನ್ ಸರ್ಜಾ ಅವರಿಗೆ ಬೆಂಬಲ ನೀಡುತ್ತೇನೆ, ನೀವು ಏನು ಹೇಳುತ್ತೀರಾ” ಎಂದು ಅರ್ಜುನ್ ಸರ್ಜಾ ಅವರ ಫೋಟೋ ಪೋಸ್ಟ್ ಮಾಡಿ, ಟ್ವೀಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಂಕಲ್ ಪರವಾಗಿ ಅಭಿಯಾನ ಶುರು ಮಾಡಿದ್ದಾರೆ. #istandwithgentlemen ಹ್ಯಾಷ್ಟ್ಯಾಗ್ ಅಡಿಯಲ್ಲಿ ಚಿರಂಜೀವಿ ಸರ್ಜಾ ಮತ್ತು ಅವರ ಪತ್ನಿ ಮೇಘನಾ ರಾಜ್ ಅಭಿಯಾನ ಆರಂಭಿಸಿದ್ದಾರೆ.
ಅರ್ಜುನ್ ಸರ್ಜಾಗೆ ಬೆಂಬಲ ಸೂಚಿಸುವಂತೆ ಕೋರಿ ಚಿರಂಜೀವಿ ಸರ್ಜಾ ಟ್ವೀಟ್ ಮಾಡಿದ್ದು, ಟ್ವೀಟ್ನಲ್ಲಿ ಧ್ರುವ ಸರ್ಜಾ, ಮೇಘನಾರಾಜ್, ಐಶ್ವರ್ಯ ಅರ್ಜುನ್ ಅರನ್ನು ಟ್ಯಾಗ್ ಮಾಡಲಾಗಿದೆ. ಚಿರಂಜೀವಿ ಸರ್ಜಾ ಅಭಿಯಾನವನ್ನು ಆರಂಭಿಸುತ್ತಿದ್ದಂತೆ, ನೂರಾರು ಜನರು ಟ್ವೀಟ್ ರೀಟ್ವೀಟ್ ಮಾಡಿ #istandwithgentlemen ಅಡಿಯಲ್ಲಿ ಟ್ವೀಟ್ ಮಾಡಿ ಬೆಂಬಲ ಸೂಚಿಸಿದ್ದಾರೆ.
copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ
