ಮನೋರಂಜನೆ

“ಶೃತಿ ಹರಿಹರನ್‍ಗೆ ಅಮೆರಿಕದಿಂದ ಹಣ ಸಂದಾಯವಾಗುತ್ತಿದೆ” ಹೊಸ ಬಾಂಬ್ ಸಿಡಿಸಿದ ಪ್ರಮೋದ್ ಮುತಾಲಿಕ್.

ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯಂತೆ ಎದ್ದಿರುವ #MeToo ಅಭಿಯಾನ ವಿವಾದದ ಕೇಂದ್ರ ಬಿಂದುವಾಗುತ್ತಿವೆ. ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಸ್ಯಾಂಡಲ್‍ವುಡ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಶ್ರುತಿ ಪರ ಧ್ವನಿಯೆತ್ತಿದರೆ, ಕೆಲವರು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ.. ಅರ್ಜುನ್ ಸರ್ಜಾ ಅವರನ್ನು ಸಮರ್ಥಿಸುವ ಭರದಲ್ಲಿ ಶೃತಿ ಹರಿಹರನ್ ನಡತೆ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಕೆಲವು ನಿರ್ಮಾಪಕರು, ನಟರು, ಜನಸಾಮಾನ್ಯರು ಮಿತಿಮೀರಿ ವರ್ತಿಸುತ್ತಿದ್ದಾರೆ. ಅಂತೆಯೇ ಶೃತಿಯನ್ನು ಸಮರ್ಥಿಸುವ ಭರದಲ್ಲಿ ಅರ್ಜುನ್ ಸರ್ಜಾ ಅವರಿಗೆ ಸ್ರೀಪೀಡಕನ ಪಟ್ಟ ಕಟ್ಟುವ ಕೆಲಸವೂ ಚಾಲ್ತಿಯಲ್ಲಿದೆ.

ಈ ಎಲ್ಲಾ ವಿಚಾರಗಳು ಚಾಲ್ತಿಯಲ್ಲಿರುವಾಗಲೇ ಮೀಟೂ ಅಭಿಯಾನದಲ್ಲಿ ನಟ ಅರ್ಜುನ್​ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಇಬ್ಬರೂ ಕಾನೂನಿನ ಮೊರೆ ಹೋಗಿದ್ದಾರೆ. ನಿನ್ನೆಯಷ್ಟೇ ಶ್ರುತಿ ಹರಿಹರನ್​ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದರು. ಇದರ ಬೆನ್ನಲ್ಲೇ ಶ್ರುತಿ ಹರಿಹರನ್​ ಕೂಡ ಅರ್ಜುನ್ ಸರ್ಜಾ ಮತ್ತು ಅವರ ಆಪ್ತರ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

ಈ ನಡುವೆ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಅವರು, ಮೀಟೂ ಅಭಿಯಾನ ಇಂದು ಶೋಷಿತ ಮಹಿಳೆಯರಿಗೆ ಧ್ವನಿ ನೀಡಿದೆ. ಮೀಟೂ ಅಭಿಯಾನಕ್ಕೆ ನನ್ನ ಬೆಂಬಲವೂ ಇದೆ. ಆದರೆ ಇಂದು ನಟ ಅರ್ಜುನ್ ಸರ್ಜಾ ರಂತಹ ಸಭ್ಯರ ಮೇಲೆ ಶೃತಿ ಹರಿಹರನ್ ಅವರು ಆರೋಪ ಮಾಡಿರುವುದು ಕುತಂತ್ರದ ಭಾಗವಾಗಿದೆ ಎಂದರು.

“ಅರ್ಜುನ್ ಸರ್ಜಾರ ಅವರ ಹಿನ್ನೆಲೆ ನನಗೆ ಗೊತ್ತಿದೆ. ಅವರ ಸಮಾಜ ಮುಖಿ ಕಾರ್ಯಗಳನ್ನು ಗಮನಿಸಿದರೇ ಇದು ಸ್ಪಷ್ಟವಾಗುತ್ತದೆ. ಈ ಆರೋಪದ ಹಿಂದಿನ ಕುತಂತ್ರಗಳನ್ನು ಅರ್ಜುನ್ ಸರ್ಜಾ ಆಪ್ತ ಕಾರ್ಯದರ್ಶಿ ಪ್ರಶಾಂತ್ ಸಂಬರ್ಗಿ ಅವರು ಈಗಾಗಲೇ ತಿಳಿಸಿದ್ದಾರೆ. ಅಮೆರಿಕದಿಂದ ಹಣ ಸಂದಾಯವಾಗಿವ ಆರೋಪ ಶ್ರುತಿ ಮೇಲೆ ಇದೆ. ಶೃತಿ ಅವರು ಯಾರದ್ದೋ ಮಾತು ಕೇಳಿ ಅಥವಾ ಯಾವುದೋ ಆಮಿಷಕ್ಕೆ ಒಳಗಾಗಿ ಈ ರೀತಿ ಆರೋಪ ಮಾಡುತ್ತಿದ್ದಾರೆ. ಇಂದು ಶೃತಿ ಅವರಿಗೆ ಹಣ ಬರುತ್ತಿರುವುದು ನೂರಕ್ಕೆ ನೂರರಷ್ಟು ನಾನು ಒಪ್ಪುತ್ತೇನೆ. ನಮ್ಮ ಬೆಂಬಲ ಅರ್ಜುನ್ ಸರ್ಜಾ ಅವರ ಇರಲಿದ್ದು ಈ ಪ್ರಕರಣದಲ್ಲಿ ಅವರು ನಿರ್ದೋಷಿ ಎಂದು ನನಗನಿಸುತ್ತಿದೆ. ಇಂಥ ಸಭ್ಯ ನಟನ ಮೇಲೆ ಆಪಾದನೆ ಸರಿಯಲ್ಲ. ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡುವಂಥ ವ್ಯಕ್ತಿ ಅಲ್ಲ.” ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top