ಮನೋರಂಜನೆ

ಮೀಟೂ ಪ್ರಕರಣಕ್ಕೆ ಟ್ವಿಸ್ಟ್ -ಅರ್ಜುನ್​ ಸರ್ಜಾ ಆಪ್ತ ಪ್ರಶಾಂತ್​ ಸಂಬರ್ಗಿ ವಿರುದ್ಧ ಕಂಪ್ಲೇಂಟ್ ಕೊಟ್ಟ ಶ್ರುತಿ ಹರಿಹರನ್​.

ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಸ್ಯಾಂಡಲ್‍ವುಡ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಶ್ರುತಿ ಪರ ಧ್ವನಿಯೆತ್ತಿದರೆ, ಕೆಲವರು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ.. ಅರ್ಜುನ್ ಸರ್ಜಾ ಅವರನ್ನು ಸಮರ್ಥಿಸುವ ಭರದಲ್ಲಿ ಶೃತಿ ಹರಿಹರನ್ ನಡತೆ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಕೆಲವು ನಿರ್ಮಾಪಕರು, ನಟರು, ಜನಸಾಮಾನ್ಯರು ಮಿತಿಮೀರಿ ವರ್ತಿಸುತ್ತಿದ್ದಾರೆ. ಅಂತೆಯೇ ಶೃತಿಯನ್ನು ಸಮರ್ಥಿಸುವ ಭರದಲ್ಲಿ ಅರ್ಜುನ್ ಸರ್ಜಾ ಅವರಿಗೆ ಸ್ರೀಪೀಡಕನ ಪಟ್ಟ ಕಟ್ಟುವ ಕೆಲಸವೂ ಚಾಲ್ತಿಯಲ್ಲಿದೆ.

ಈ ಎಲ್ಲಾ ವಿಚಾರಗಳು ಚಾಲ್ತಿಯಲ್ಲಿರುವಾಗಲೇ ಮೀಟೂ ಅಭಿಯಾನದಲ್ಲಿ ನಟ ಅರ್ಜುನ್​ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಸರ್ಜಾ ಆಪ್ತ ಪ್ರಶಾಂತ್​ ಸಂಬರಗಿ ವಿರುದ್ಧ ಶ್ರುತಿ ದೂರು ನೀಡಿದ್ದಾರೆ.

ರಾತ್ರಿ 11:30ಕ್ಕೆ ನಗರದ ಹೈಗ್ರೌಂಡ್ಸ್​ ಠಾಣೆಗೆ ಭೇಟಿ ನೀಡಿ ದೂರು ದಾಖಲಿಸಿದ್ದಾರೆ. ದೂರಿನಲ್ಲಿ ಪ್ರಶಾಂತ್ ಸಂಬರಗಿ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದ್ದು, ಪ್ರಶಾಂತ್​ ಸಂಬರಗಿ ಜೀವ ಬೆದರಿಕೆ ಒಡ್ಡಿದ್ದಾರೆ ಮತ್ತು ತಮ್ಮ ಖಾಸಗಿತನಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ್ದಾರೆ.ದೂರು ಸ್ವೀಕರಿಸಿರುವ ಪೊಲೀಸರು ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top