fbpx
ಮನೋರಂಜನೆ

“ಸಂಧಾನ ಇಲ್ಲವೇ ಇಲ್ಲ.. ನನ್ನಿಂದ ತಪ್ಪಾಗಿದ್ದರೆ ಕೋರ್ಟ್ ನಲ್ಲಿ ನನಗೇ ಶಿಕ್ಷೆಯಾಗಲಿ” ಅರ್ಜುನ್ ಸರ್ಜಾ.

ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಸ್ಯಾಂಡಲ್‍ವುಡ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಶ್ರುತಿ ಪರ ಧ್ವನಿಯೆತ್ತಿದರೆ, ಕೆಲವರು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ.. ಅರ್ಜುನ್ ಸರ್ಜಾ ಅವರನ್ನು ಸಮರ್ಥಿಸುವ ಭರದಲ್ಲಿ ಶೃತಿ ಹರಿಹರನ್ ನಡತೆ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಕೆಲವು ನಿರ್ಮಾಪಕರು, ನಟರು, ಜನಸಾಮಾನ್ಯರು ಮಿತಿಮೀರಿ ವರ್ತಿಸುತ್ತಿದ್ದಾರೆ. ಅಂತೆಯೇ ಶೃತಿಯನ್ನು ಸಮರ್ಥಿಸುವ ಭರದಲ್ಲಿ ಅರ್ಜುನ್ ಸರ್ಜಾ ಅವರಿಗೆ ಸ್ರೀಪೀಡಕನ ಪಟ್ಟ ಕಟ್ಟುವ ಕೆಲಸವೂ ಚಾಲ್ತಿಯಲ್ಲಿದೆ.

ಈ ಎಲ್ಲಾ ವಿಚಾರಗಳು ಚಾಲ್ತಿಯಲ್ಲಿರುವಾಗಲೇ ಮೀಟೂ ಅಭಿಯಾನದಲ್ಲಿ ನಟ ಅರ್ಜುನ್​ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಇಬ್ಬರೂ ಕಾನೂನಿನ ಮೊರೆ ಹೋಗಿದ್ದಾರೆ. ನಿನ್ನೆಯಷ್ಟೇ ಶ್ರುತಿ ಹರಿಹರನ್​ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದರು. ಇದರ ಬೆನ್ನಲ್ಲೇ ಶ್ರುತಿ ಹರಿಹರನ್​ ಕೂಡ ಅರ್ಜುನ್ ಸರ್ಜಾ ಮತ್ತು ಅವರ ಆಪ್ತರ ವಿರುದ್ಧ ದೂರು ನೀಡಿದ್ದಾರೆ.

ಸಂಧಾನಕ್ಕೆ ಇಲ್ಲಿ ಜಾಗವಿಲ್ಲ:
ಸಂಧಾನ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ಅರ್ಜುನ್ ಸರ್ಜಾ, ಪ್ರಸ್ತುತ ತಾವು ಪ್ರಕರಣದ ಸಂಬಂಧ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಇಲ್ಲಿ ಸಂಧಾನದ ಮಾತೇ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೆ ತಾವು ಕೋರ್ಟ್ ನಲ್ಲೇ ನ್ಯಾಯಕ್ಕಾಗಿ ಹೋರಾಡಲಿದ್ದು, ಕೋರ್ಟ್ ತಪ್ಪು ನನ್ನದೇ ಎಂದು ತೀರ್ಪು ನೀಡಿದರೆ ಖಂಡಿತಾ ನಾನು ಶಿಕ್ಷೆ ಅನುಭವಿಸಲು ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ.

ನನ್ನ ತೇಜ್ಯೋವಧೆಗೆ ಕೆಲವರು ಪ್ರಯತ್ನಿಸುತ್ತಿದ್ದಾರೆ. ಅದು ಯಾರೆಂಬುವುದು ನಿಮಗೆಲ್ಲರಿಗೂ ತಿಳಿಯಲಿದೆ. ಪ್ರಕರಣ ನ್ಯಾಯಾಲಯದಲ್ಲಿ ಇದ್ದಿದ್ದರಿಂದ ಹೆಚ್ಚಾಗಿ ಮಾತನಾಡೋದಿಲ್ಲ. ಮಾಧ್ಯಮಗಳ ಮುಂದೆ ಪ್ರಕರಣದ ಕುರಿತು ಹೆಚ್ಚು ಮಾತನಾಡಬಾರದು ಹಿರಿಯರು ಹೇಳಿದ್ದಾರೆ. ಹಾಗಾಗಿ ನಾನು ಏನು ಹೇಳಲ್ಲ. ಸಂಧಾನ ಎಂಬುವುದೇ ಇಲ್ಲ ಎಂದು ಖಡಕ್ ಆಗಿ ಹೇಳಿದರು.

ಕಳೆದ 35ರಿಂದ 38 ವರ್ಷಗಳಿಂದ ಅಪಾರ ಗೌರವವನ್ನು ಹೊಂದಿದ್ದೇನೆ. ಇಂದು ನನಗೆ ಕರೆದರು ಹಾಗಾಗಿ ಬಂದಿದ್ದೇನೆ. ನನಗೆ ನೋವು ಆಗಿದ್ದರೆ, ಸುಮ್ಮನಿರುತ್ತಿದ್ದೆ. ನನ್ನನ್ನು ನಂಬಿದವರು, ಕುಟುಂಬ ಸದಸ್ಯರು ಕೇರಳ, ತಮಿಳುನಾಡು, ಆಂಧ್ರ ಕರ್ನಾಟಕದ ಅಭಿಮಾನಿಗಳು ನೊಂದಿದ್ದಾರೆ. ಹಾಗಾಗಿ ನಾನು ನ್ಯಾಯಾಲಯದ ಮೊರೆ ಹೋಗುತ್ತಿದ್ದೇನೆ ಅಂತಾ ಅರ್ಜುನ್ ಸರ್ಜಾ ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top