ಮನೋರಂಜನೆ

ಸಂಜನಾ ಬಳಿ ಇರುವ ಒಟ್ಟು ಆಸ್ತಿ ಎಷ್ಟು? ರವಿ ಶ್ರೀವತ್ಸ ಏಟಿಗೆ ಸಂಜನಾ ತಿರುಗೇಟು.

ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯಂತೆ ಎದ್ದಿರುವ #MeToo ಅಭಿಯಾನ ವಿವಾದದ ಕೇಂದ್ರ ಬಿಂದುವಾಗುತ್ತಿವೆ. ಇತ್ತೀಚೆಗಷ್ಟೆ ನಟಿ ಸಂಜನಾ ಗಲ್ರಾಣಿ ಅವರು ನಿರ್ದೇಶಕ ರವಿ ಶ್ರೀವತ್ಸ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ‘ಗಂಡ ಹೆಂಡತಿ’ ಸಿನಿಮಾದ ಶೂಟಿಂಗ್ ಸಮಯದಲ್ಲಿ ನಿರ್ದೇಶಕ ತನಗೆ ಮುಜುಗರವಾಗುವಂತೆ ಚುಂಬನ ಹಾಗೂ ಹಸಿಬಿಸಿ ದೃಶ್ಯಗಳಲ್ಲಿ ಅಭಿನಯಿಸಲು ತನ್ನ ಮೇಲೆ ಒತ್ತಡ ಹೇರಿದ್ದರು. ಅದಕ್ಕೆ ವಿರೋಧಿಸಿದಕ್ಕೆ ಅವರು ತನಗೆ ಬೆದರಿಕೆ ಹಾಕಿ 50ಕ್ಕೂ ಹೆಚ್ಚು ಚುಂಬನದ ದೃಶ್ಯಗಳನ್ನು ಚಿತ್ರೀಕರಿಸಿದ್ದರು. ಅದು ಅವರ ಮೊದಲ ಸಿನಿಮಾ, ಆಗ ಅವರಿಗೆ 16 ವರ್ಷವಾಗಿದ್ದ ಕಾರಣ ಏನು ಮಾಡಬೇಕೆಂದು ತೋಚದೆ ಸುಮ್ಮನೆ ಇದ್ದರು ಆರೋಪಿಸಿದ್ದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ನಿರ್ದೇಶಕ ರವಿ ಶ್ರೀವತ್ಸ “ನಟಿ ಸಂಜನಾ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ. 12 ವರ್ಷಗಳ ನಂತರ ಸುಮ್ಮನೆ ಆರೋಪ ಮಾಡುತ್ತಿದ್ದಾರೆ.” ಎಂದು ಫೇಸ್ಬುಕ್ ಮೂಲಕ ಹೇಳಿಕೊಂಡಿದ್ದರು. ಅಲ್ಲದೇ ಇಂದು ಸುದ್ದಿಗೋಷ್ಠಿ ನಡೆಸಿ ರವಿ ಶ್ರೀವತ್ಸ ಅವರು ನಟಿ ಸಂಜನಾ ಮಾಡಿರುವ ಆರೋಪಗಳಿಗೆ ಸ್ಪಷ್ಟನೆ ನೀಡಿ ಕೆಲ ಪ್ರಶ್ನೆ ಕೇಳಿದ್ದರು. “ಸಂಜನಾ ಅವರ ಹತ್ತಿರ ಈಗ ಕೋಟಿ ರೂ. ಆಸ್ತಿ ಇದೆ. ಅದಕ್ಕೆಲ್ಲಾ ಐಟಿ ರಿರ್ಟನ್ಸ್ ಸಲ್ಲಿಸಿದ್ದಾರಾ. ಅವರು ಈಗ ಜಾಗ್ವಾರ್ ಕಾರಿನಲ್ಲಿ ಓಡಾಡುತ್ತಾರೆ. ನಾನು ಈಗ ಮಾರುತಿ ಬೆಲೆನೋ ಕಾರಿನಲ್ಲಿ ಓಡಾಡುತ್ತಿದ್ದೇನೆ. ಅವರು ಐಶಾರಾಮಿ ಮನೆಯಲ್ಲಿ ಇರುತ್ತಾರೆ. ನಾನು 8 ಸಾವಿರ ಕೊಟ್ಟು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದೇನೆ.” ಎಂದು ಪ್ರಶ್ನಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿ ಖಾಸಗಿ ವಾಹಿನಿಯೊಂದಿಗೆ ಮಾತನಾಡಿದ ಸಂಜನಾ ರವಿ ಶ್ರೀವತ್ಸಗೆ ತಿರುಗೇಟು ನೀಡಿದ್ದಾರೆ. “ನನ್ನ ಆಸ್ತಿ ಬಗ್ಗೆ ನಾನೇ ಸಂಪೂರ್ಣವಾಗಿ ಎಲ್ಲರಿಗೂ ಹೇಳುತ್ತೇನೆ. ನನ್ನ ಹುಟ್ಟುಹಬ್ಬಕ್ಕೆ ನಾನು ಜಾಗ್ವಾರ್ ಖರೀದಿಸಿದೆ. ನನ್ನ ಹತ್ತಿರ BMW, ಹೋಂಡಾ ಸಿವಿಕ್, ವೆರ್ನಾ ಇದ್ದರೆ ತಂಗಿ ಹತ್ತಿರ ಆಡಿ ಕಾರಿದೆ. 100*100 ಮನೆ ಮಾತ್ರ ಇಲ್ಲ. ರಾಜನಕುಂಟೆಯಲ್ಲಿ ಸೈಟ್ ಇದೆ ಹಾಗೂ ಹೈದರಾಬಾದ್‍ನಲ್ಲಿ ಸೈಟ್ ಇದೆ. ನಾನು 45 ಸಿನಿಮಾಗಳಲ್ಲಿ ನಟಿಸಿದ್ದೇನೆ. ಪ್ರಭಾಸ್, ಪವನ್ ಕಲ್ಯಾಣ್, ಮೋಹನ್ ಲಾಲ್, ಮುಮ್ಮಟ್ಟಿ, ದರ್ಶನ್ ಅವರ ಜೊತೆಯಲ್ಲಿ ನಾನು ನಟಿಸಿದ್ದೇನೆ. ಅಲ್ಲದೇ 12 ವರ್ಷದಲ್ಲಿ 120 ಜಾಹೀರಾತು ಮಾಡಿದ್ದೇನೆ. ತೆಲುಗು ಕಾರ್ಯಕ್ರಮದಲ್ಲಿ ನಟಿಸುತ್ತಿದ್ದೇನೆ. ಆ ಕಾರ್ಯಕ್ರಮಕ್ಕೆ ಒಂದು ದಿನಕ್ಕೆ 1.5 ಲಕ್ಷ ರೂ. ಸಂಭಾವನೆ ಸಿಗುತ್ತದೆ. ಹೀಗಾಗಿ ನಾನು ಈ ಆಸ್ತಿಯನ್ನು ಸಂಪಾದಿಸಿದ್ದೇನೆ. ರವಿ 1 ಲಕ್ಷ ರೂ. ಸಾಲ ಬೇಕೆಂದು ಕೇಳಿದ್ದರು. ಆಗ ನಾನು ನೀವು ನನ್ನ ವೆಬ್ ಸೀರಿಸ್ ಸಿನಿಮಾ ಮಾಡಿದರೆ ಸಂಬಳವಾಗಿ ನಿಮಗೆ 1 ಲಕ್ಷ ನೀಡುತ್ತೇನೆ ಎಂದು ತಿಳಿಸಿದ್ದೆ ಎಂಬುದಾಗಿ ಸಂಜನಾ ಹೇಳಿದ್ದಾರೆ,

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top