ಸಮಾಚಾರ

ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಬಂಧನ- ಕಾರಣವೇನು?

ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮತ್ತು ಇತರೆ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಸಚಿವ ಆರ್‌.ಎಸ್‌ ಸುರ್ಜೇವಾಲಾ ತಿಳಿಸಿದ್ದಾರೆ. ಸಿಬಿಐ ನಿರ್ದೇಶಕ ಅಲೋಕ್​ ಕುಮಾರ್​ ವರ್ಮಾ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಿರುವುದನ್ನು ವಿರೋಧಿಸಿ ದೆಹಲಿಯ ಸಿಬಿಐ ಮುಖ್ಯಕಚೇರಿಯ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಮತ್ತು ಇತರೆ ನಾಯಕರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದ್ದಾರೆ.

ಸಿಬಿಐ ಮುಖ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಯುತ್ತಿದ್ದು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದಾರೆ. ಸಾವಿರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.ಈ ಸಮಯದಲ್ಲಿ ರಾಹುಲ್ ಗಾಂಧಿ ಸೇರಿ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಹುಲ್​ ಗಾಂಧಿ ಅವರೊಂದಿಗೆ ಕಾಂಗ್ರೆಸ್​ ಹಿರಿಯ ನಾಯಕರಾದ ಅಶೋಕ್​ ಗೆಹ್ಲೋಟ್​, ಅಹಮದ್​ ಪಟೇಲ್​, ಮೋತಿಲಾಲ್​ ವೋರಾ, ವೀರಪ್ಪ ಮೋಯ್ಲಿ, ಆನಂದ್​ ಶರ್ಮಾ, ಲೋಕತಾಂತ್ರಿಕ ಜನತಾ ದಳದ ನಾಯಕ ಶರದ್​ ಯಾದವ್​, ಸಿಪಿಐ ನಾಯಕ ಡಿ. ರಾಜಾ ಮತ್ತು ತೃಣಮೂಲ ಕಾಂಗ್ರೆಸ್​ನ ನಾಯಕ ನದೀಮುಲ್​ ಹಕ್​ ಪ್ರತಿಭಟನೆ ಭಾಗವಹಿಸಿದ್ದರು.

“ಮಧ್ಯರಾತ್ರಿ 2 ಗಂಟೆಗೆ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಬದಲಿಸಿರುವುದು ಸಂವಿಧಾನಕ್ಕೆ ಎಸಗಿದ ಅಪಚಾರ, ಮುಖ್ಯ ನ್ಯಾಯಾಧೀಶರಿಗೆ ಮಾಡಿದ ಅವಮಾನ ಹಾಗೂ ದೇಶದ ಜನತೆಗೆ ಮಾಡಿದ ದ್ರೋಹವಾಗಿದೆ.” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top